ಮುರುಘಾ ಮಠದಲ್ಲಿ 47 ಫೋಟೋ ಕಳವು ಕೇಸ್: ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಆರೋಪಿಗಳು

| Updated By: ರಮೇಶ್ ಬಿ. ಜವಳಗೇರಾ

Updated on: Nov 09, 2022 | 4:50 PM

ಚಿತ್ರದುರ್ಗ ಮುರುಘಾ ಮಠದಲ್ಲಿನ 47 ಫೋಟೋ ಕಳವು ಪ್ರಕರಣ​ಕ್ಕೆ ಸಂಬಂಧಿಸಿದಂತೆ ವಿಚಾರಣೆ ವೇಳೆ ಆರೋಪಿಗಳು ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾರೆ.

ಮುರುಘಾ ಮಠದಲ್ಲಿ 47 ಫೋಟೋ ಕಳವು ಕೇಸ್: ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಆರೋಪಿಗಳು
ಚಿತ್ರದುರ್ಗದ ಮುರುಘಾ ಮಠ
Follow us on

ಚಿತ್ರದುರ್ಗ: ಮುರುಘಾಮಠದಲ್ಲಿ (chitradurga muruga mutt) 47 ಫೋಟೋ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳು ಪೊಲೀಸರಿಗೆ ಸ್ಪೋಟಕ ಮಾಹಿತಿ ನೀಡಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಮಠದ ಮಾಜಿ ಆಡಳಿತಾಧಿಕಾರಿ S.K.ಬಸವರಾಜನ್​ ಹೆಸರು ಬಾಯಿಬಿಟ್ಟಿದ್ದಾರೆ ಈ ಹಿನ್ನೆಲೆಯಲ್ಲಿ ಫೋಟೋ ಕಳ್ಳತನಕ್ಕೆ ಪ್ರಚೋದನೆ ನೀಡಿದ ಆರೋಪ ಮೇಲೆ ಪೊಲೀಸರು, ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್, ಪತ್ನಿ ಸೌಭಾಗ್ಯ ಬಂಧನಕ್ಕೆ ಬಲೆ ಬೀಸಿದ್ದಾರೆ.

ಚಿತ್ರದುರ್ಗದ ಮುರುಘಾ ಮಠದಲ್ಲಿ 47 ಫೋಟೋ ಕಳವು ಪ್ರಕರಣ: ಇಬ್ಬರ ಬಂಧನ

ಅ.6 ರಂದು ಚಿತ್ರದುರ್ಗದ ಮುರುಘಾಮಠದ ರಾಜಾಂಗಣದ ಗೋಡೆಗೆ ಹಾಕಿದ್ದ 47 ಫೋಟೋ ಕಳ್ಳತನವಾಗಿದ್ದವು, ಈ ಬಗ್ಗೆ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಹೊಸಹಳ್ಳಿ ಗ್ರಾ.ಪಂ ಸದಸ್ಯ ಮೋಹನಮೂರ್ತಿ ಅಲಿಯಾಸ್ ಸ್ವಾಮಿ, ಎಸ್ ಜೆ ಎಂ ಪಾಲಿಟೆಕ್ನಿಕ್ ಕಾಲೇಜು ಉಪನ್ಯಾಸಕ ಶಿವಾನಂದ ಸ್ವಾಮಿ ಎನ್ನುವರನ್ನು ನ.7ರಂದು ಬಂಧಿಸಿ ವಿಚಾರಣೆಗೊಳಪಡಿಸಿದ್ದರು.

ವಿಚಾರಣೆ ವೇಳೆ ಬಂಧಿತ ಆರೋಪಿಗಳು ಪೊಲೀಸರ ಮುಂದೆ ಮಠದ ಮಾಜಿ ಆಡಳಿತಾಧಿಕಾರಿ ಎಸ್ ಕೆ ಬಸವರಾಜನ್, ಪತ್ನಿ ಸೌಭಾಗ್ಯರ ಹೆಸರು ಹೇಳಿದ್ದಾರೆ. ಇದರಿಂದ ಫೋಟೋ ಕಳ್ಳತನಕ್ಕೆ ಪ್ರಚೋದನೆ ನೀಡಿದ ಆರೋಪ ಮೇಲೆ ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್, ಪತ್ನಿ ಸೌಭಾಗ್ಯರನ್ನು ಬಂಧಿಸಲು ಹುಡಕಾಡುತ್ತಿದ್ದಾರೆ. ಈಗಾಗಲೇ ಬಸವರಾಜನ್ ಮನೆಗೆ ತೆರಳಿ ಪೊಲೀಸು ಶೋಧ ನಡೆಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ