ಚಿತ್ರದುರ್ಗ: 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಶೌಚಾಲಯ ತೊಳೆಯುವ ಆ್ಯಸಿಡ್ ಎರಚಿದ ಆರೋಪ, ಮುಖ್ಯಶಿಕ್ಷಕ ಅಮಾನತು

ಚಿತ್ರದುರ್ಗ ತಾಲೂಕಿನ ಜೋಡಿಚಿಕ್ಕೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರಂಗಸ್ವಾಮಿ ಅವರು ಶೌಚಾಲಯ ತೊಳೆಯಲು ಬಳಸುವ ಆ್ಯಸಿಡ್ ಅನ್ನು ವಿದ್ಯಾರ್ಥಿನಿ ಮೇಲೆ ಎರಚಿದ ಆರೋಪ ಕೇಳಿ ಬಂದಿದ್ದು ಮುಖ್ಯಶಿಕ್ಷಕ ರಂಗಸ್ವಾಮಿ ಅಮಾನತುಗೊಳಿಸಿ DDPI ರವಿಶಂಕರರೆಡ್ಡಿ ಆದೇಶ ಹೊರಡಿಸಿದ್ದಾರೆ.

ಚಿತ್ರದುರ್ಗ: 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಶೌಚಾಲಯ ತೊಳೆಯುವ ಆ್ಯಸಿಡ್ ಎರಚಿದ ಆರೋಪ, ಮುಖ್ಯಶಿಕ್ಷಕ ಅಮಾನತು
ಮುಖ್ಯಶಿಕ್ಷಕ ರಂಗಸ್ವಾಮಿ, ಬಾಲಕಿಯ ಬೆನ್ನಿಗೆ ಗಾಯ
Edited By: ಆಯೇಷಾ ಬಾನು

Updated on: Oct 27, 2023 | 9:33 AM

ಚಿತ್ರದುರ್ಗ, ಅ.27: ವಿದ್ಯಾರ್ಥಿನಿ ಮೇಲೆ ಮುಖ್ಯ ಶಿಕ್ಷಕ ಆ್ಯಸಿಡ್ ದಾಳಿ (Acid Attack) ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೋಡಿಚಿಕ್ಕೇನಹಳ್ಳಿ ಸರ್ಕಾರಿ ಶಾಲೆ ಮುಖ್ಯಶಿಕ್ಷಕ ರಂಗಸ್ವಾಮಿ ಅಮಾನತುಗೊಳಿಸಿ DDPI ರವಿಶಂಕರರೆಡ್ಡಿ ಆದೇಶ ಹೊರಡಿಸಿದ್ದಾರೆ. ಚಿತ್ರದುರ್ಗ ತಾಲೂಕಿನ ಜೋಡಿಚಿಕ್ಕೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರಂಗಸ್ವಾಮಿ ಅವರು ಶೌಚಾಲಯ ತೊಳೆಯಲು ಬಳಸುವ ಆ್ಯಸಿಡ್ ಅನ್ನು ವಿದ್ಯಾರ್ಥಿನಿ ಮೇಲೆ ಎರಚಿದ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಮುಖ್ಯಶಿಕ್ಷಕನ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಸದ್ಯ ಈಗ ಅಮಾನತುಗೊಳಿಸಲಾಗಿದೆ.

ಘಟನೆ ಹಿನ್ನೆಲೆ

ಅ.25ರಂದು ದಸರಾ ರಜೆ ಮುಗಿಸಿ ಮಕ್ಕಳು ಖುಷಿಯಿಂದಲೇ ಚಿತ್ರದುರ್ಗ ತಾಲೂಕಿನ ಜೋಡಿಚಿಕ್ಕೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬಂದಿದ್ದರು. ಶಾಲೆಗೆ ಬಂದ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯ ಶಿಕ್ಷಕ ರಂಗಸ್ವಾಮಿ ವಿದ್ಯಾರ್ಥಿಗಳಿಗೆ ಶೌಚಾಲಯ ತೊಳೆಯಲು ಸೂಚಿಸಿದ್ದರಂತೆ. ಅದೇ ವೇಳೆ ಎರಡನೇ ತರಗತಿ ವಿದ್ಯಾರ್ಥಿನಿ ಸಿಂಚನಾ(8) ನೋಡಲೆಂದು ಅಲ್ಲಿಗೆ ತೆರಳಿದ್ದಾಳೆ. ಆಗ ಕೋಪಗೊಂಡ ಮುಖ್ಯ ಶಿಕ್ಷಕ ರಂಗಸ್ವಾಮಿ ಶೌಚಾಲಯ ತೊಳೆಯಲು ಇರಿಸಿದ್ದ ಆಸಿಡ್ ತೆಗೆದುಕೊಂಡು ಎರಚಿದ್ದರು. ಈ ಪರಿಣಾಮ ಸಿಂಚನಾಳ ಬೆನ್ನಿಗೆ ಗಾಯವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗಾಯಾಳು ಬಾಲಕಿಯ ತಾಯಿ ಪವಿತ್ರಾ ಆಗ್ರಹಿಸಿದ್ದರು. ಅದರಂತೆಯೇ ಈಗ ಮುಖ್ಯಶಿಕ್ಷಕ ರಂಗಸ್ವಾಮಿ ಅಮಾನತುಗೊಳಿಸಿ DDPI ರವಿಶಂಕರರೆಡ್ಡಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: Siddaramaiah: ಆಸಿಡ್ ದಾಳಿಗೆ ಒಳಗಾಗಿದ್ದ ಸ್ನಾತಕೋತ್ತರ ಪದವೀಧರೆ, ಸಿಎಂ ಸಚಿವಾಲಯದಲ್ಲಿ ಉದ್ಯೋಗ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಇನ್ನು ಗಾಯಾಳು ಸಿಂಚನಾಳನ್ನು ಮುಖ್ಯ ಶಿಕ್ಷಕ ರಂಗಸ್ವಾಮಿಯೇ ಜಿಲ್ಲಾಸ್ಪತ್ರೆಗೆ ಕರೆ ತಂದು ಚಿಕಿತ್ಸೆ ಕೊಡಿಸಿದ್ದರು. ಪ್ರಕರಣದ ಬಗ್ಗೆ ಕೇಳಿದ್ರೆ ದಸರಾ ರಜೆಯ ಬಳಿಕ ಇಂದು ಶಾಲೆ ಪುನರಾರಂಭಗೊಂಡಿದೆ. ಹೀಗಾಗಿ, ಕೆಲ ಹಿರಿಯ ವಿದ್ಯಾರ್ಥಿಗಳೊಂದಿಗೆ ಶಾಲೆ ಸ್ವಚ್ಚಗೊಳಿಸಲಾಯಿತು. ಶೌಚಾಲಯ ಸ್ವಚ್ಛತೆಗಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದೆವು. ಆಗ ಸಿಂಚನಾ ಅಲ್ಲಿಗೆ ಬಂದಿದ್ದಳು. ನೀನು ಹೋಗಮ್ಮ ಎನ್ನುವಷ್ಟರಲ್ಲಿ ಪಾಕೆಟ್ ಕಟ್ ಮಾಡಿದ ಪುಡಿ ಸಿಂಚನಾಳ ಮೇಲೆ ಬಿದ್ದಿತು. ಯಾವುದೇ ದುರುದ್ದೇಶದಿಂದ ಎರಚಿಲ್ಲ ಎಂದು ಮುಖ್ಯಶಿಕ್ಷಕ ರಂಗಸ್ವಾಮಿ ಅವರು ತಿಳಿಸಿದ್ದರು.

ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದಂತೆ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬಸವರಾಜ ಮುದನೂರ್

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Loading...
Unable to load recommendations.
Follow Us