ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ; ಮೃತರ ಸಂಖ್ಯೆ 3ಕ್ಕೆ ಏರಿಕೆ, ಪ್ರಕರಣ ದಾಖಲು

| Updated By: Ganapathi Sharma

Updated on: Aug 02, 2023 | 3:42 PM

ವಾಟರ್​ಮ್ಯಾನ್​ ಸುರೇಶ್ ಅವರನ್ನು ಈಗಾಗಲೇ​ ವಿಚಾರಣೆ ಮಾಡಲಾಗಿದೆ. ಮತ್ತೆ ವಿಚಾರಣೆಗೆ ಕರೆದಾಗ ಬರುವಂತೆ ಸುರೇಶ್​ಗೆ ತಿಳಿಸಿದ್ದೇವೆ ಎಂದು ಎಸ್​​ಪಿ ಪರಶುರಾಮ್ ತಿಳಿಸಿದ್ದಾರೆ.

ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ; ಮೃತರ ಸಂಖ್ಯೆ 3ಕ್ಕೆ ಏರಿಕೆ, ಪ್ರಕರಣ ದಾಖಲು
ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿರುವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Follow us on

ಚಿತ್ರದುರ್ಗ: ಕಲುಷಿತ ನೀರು (contaminated water) ಸೇವನೆ ವಿಚಾರವಾಗಿ ಚಿತ್ರದುರ್ಗ (Chitradurga) ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ. ಈ ಮಧ್ಯೆ, ಜಿಲ್ಲೆಯ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಘಟನೆ ಬಗ್ಗೆ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್​​ಪಿ ಪರಶುರಾಮ್ ಅವರು ತಿಳಿಸಿದ್ದಾರೆ.

ಕಲುಷಿತ ನೀರಿನ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅಲ್ಲಿಂದ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ವಾಟರ್​ಮ್ಯಾನ್​ ಸುರೇಶ್ ಅವರನ್ನು ಈಗಾಗಲೇ​ ವಿಚಾರಣೆ ಮಾಡಲಾಗಿದೆ. ಮತ್ತೆ ವಿಚಾರಣೆಗೆ ಕರೆದಾಗ ಬರುವಂತೆ ಸುರೇಶ್​ಗೆ ತಿಳಿಸಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪೋಕ್ಸೊ ಕೇಸ್ ದಾಖಲಿಸಿದ ದ್ವೇಷಕ್ಕೆ ನೀರಿಗೆ ವಿಷ ಬೆರೆಸಲಾಗಿದೆ ಎಂಬ ಆರೋಪಗಳು ಕೇಳಿಬಂದಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

ದಲಿತ ಯುವಕನೊಬ್ಬನ ವಿರುದ್ಧ ಕಳೆದ ವರ್ಷ ಪೋಕ್ಸೋ ಕೇಸ್ ದಾಖಲಿಸಿರುವ ದ್ವೇಷಕ್ಕೆ ನೀರಿನ ಟ್ಯಾಂಕ್​ಗೆ ವಿಷ ಬೆರೆಸಿರುವ ಶಂಕೆ ವ್ಯಕ್ತವಾಗಿದೆ. ವಾಟರ್​ಮ್ಯಾನ್ ಟ್ಯಾಂಕ್​ನಲ್ಲಿ ವಿಷ ಹಾಕಿದ್ದಾನೆ ಎಂದು ಮೃತ ಮಂಜುಳಾ ಅವರ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದರು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಸಾವು ಪ್ರಕರಣ, ಪೋಕ್ಸೊ ಕೇಸ್ ದಾಖಲಿಸಿದ ದ್ವೇಷಕ್ಕೆ ನೀರಿಗೆ ವಿಷ ಹಾಕಿದ್ರಾ?

ಕಲುಷಿತ ನೀರು ಸೇವಿಸಿ ಒಟ್ಟು 3 ಮಂದಿ ಮೃತಪಟ್ಟಿದ್ದು, 42 ಜನ ಅಸ್ವಸ್ಥಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಈಗಾಗಲೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂಜಾಗೃತಾ ಕ್ರಮವಾಗಿ ಕವಾಡಿಗರಹಟ್ಟಿಗೆ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ. ಕುಡಿಯುವ ನೀರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದ್ದೇವೆ. ಕುಡಿಯುವ ನೀರು ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿದೆ. ಕವಾಡಿಗರಹಟ್ಟಿಯಲ್ಲಿ ತಾತ್ಕಾಲಿಕವಾಗಿ ಚಿಕಿತ್ಸಾ ಕೇಂದ್ರ ತೆರೆಯಲಾಗಿದೆ. ಮಂಜುಳಾ ಸಾವಿನ ಕಾರಣ ಏನೆಂಬುದು ಪರೀಕ್ಷೆ ಬಳಿಕ ತಿಳಿಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಚಿತ್ರದುರ್ಗದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ