ಕಲುಷಿತ ನೀರು ಸೇವಿಸಿ ದುರಂತ: ಮೃತರ ಸಂಖ್ಯೆ 6ಕ್ಕೆ ಏರಿಕೆ

Chitradurga News: ಆಗಷ್ಟ್ 1ರಿಂದ ಚಿತ್ರದುರ್ಗ ನಗರದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ ಈವರೆಗೆ ಐವರು ಸಾವಿಗೀಡಾಗಿದ್ದರು. ಆದರೆ ಇಂದು ಕರಿಬಸಪ್ಪ(35) ಎನ್ನುವವರು ಮೃತ ಪಟ್ಟಿದ್ದಾರೆ. ಹಾಗಾಗಿ ಸದ್ಯ ಮೃತರ ಸಂಖ್ಯೆ 6ಕ್ಕೆ ಏರಿಕೆ ಆಗಿದೆ.

ಕಲುಷಿತ ನೀರು ಸೇವಿಸಿ ದುರಂತ: ಮೃತರ ಸಂಖ್ಯೆ 6ಕ್ಕೆ ಏರಿಕೆ
ಮೃತ ಕರಿಬಸಪ್ಪ
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಗಂಗಾಧರ​ ಬ. ಸಾಬೋಜಿ

Updated on:Aug 07, 2023 | 4:20 PM

ಚಿತ್ರದುರ್ಗ ಆಗಸ್ಟ್​ 07: ಕೋಟೆನಾಡಿನ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು (contaminated water) ಸೇವಿಸಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆ ಆಗಿದೆ. ಚಿತ್ರದುರ್ಗ ತಾಲೂಕಿನ ಚಿಕ್ಕಪುರದ ಕರಿಬಸಪ್ಪ(35) ಎನ್ನುವವರು ಇಂದು ಮೃತ ಪಟ್ಟಿದ್ದಾರೆ. ಜು.30, 31ರಂದು ಕವಾಡಿಗರಹಟ್ಟಿ ಸಂಬಂಧಿಕರ ಮನೆಯಲ್ಲಿದ್ದು, ಆಗಸ್ಟ್ 1ರಿಂದ ವಾಂತಿ, ಭೇದಿಯಿಂದ ಅಸ್ವಸ್ಥಗೊಂಡಿದ್ದರು. ಬಳಿಕ ಚಿತ್ರದುರ್ಗ ಜಿಲ್ಲಾಸ್ಪತ್ರೆ, ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ.

ಸೂಕ್ತ ಪರಿಹಾರ ಕ್ರಮಕ್ಕೆ ಮನವಿ

ಕವಾಡಿಗರಹಟ್ಟಿಯಲ್ಲಿ ನೀರು, ಆಹಾರ ಸೇವೆನೆಯಿಂದ ಸಾವನ್ನಪ್ಪಿದ್ದಾರೆ ಎಂದು ಮೃತ ಕರಿಬಸಪ್ಪ ಸಹೋದರ ಮಲ್ಲಿಕಾರ್ಜುನ್ ಮಾಹಿತಿ ನೀಡಿದ್ದಾರೆ. ಡಿಹೆಚ್ಓ ಡಾ.ರಂಗನಾಥ್​ಗೆ ಈ ಬಗ್ಗೆ ಸಂಬಂಧಿಕರು ಮಾಹಿತಿ ನೀಡಿದ್ದಾರೆ. ಸೂಕ್ತ ಪರಿಹಾರ ಕ್ರಮಕ್ಕೆ ಮೃತನ ಸಂಬಂಧಿಕರಿಂದ ಮನವಿ ಮಾಡಿದ್ದು, ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಡಿಹೆಚ್ಓ ಡಾ.ರಂಗನಾಥ್​ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಐವರು ಸಾವು; ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ – ಗುಂಡೂರಾವ್

ಆಗಸ್ಟ್​ 1 ರಂದು ಚಿತ್ರದುರ್ಗ ನಗರದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಮರಣ‌ ಮೃದಂಗವೇ ಬಾರಿಸಿತ್ತು. ಕಲುಷಿತ ನೀರು ಸೇವಿಸಿದ ಪರಿಣಾಮ ಈವರೆಗೆ 6 ಜನರು ಮೃತಪಟ್ಪಿದ್ದಾರೆ. ಓರ್ವ ಗರ್ಭಿಣಿಯ ಗರ್ಭಪಾತ ಸಂಭವಿಸಿದೆ. 206ಜನ ವಾಂತಿ ಬೇಧಿಯಿಂದ ಅಸ್ವಸ್ಥರಾಗಿ‌ ಚಿಕಿತ್ಸೆ ಪಡೆದಿದ್ದು 59ಜನ ಡಿಸ್ಚಾರ್ಜ್ ಆಗಿದ್ದಾರೆ.

ಪ್ರಕರಣ ಮರು ತನಿಖೆಯ ಭರವಸೆಯ ನೀಡಿದ ಪೌರಾಡಳಿತ ಸಚಿವ ರಹೀಂಖಾನ್

ನಿನ್ನೆ ಪೌರಾಡಳಿತ ಸಚಿವ ರಹೀಂಖಾನ್ ಕವಾಡಿಗರಹಟ್ಟಿಗೆ ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಶಾಸಕ ಕೆ.ಸಿ.ವಿರೇಂದ್ರ, ಡಿಸಿ ದಿವ್ಯಪ್ರಭು, ಪೌರಾಯುಕ್ತ ಶ್ರೀನಿವಾಸ್ ಸಾಥ್ ನೀಡಿದ್ದರು. ಈ ವೇಳೆ ಪ್ರತಿಕ್ರಿಯಿಸಿದ ಸಚಿವ ರಹೀಂಖಾನ್, ಪ್ರಕರಣ ಮರು ತನಿಖೆಯ ಭರವಸೆ ನೀಡಿದರು. ಅಂತೆಯೇ ಅಧಿಕಾರಿಗಳ ನಿರ್ಲಕ್ಷ ಆಗಿದೆ ಎಂದು ಒಪ್ಪಿಕೊಂಡಿದ್ದು, ಪೂರ್ಣ ತನಿಖೆಯ ಬಳಿಕ ಪೌರಯುಕ್ತ ಸೇರಿ ಇತರೆ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ಕಲುಷಿತ ನೀರು ಸೇವನೆ ಪ್ರಕರಣ: ಅಸ್ವಸ್ಥಗೊಂಡವರ ಸಂಖ್ಯೆ 185ಕ್ಕೆ ಏರಿಕೆ

ಮೃತರ ಕುಟುಂಬಕ್ಕೆ ತಲಾ 25ಲಕ್ಷ ಪರಿಹಾರ ಮತ್ತು ಸರ್ಕಾರಿ ನೌಕರಿ

ನಟ ಚೇತನ್ ಕವಾಡಿಗರಹಟ್ಟಿಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು. ಬಳಿಕ ಪ್ರತಿಕ್ರಿಯಿಸಿ ಸರ್ಕಾರದ ವೈಫಲ್ಯವೇ ಕಾರಣ. ಪ್ರಕರಣ ಮುಚ್ಚಿ ಹಾಕುವ ಹುನ್ನಾರ ನಡೆದಿದೆ ಎಂದು ಕಿಡಿ ಕಾರಿದ್ದರು.

ಬಿಜೆಪಿ ಶಾಸಕ ಸಿ.ಟಿ.ರವಿ ಬಸವೇಶ್ವರ ಆಸ್ಪತ್ರೆಗೆ ಭೇಟಿ ನೀಡಿದ್ದರು. ಬಳಿಕ ಪ್ರತಿಕ್ರಿಯಿಸಿ ಈ ರೀತಿಯ ಅನೇಕ ಪ್ರಕರಣದ ಬಳಿಕವೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಸಾವಿನ ಬಳಿಕ ಪರಿಹಾರ ಕೊಡುವುದು ಒಂದು ಭಾಗ. ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ಮೃತರ ಕುಟುಂಬಕ್ಕೆ ತಲಾ 25ಲಕ್ಷ ಪರಿಹಾರ ಮತ್ತು ಸರ್ಕಾರಿ ನೌಕರಿ ಕೊಡಬೇಕೆಂದು ಆಗ್ರಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:18 pm, Mon, 7 August 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ