ಚಿತ್ರದುರ್ಗ: ಹಣ ಡಬಲ್​ ಮಾಡಿಕೊಡುವುದಾಗಿ ನಂಬಿಸಿ ನೂರಾರು ಜನರಿಂದ 4.79 ಕೋಟಿ ವಂಚನೆ

60 ದಿನದಲ್ಲಿ ಹಣ ಡಬಲ್​ ಮಾಡಿಕೊಡುವುದಾಗಿ ನಂಬಿಸಿ 106 ಜನರಿಂದ ಒಟ್ಟು 4.79 ಕೋಟಿ ವಂಚಿಸಿ ವಂಚಕ ಎಸ್ಕೇಪ್ ಆಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಈ ಬಗ್ಗೆ ವಂಚನೆಗೊಳಗಾದ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರಿನ ರೈಲ್ವೆ ನೌಕರ ರಮೇಶಪ್ಪ ಎಂಬುವವರು ಠಾಣೆಗೆ ದೂರು ನೀಡಿದ್ದಾರೆ. ಚಿತ್ರದುರ್ಗ‌ CEN ಠಾಣೆ ಸಿಪಿಐ ವೆಂಕಟೇಶ ನೇತೃತ್ವದಲ್ಲಿ ತನಿಖೆ ಮುಂದುವರೆದಿದೆ.

ಚಿತ್ರದುರ್ಗ: ಹಣ ಡಬಲ್​ ಮಾಡಿಕೊಡುವುದಾಗಿ ನಂಬಿಸಿ ನೂರಾರು ಜನರಿಂದ 4.79 ಕೋಟಿ ವಂಚನೆ
ಆರೋಪಿ ಕೋಡೆ ರಮಣಯ್ಯ
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಆಯೇಷಾ ಬಾನು

Updated on: Feb 15, 2024 | 8:02 AM

ಚಿತ್ರದುರ್ಗ, ಫೆ.15: ಹಣ ಅಂದ್ರೆ ಹೆಣ ಕೂಡ ಬಾಯಿ ಬಿಡುತ್ತೆ ಎಂಬ ಮಾತಿದೆ. ಏಕೆಂದರೆ ಜನ ಅಷ್ಟರ ಮಟ್ಟಿಗೆ ಹಣಕ್ಕೆ ಬೆಲೆ ಕೊಡುತ್ತಿದ್ದಾರೆ. ಆದರೇ ಜನರ ಅನಿವಾರ್ಯತೆಯನ್ನೇ ಬಂಡವಾಳ ಮಾಡಿಕೊಂಡ ವಂಚಕರು ಹಣವನ್ನು ಡಬಲ್ ಮಾಡಿಕೊಡುತ್ತೇವೆ ಎಂದು ಆಸೆ ಹುಟ್ಟಿಸಿ ಬಳಿಕ ಅವರ ಹಣ ಪಡೆದು ವಂಚನೆ (Money Double) ಮಾಡುತ್ತಿದ್ದಾರೆ. ರಾಜ್ಯದಲ್ಲಿ ಇಂತಹ ವಂಚಕರ ಜಾಲ ದೊಡ್ಡದಿದೆ. ಸದ್ಯ ಚಿತ್ರದುರ್ಗ ಜಿಲ್ಲೆಯಲ್ಲಿ ಕೋಟಿ ಕೋಟಿ ವಂಚಿಸಿರುವ ಘಟನೆ ನಡೆದಿದೆ(Cheating).

ಆಂಧ್ರ ಮೂಲದ ಕೋಡೆ ರಮಣಯ್ಯ ಎಂಬ ವ್ಯಕ್ತಿ ಕ್ರೌಡ್ ಕ್ಲಬ್ ಇಂಟರ್​​ನ್ಯಾಷನಲ್ ಕಂಪನಿ ಹೆಸರಲ್ಲಿ 60 ದಿನದಲ್ಲಿ ಹಣ ಡಬಲ್​ ಮಾಡಿಕೊಡುವುದಾಗಿ ನಂಬಿಸಿ ವಂಚನೆ ಮಾಡಿದ್ದಾನೆ. ಈ ಘಟನೆ ಸಂಬಂಧ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿ.15ರಂದು ದಾಖಲಾದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರಿನ ರೈಲ್ವೆ ನೌಕರ ರಮೇಶಪ್ಪ ಎಂಬುವವರು ಠಾಣೆಗೆ ದೂರು ನೀಡಿದ್ದಾರೆ. ಆರೋಪಿಗಳು ರಮೇಶಪ್ಪ, ಸಂಬಂಧಿಕರು ಸೇರಿ 106 ಜನರಿಗೆ ವಂಚನೆ ಮಾಡಿರುವುದು ಪತ್ತೆಯಾಗಿದೆ.

ಆರೋಪಿಗಳು ರಮೇಶಪ್ಪ ಅವರ ಬಳಿ 1 ಲಕ್ಷ 4 ಸಾವಿರ ಹಣ ಪಡೆದು ವಂಚನೆ ಮಾಡಿದ್ದಾರೆ. ಇನ್ನು ಇವರು 106 ಜನರಿಂದ ಒಟ್ಟು 4.79 ಕೋಟಿ ವಂಚಿಸಿದ್ದಾರೆ. ಚಿಕ್ಕಜಾಜೂರು ಠಾಣೆಯಿಂದ ಚಿತ್ರದುರ್ಗದ CEN ಠಾಣೆಗೆ ಕೇಸ್ ವರ್ಗಾವಣೆಯಾಗಿದ್ದು ಚಿತ್ರದುರ್ಗ‌ CEN ಠಾಣೆ ಸಿಪಿಐ ವೆಂಕಟೇಶ ನೇತೃತ್ವದಲ್ಲಿ ತನಿಖೆ ಮುಂದುವರೆದಿದೆ.

ಇದನ್ನೂ ಓದಿ: ವಂಚನೆ ಪ್ರಕರಣ: ನಿರ್ಮಾಪಕ ಬಂಡ್ಲ ಗಣೇಶ್​ಗೆ ಜೈಲು ಶಿಕ್ಷೆ

ವಿದ್ಯುತ್ ತಂತಿ ಘರ್ಷಣೆಯಿಂದ ಕಬ್ಬಿನ ಗದ್ದೆ ಭಸ್ಮ

ವಿದ್ಯುತ್ ತಂತಿಗಳ ಘರ್ಷಣೆಯಿಂದ ಬೆಂಕಿ ಅವಘಡ ಸಂಭವಿಸಿದ್ದು, 15 ಎಕರೆ ಕಬ್ಬು ಬೆಳೆ ನಾಶವಾಗಿದೆ. ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಘಟನೆ ನಡೆದಿದ್ದು, ಕಟಾವಿಗೆ ಬಂದಿದ್ದ ಬೆಳೆಬೆಂಕಿಗಾಹುತಿಯಾಗಿದೆ. ನಿಂಗಪ್ಪ ಮಸಳಿ, ಬಾಬು ಮಸಳಿ ಹಾಗೂ ಮಲ್ಲಪ್ಪ ಮಸಳಿ ಎಂಬ ರೈತರಿಗೆ ಸೇರಿದ್ದ ಕಬ್ಬು ನಾಶವಾಗಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸ ಪಟ್ಟರು. ಆದ್ರೆ, ಅಷ್ಟರಲ್ಲಿ ಬೆಳೆ ಸುಟ್ಟು ಕರಕಲಾಗಿತ್ತು. ಇದ್ರಿಂದ ಹೆಸ್ಕಾ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ರು. ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ