ಮುರುಘಾಶ್ರೀ ಪೋಕ್ಸೋ ಕೇಸ್​​: ಮನೆಯಿಂದ ನಾಪತ್ತೆಯಾಗಿದ್ದ ಸಂತ್ರಸ್ತೆ ಒಡನಾಡಿ ಸಂಸ್ಥೆಯಲ್ಲಿ ಪತ್ತೆ

| Updated By: ರಮೇಶ್ ಬಿ. ಜವಳಗೇರಾ

Updated on: May 28, 2024 | 5:56 PM

ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಸಂತ್ರಸ್ತ ಬಾಲಕಿ ನಾಪತ್ತೆಯಾಗಿದ್ದು, ಇದೀಗ ಒಡನಾಡಿ ಸಂಸ್ಥೆಯಲ್ಲಿ ಪ್ರತ್ಯಕ್ಷಳಾಗಿದ್ದಾಳೆ. ಚಿತ್ರದುರ್ಗ ಮುರುಘಾ ಮಠದ ಮಠಾಧೀಶ ಡಾ. ಶಿವಮೂರ್ತಿ ಶರಣರಿಂದ ಲೈಂಗಿಕ ದೌರ್ಜನ್ಯಕ್ಕೊಳಗಿ ದೂರು ನೀಡಿದ್ದ ಬಾಲಕಿ ಮನೆಯಿಂದ ನಾಪತ್ತೆಯಾಗಿದ್ದಳು. ಇದೀಗ ಬಂದ ಮಾಹಿತಿ ಪ್ರಕಾರ ಮೈಸೂರಿನ ಒಡನಾಡಿ ಎಂದು ತಿಳಿದುಬಂದಿದೆ.

ಮುರುಘಾಶ್ರೀ ಪೋಕ್ಸೋ ಕೇಸ್​​: ಮನೆಯಿಂದ ನಾಪತ್ತೆಯಾಗಿದ್ದ ಸಂತ್ರಸ್ತೆ ಒಡನಾಡಿ ಸಂಸ್ಥೆಯಲ್ಲಿ ಪತ್ತೆ
ಮುರುಘಾಶ್ರೀ
Follow us on

ಚಿತ್ರದುರ್ಗ, (ಮೇ 28): ನಾಮಪತ್ತೆಯಾಗಿದ್ದ ಚಿತ್ರದುರ್ಗದ ಮುರುಘಾ ಮಠದ(chitradurga murugha mutt swamiji,)  ಮಠಾಧೀಶ ಡಾ. ಶಿವಮೂರ್ತಿ ಶರಣರ ಪೋಕ್ಸೋ ಪ್ರಕರಣದ ಸಂತ್ರಸ್ತ ಬಾಲಕಿ ಪತ್ತೆಯಾಗಿದ್ದಾಳೆ. ​​ ಸಂತ್ರಸ್ತ ಬಾಲಕಿ ನಾಮಪತ್ತೆಯಾಗಿದ್ದಾಳೆ ಎಂದು ಆಕೆಯ ಚಿಕ್ಕಪ್ಪ ಮೇ 24ರಂದು ಮಹಿಳಾ ಠಾಣೆಗೆ ದೂರು ನೀಡಿದ್ದರು. ಆದ್ರೆ,  ಸಂತ್ರಸ್ತ ಬಾಲಕಿ, ಮೈಸೂರಿನ ಒಡನಾಡಿ ಸಂಸ್ಥೆಯಲ್ಲಿ ಪತ್ತೆಯಾಗಿದ್ದಾಳೆ.  ಈ ಬಗ್ಗೆ ಮೈಸೂರಿನ ಒಡನಾಡಿ ಸಂಸ್ಥೆಯು ಚಿತ್ರದುರ್ಗದ ಮಹಿಳಾ ಪೊಲೀಸ್ ಠಾಣೆಗೆ ಮಾಹಿತಿ ನೀಡಿದೆ. ಮುರುಘಾಶ್ರೀ ಬೆಂಬಲಿಗರಿಂದ ಸಂತ್ರಸ್ತೆ ಚಿಕ್ಕಪ್ಪನ ಮೂಲಕ ಬಾಲಕಿಗೆ ಒತ್ತಡ ಹಾಕುತ್ತಿದ್ದರಿಂದ ಆಕೆ ಮನೆಬಿಟ್ಟು ಹೋಗಿದ್ದಾಳೆ ಎಂದು ತಿಳಿದುಬಂದಿದೆ.

ಸಂತ್ರಸ್ತೆ ಬಾಲಕಿ ತಮ್ಮ ಬಳಿ ಬಂದಿದ್ದಾಳೆ ಎಂದು ಒಡನಾಡಿ ಸಂಸ್ಥೆ, ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಗೆ ಮಾಹಿತಿ ನೀಡಿದೆ. ಅಲ್ಲದೇ ಮುರುಘಾ ಶರಣರ ವಿರುದ್ಧದ ಪೋಕ್ಸೋ ಪ್ರಕರಣ ಸಂಬಂಧ​​ ಶ್ರೀಗಳ ಬೆಂಬಲಿಗರು ಸಂತ್ರಸ್ತೆ ಚಿಕ್ಕಪ್ಪನ ಮೂಲಕ ಬಾಲಕಿ ಮೇಲೆ ಒತ್ತಡ ಹೇರಲಾರಂಭಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಬಾಲಕಿ ಸಹ ಪೊಲೀಸರು, ಸಿಡಬ್ಲ್ಯುಸಿ ಎದುರು ತನ್ನ ಮೇಲೆ ಬರುತ್ತಿರುವ ಒತ್ತಡಗಳ ಬಗ್ಗೆ ಅಳಲು ತೋಡಿಕೊಂಡಿದ್ದಾಳೆ ಎನ್ನುವ ಮಾಹಿತಿ  ತಿಳಿದುಬಂದಿದೆ.

ಇದನ್ನೂ ಓದಿ: Chitradurga Murugha Mutt Swamiji: ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

ಮಠದ ಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪವನ್ನು ಹೊತ್ತಿರುವ ಮುರುಘಾ ಶ್ರೀ ಪ್ರಕರಣ ನ್ಯಾಯಾಲಯದಲ್ಲಿನ್ನೂ ವಿಚಾರಣೆಯ ಹಂತದಲ್ಲಿದೆ. ಏ. 22ರಂದು ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಗಳಿಗೆ ಹೈಕೋರ್ಟ್ ನೀಡಿದ್ದಂತ ಷರತ್ತು ಬದ್ದ ಜಾಮೀನಿಗೆ ನಾಲ್ಕು ತಿಂಗಳು ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಮುರುಘಾ ಶರಣರಿಗೆ ಸುಪ್ರೀಂ ಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಏಪ್ರಿಲ್ 29ರಂದು ಮಧ್ಯಾಹ್ನ 2.20ಕ್ಕೆ ಚಿತ್ರದುರ್ಗದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅಲ್ಲದೇ ಜಿಲ್ಲಾ ನ್ಯಾಯಾಲಯಕ್ಕೆ ಮುರುಘಾ ಮಠದ ಶಿವಮೂರ್ತಿ ಶರಣಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.