ಚಿತ್ರದುರ್ಗ: ಮುರುಘಾ ಶ್ರೀ ವಿರುದ್ಧ ದಾಖಲಾದ ಒಂದನೇ ಪೋಕ್ಸೋ ಪ್ರಕರಣದ ಜಾಮೀನು ಅರ್ಜಿ ವಜಾ

ಆಗಸ್ಟ್‌ 26 ಶುಕ್ರವಾರ ಮುರುಘಾಶ್ರೀಗಳ ವಿರುದ್ಧ ಮೈಸೂರಿನ ನಜರ್‌ಬಾದ್‌ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಸಂತ್ರಸ್ತ ಬಾಲಕಿಯರು ಒಡನಾಡಿ ಸಂಸ್ಥೆ ನೆರವು ಪಡೆದು ಕೇಸ್ ದಾಖಲಿಸಿದ್ದರು. ಬಳಿಕ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆ ಆಗಿತ್ತು.

ಚಿತ್ರದುರ್ಗ: ಮುರುಘಾ ಶ್ರೀ ವಿರುದ್ಧ ದಾಖಲಾದ ಒಂದನೇ ಪೋಕ್ಸೋ ಪ್ರಕರಣದ ಜಾಮೀನು ಅರ್ಜಿ ವಜಾ
ಮುರುಘಾ ಶ್ರೀ
Edited By:

Updated on: Jan 31, 2023 | 6:25 PM

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ (Murugha Mutt Shivamurthy Sharanara) ವಿರುದ್ಧ ದಾಖಲಾದ ಒಂದನೇ ಪೋಕ್ಸೋ ಪ್ರಕರಣ (POCSO Case) ಸಂಬಂಧ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 2ನೇ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ. ಒಂದನೇ ಪೋಕ್ಸೋ ಪ್ರಕರಣ ಸಂಬಂಧ ತನಿಖಾಧಿಕಾರಿಗಳು ಚಾರ್ಜ್​ಶೀಟ್ ಸಲ್ಲಿಸಿದ ಬಳಿಕ ಜಾಮೀನು ಕೋರಿ ನ್ಯಾಯಾಲಯಕ್ಕೆ ಮುರುಘಾಶ್ರೀ ಅರ್ಜಿ ಸಲ್ಲಿಸಿದ್ದರು. ಆದರೀಗ ಈ ಅರ್ಜಿಯನ್ನು ಕೋರ್ಟ್ ವಜಾಗೊಳಿಸುವ ಮೂಲಕ ಮುರುಘಾ ಶ್ರೀಗೆ ಮತ್ತೆ ಜೈಲೇ ಗತಿಯಾಗಿದೆ. ಅದಾಗ್ಯೂ, ಜಾಮೀನು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

ಇನ್ನು, ಮುರುಘಾಶ್ರೀ ವಿರುದ್ಧ ಷಡ್ಯಂತರ ಆರೋಪ ಸಂಬಂಧ ಪೊಲೀಸರು ಸಮರ್ಪಕ ತನಿಖೆ ನಡೆಸದೇ ಅಸಹಾಯಕರಾಗಿದ್ದಾರೆ. ಹೀಗಾಗಿ ಚಿತ್ರದುರ್ಗ ಗ್ರಾಮಾಂತರ ಠಾಣೆಯಿಂದ ತನಿಖೆ ವರ್ಗಾಯಿಸಲು ಕೋರಿ ಬಸವಪ್ರಭು ಸ್ವಾಮೀಜಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನಿನ್ನೆ (ಜ.30) ಹೈಕೋರ್ಟ್ ವಿಚಾರಣೆ ನಡೆಸಿತ್ತು. ಈ ವೇಳೆ ರಾಜ್ಯಸರ್ಕಾರದ ಪ್ರತಿಕ್ರಿಯೆ ಕೇಳಿ ಫೆಬ್ರವರಿ 6ಕ್ಕೆ ವಿಚಾರಣೆಯನ್ನು ಮುಂದೂಡಿದೆ. ತನಿಖೆಯನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯಿಂದ ವರ್ಗಾಯಿಸಿ ಹಿರಿಯ ಮಹಿಳಾ ಪೊಲೀಸ್ ಅಧಿಕಾರಿಯಿಂದ ತನಿಖೆ ನಡೆಸುವಂತೆ ಬಸವಪ್ರಭು ಸ್ವಾಮೀಜಿ ರಿಟ್ ಅರ್ಜಿಯಲ್ಲಿ ಕೋರಿದ್ದರು.

ಇದನ್ನೂ ಓದಿ: ಮುರುಘಾ ಶ್ರೀ ವಿರುದ್ಧ ಷಡ್ಯಂತರ ಪ್ರಕರಣ; ತನಿಖೆ ವರ್ಗಾವಣೆ ಬಗ್ಗೆ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್

ಪ್ರಕರಣದ ಹಿನ್ನಲೆ

ಆಗಸ್ಟ್‌ 26 ಶುಕ್ರವಾರ ಮುರುಘಾಶ್ರೀಗಳ ವಿರುದ್ಧ ಮೈಸೂರಿನ ನಜರ್‌ಬಾದ್‌ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಸಂತ್ರಸ್ತ ಬಾಲಕಿಯರು ಒಡನಾಡಿ ಸಂಸ್ಥೆ ನೆರವು ಪಡೆದು ಕೇಸ್ ದಾಖಲಿಸಿದ್ದರು. ಬಳಿಕ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆ ಆಗಿತ್ತು. ಪ್ರಕರಣ ಸಂಬಂಧ ಚಿತ್ರದುರ್ಗ ಪೊಲೀಸರು ಸೆಪ್ಟೆಂಬರ್ ತಿಂಗಳಲ್ಲಿ ಬಂಧಿಸಿದ್ದರು. ಚಿತ್ರದುರ್ಗದ ಮುರುಘಾ ಮಠದ ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ, ಶ್ರೀಗಳ ವಿರುದ್ಧ ಪೊಲೀಸರು ಲುಕ್‌ಔಟ್‌ ನೋಟಿಸ್ ಜಾರಿ ಮಾಡಿದ್ದರ ಬೆನ್ನಿಗೆ ಮುರುಘಾ ಮಠದ ಲೈಂಗಿಕ ಪ್ರಕರಣಗಳ ಹಿನ್ನಲೆಯಲ್ಲಿ ಮುರುಘಾ ಶ್ರೀಯನ್ನು ರಾತ್ರಿ ಬಂಧಿಸಲಾಗಿತ್ತು.

ಇನ್ನು, ತನಿಖೆ ನಡೆಸಿದ ತನಿಖಾಧಿಕಾರಿಗಳು ಮುರುಘಾ ಶ್ರೀ ವಿರುದ್ಧ 694 ಪುಟಗಳ ಚಾರ್ಜ್​ಶೀಟ್​​ನ್ನು ಅಕ್ಟೋಬರ್ 27ರಂದು ಚಿತ್ರದುರ್ಗ ನ್ಯಾಯಾಲಯಕ್ಕೆ ​ಸಲ್ಲಿಸಿದ್ದರು. ಪ್ರಕರಣದ ಇಬ್ಬರು ಬಾಲಕಿಯರಿಂದ ಪ್ರತ್ಯೇಕ ಹೇಳಿಕೆ ಪಡೆಯಲಾಗಿತ್ತು. ಹೀಗಾಗಿ 347 ಪುಟಗಳ ಎ, ಬಿ ಎಂದು 2 ಭಾಗಗಳಾಗಿ ಚಾರ್ಜ್​ಶೀಟ್ ಸಲ್ಲಿಸಿಕೆಯಾಗಿದೆ. ಚಿತ್ರದುರ್ಗದ ಡಿವೈಎಸ್​ಪಿ ಅನಿಲ್ ಕುಮಾರ್​ ನೇತೃತ್ವದಲ್ಲಿ ತನಿಖೆ ನಡೆದಿದೆ. ಸಂತ್ರಸ್ತ ಬಾಲಕಿಯರ ಪೈಕಿ ಒಬ್ಬರು ಪರಿಶಿಷ್ಟ ಜಾತಿ ವಿದ್ಯಾರ್ಥಿನಿಯಾಗಿದ್ದು, ಎಸ್​ಸಿ, ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯ ಕಲಂ ಅಳವಡಿಕೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:25 pm, Tue, 31 January 23