ಚಿತ್ರದುರ್ಗ ಮುರುಘಾಶ್ರೀ ವಿರುದ್ಧದ ಪೋಕ್ಸೋ ಪ್ರಕರಣ: 3ನೇ ಆರೋಪಿ ಪರಮಶಿವಯ್ಯಗೆ ಜಾಮೀನು
Chitradurga murugha mutt seer POCSO Case: ಚಿತ್ರದುರ್ಗದ ಮುರುಘಾಶ್ರೀ ವಿರುದ್ಧದ ಪೋಕ್ಸೋ ಪ್ರಕರಣದ ಮೂರನೇ ಆರೋಪಿ ಪರಮಶಿವಯ್ಯಗೆ ಜಾಮೀನು ದೊರೆತಿದೆ. ಹಲವು ತಿಂಗಳಿನಿಂದ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿರುವ ರಮಶಿವಯ್ಯ ಅಕ್ಟೋಬರ್ 17ರಂದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಗಳಿವೆ.
ಬೆಂಗಳೂರು/ಚಿತ್ರದುರ್ಗ, (ಅಕ್ಟೋಬರ್ 13): ಚಿತ್ರದುರ್ಗದ ಮುರುಘಾಶ್ರೀ ವಿರುದ್ಧದ ಪೋಕ್ಸೋ ಪ್ರಕರಣದ (Chitradurga murugha mutt seer POCSO Case) ಮೂರನೇ ಆರೋಪಿ ಪರಮಶಿವಯ್ಯಗೆ ಅವರಿಗೆ ಜಾಮೀನು (Bail) ಸಿಕ್ಕಿದೆ. ಚಿತ್ರದುರ್ಗದ ಮುರುಘಾಶ್ರೀ ಮಠದ ಕಾರ್ಯದರ್ಶಿಯಾಗಿದ್ದ ಪರಮಶಿವಯ್ಯಗೆ ಹೈಕೋರ್ಟ್ (Karnataka High Court) ಏಕಸದಸ್ಯ ಪೀಠ ಜಾಮೀನು ನೀಡಿ ಆದೇಶ ಹೊರಡಿಸಿದೆ. ಆರೋಪಿ ಪರ ವಕೀಲ ಕೆ ಬಿ ಕೆ ಸ್ವಾಮಿ ವಾದ ಮಂಡಿಸಿದ್ದು, ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿರುವ ಪರಮಶಿವಯ್ಯ , ಅಕ್ಟೋಬರ್ 17ರಂದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಗಳಿವೆ.
ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜೈಲು ಪಾಲಾಗಿರುವ ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಎಸ್ ಜೆಎಂ ವಿದ್ಯಾಪೀಠದ ಮಾಜಿ ಕಾರ್ಯದರ್ಶಿ ಪರಮಶಿವಯ್ಯ ಮೂರನೇ ಆರೋಪಿಯಾಗಿದ್ದು, ಇವರನ್ನು 2022ರ ಅಕ್ಟೋಬರ್ 28ರಂದು ಬಂಧಿಸಲಾಗಿತ್ತು.
ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಐವರು ಆರೋಪಿಗಳ ವಿರುದ್ಧ ಪೋಕ್ಸೊ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಆಗಸ್ಟ್ 28ರಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಪರಮಶಿವಯ್ಯ ಅವರನ್ನು ಎರಡು ತಿಂಗಳ ನಂತರ ಪೊಲೀಸರು ಬಂಧಿಸಿಸುವಲ್ಲಿ ಯಶಸ್ವಿಯಾಗಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:03 pm, Fri, 13 October 23