ಮುರುಘಾ ಮಠದಲ್ಲಿನ ಫೋಟೋ ಕಳ್ಳತನ ಕೇಸ್: ಮಾಜಿ ಶಾಸಕನನ್ನು 4 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

| Updated By: ರಮೇಶ್ ಬಿ. ಜವಳಗೇರಾ

Updated on: Nov 10, 2022 | 6:45 PM

47 ಫೋಟೋ ಕಳವು ಕೇಸ್: ಮುರುಘಾ ಮಠದ ಮಾಜಿ ಆಡಳಿತಾಧಿಕಾರಿಯನ್ನು 4 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.

ಮುರುಘಾ ಮಠದಲ್ಲಿನ ಫೋಟೋ ಕಳ್ಳತನ ಕೇಸ್: ಮಾಜಿ ಶಾಸಕನನ್ನು 4 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್
basavarajan
Follow us on

ಚಿತ್ರದುರ್ಗ: ಮುರುಘಾ ಮಠದಲ್ಲಿ (chitradurga muruga mutt) 47 ಫೋಟೋ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಮಾಜಿ ಆಡಳಿತಾಧಿಕಾರಿ, ಮಾಜಿ ಶಾಸಕ ಎಸ್.ಕೆ.ಬಸವರಾಜನ್ (basavarajan) ಅವರನ್ನು ಪೊಲೀಸರು ಬಂಧಿಸಿ ಕೋರ್ಟ್​ಗೆ ಹಾಜರುಪಡಿಸಿದ್ದು, 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಚಿತ್ರದುರ್ಗದ(chitradurga) 1ನೇ ಹೆಚ್ಚುವರಿ ನ್ಯಾಯಲಯ ಆದೇಶ ಹೊರಡಿಸಿದೆ.

10 ದಿನ ವಶಕ್ಕೆ ನೀಡುವಂತೆ ಕೋರ್ಟ್​ಗೆ ಪೊಲೀಸರು ಮನವಿ ಮಾಡಿದ್ದರು. ಆದ್ರೆ, ಇದಕ್ಕೆ S.K.ಬಸವರಾಜನ್ ಪರ ವಕೀಲರ ಆಕ್ಷೇಪ ವ್ಯಕ್ತಪಡಿಸಿದ್ದು, ಅಂತಿಮವಾಗಿ ಕೋರ್ಟ್ ಬಸವರಾಜನ್ ಅವರನ್ನ 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

ಮುರುಘಾ ಮಠದಲ್ಲಿ 47 ಫೋಟೋ ಕಳವು ಕೇಸ್: ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಆರೋಪಿಗಳು

ಅ.6 ರಂದು ಚಿತ್ರದುರ್ಗದ ಮುರುಘಾಮಠದ ರಾಜಾಂಗಣದ ಗೋಡೆಗೆ ಹಾಕಿದ್ದ 47 ಫೋಟೋ ಕಳ್ಳತನವಾಗಿದ್ದವು, ಈ ಬಗ್ಗೆ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಹೊಸಹಳ್ಳಿ ಗ್ರಾ.ಪಂ ಸದಸ್ಯ ಮೋಹನಮೂರ್ತಿ ಅಲಿಯಾಸ್ ಸ್ವಾಮಿ, ಎಸ್ ಜೆ ಎಂ ಪಾಲಿಟೆಕ್ನಿಕ್ ಕಾಲೇಜು ಉಪನ್ಯಾಸಕ ಶಿವಾನಂದ ಸ್ವಾಮಿ ಎನ್ನುವರನ್ನು ನ.7ರಂದು ಬಂಧಿಸಿ ವಿಚಾರಣೆಗೊಳಪಡಿಸಿದ್ದರು.

ವಿಚಾರಣೆ ವೇಳೆ ಬಂಧಿತ ಆರೋಪಿಗಳು ಪೊಲೀಸರ ಮುಂದೆ ಮಠದ ಮಾಜಿ ಆಡಳಿತಾಧಿಕಾರಿ ಎಸ್ ಕೆ ಬಸವರಾಜನ್, ಪತ್ನಿ ಸೌಭಾಗ್ಯರ ಹೆಸರು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಫೋಟೋ ಕಳ್ಳತನಕ್ಕೆ ಪ್ರಚೋದನೆ ನೀಡಿದ ಆರೋಪ ಮೇಲೆ ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಅವರನ್ನ ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:44 pm, Thu, 10 November 22