ಚಿತ್ರದುರ್ಗ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರುಪಾಲು

ಐವರು ಯುವಕರು ಪಿಯುಸಿ ಪರೀಕ್ಷೆಯನ್ನು ಮುಗಿಸಿ ಊರಿಗೆ ಬಂದಿದ್ದರು. ರಜೆ ಇದ್ದ ಕಾರಣ ಸ್ನೇಹಿತರೆಲ್ಲ ಸೇರಿಕೊಂಡು ಗುಂಡಿ ಕೆರೆಯಲ್ಲಿ ಈಜಲು ಹೋಗಿದ್ದರು.

ಚಿತ್ರದುರ್ಗ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರುಪಾಲು
ಮೃತ ಯುವಕರು
Follow us
ಆಯೇಷಾ ಬಾನು
|

Updated on:Mar 29, 2023 | 7:33 AM

ಚಿತ್ರದುರ್ಗ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರುಪಾಲಾದ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ನಂದನಹೊಸೂರು ಗ್ರಾಮ ಬಳಿಯ ಕೆರೆಯಲ್ಲಿ ನಡೆದಿದೆ. ಒಟ್ಟು ಐವರು ಈಜಲು ಹೋಗಿದ್ದು ಮೂವರು ನೀರುಪಾಲಾಗಿ ಇಬ್ಬರು ಪ್ರಾಣಾಪಾಯದಿಂದ ಬದುಕುಳಿದಿದ್ದಾರೆ. ನಂದನಹೊಸೂರು ಗ್ರಾಮದ ನಿವಾಸಿ ಗಿರೀಶ್(18), ಹೊರಕೆರೆದೇವರಪುರ ಗ್ರಾಮದ ಸಂಜಯ್(18), ಕಣಿವೆ ಜೋಗಿಹಳ್ಳಿ ಗ್ರಾಮದ ಮನು(19) ಮೃತರು. ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಐವರು ಯುವಕರು ಪಿಯುಸಿ ಪರೀಕ್ಷೆಯನ್ನು ಮುಗಿಸಿ ಊರಿಗೆ ಬಂದಿದ್ದರು. ರಜೆ ಇದ್ದ ಕಾರಣ ಸ್ನೇಹಿತರೆಲ್ಲ ಸೇರಿಕೊಂಡು ಗುಂಡಿ ಕೆರೆಯಲ್ಲಿ ಈಜಲು ಹೋಗಿದ್ದರು. ಈ ವೇಳೆ ಕೆರೆಯ ಆಳ ತಿಳಿಯದೆ ಈಜಾಡಲು ಇಳಿದಿದ್ದು ಮುಳುಗಿದ್ದಾರೆ. ದಡ ಸೇರಲು ಸಾಧ್ಯವಾಗದೇ ಐವರಲ್ಲಿ ಮೂವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ಸಾವಿನ ಸುದ್ದಿ ಕೇಳುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಪೊಲೀಸ್‌ ಇಲಾಖೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಕೆರೆಯಿಂದ ಹೊರತೆಗೆದಿದ್ದು, ವಿಷಯ ತಿಳಿಯುತ್ತಿದ್ದಂತೆ ನೂರಾರು ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 195 ವಿದೇಶಿಗರನ್ನು ಬಂಧಿಸಿ ಗಡಿಪಾರು, ಆರೈಕೆ ಕೇಂದ್ರ ತೆರೆಯಲು ಸಿದ್ಧತೆ -ಪ್ರವೀಣ್ ಸೂದ್

ಬೆಂಗಳೂರಿನಲ್ಲಿ ಮಟಮಟ ಮಧ್ಯಾಹ್ನವೇ ಯುವಕನ ಮರ್ಡರ್‌

ಬೆಂಗಳೂರಿನ ಕೆ.ಆರ್‌.ಮಾರ್ಕೆಟ್‌ನ ನೆರಳಲ್ಲೇ ಇರೋ ನ್ಯೂ ತರಗು ಪೇಟೆ ಎಂಬ ಏರಿಯಾದಲ್ಲಿ ಕೊಲೆಯಾಗಿದೆ. ನ್ಯೂ ತರಗು ಪೇಟೆ ಗೋಡೌನ್‌ಗಳಿಂದ ತುಂಬಿರೋ ಪ್ರದೇಶ. ಬೆಂಗಳೂರಿನ ಹಲವು ಮಾರ್ಕೆಟ್‌ಗಳಿಗೆ ಇಲ್ಲಿನ ಗೋಡೌನ್‌ಗಳಿಂದಲೇ ಐಟಂಗಳು ರವಾನೆಯಾಗುತ್ತವೆ. ಜನರ ಜತೆ ನೇರವಾಗಿ ಇಲ್ಲಿ ವಹಿವಾಟು ಇರೋದಿಲ್ಲ. ಇದೇ ಕಾರಣಕ್ಕೆ ಇಲ್ಲಿ ಜನರ ಓಡಾಟ ಅಷ್ಟಕಷ್ಟೇ. ಇಂಥಾ ಸ್ಪಾಟ್‌ನಲ್ಲಿ ರಕ್ತ ಹರಿದಿತ್ತು. ರಮೇಶ್‌ ಅನ್ನೋ ನೇಪಾಳ ಮೂಲಕ ಯುವಕನ ಹೆಣ ಬಿದ್ದಿತ್ತು. ತರಗು ಪೇಟೆಯ ಶಾಪ್‌ವೊಂದರಲ್ಲಿ ಕೆಲಸ ಮಾಡ್ತಿದ್ದ ರಮೇಶ್‌ನನ್ನ, ಯಾವುದೋ ಐಟಂ ತರಿಸಲು ಮಾಲೀಕರು ಹೊರಗೆ ಕಳಿಸಿದ್ರು. ಹೀಗಾಗಿ ರಮೇಶ್ ತನ್ನ ಸ್ನೇಹಿತ ಇಂದ್ರೇಶ್ ಜತೆ ಸೇರಿಕೊಂಡು ಜೆಸಿ ನಗರಕ್ಕೆ ಹೋಗಿದ್ದ. ಹೀಗೆ ಅಲ್ಲಿಂದ ವಾಪಸ್ ಆಗುವಾಗ ಕೆ.ಆರ್‌. ಮಾರ್ಕೆಟ್‌ ಬಳಿ ಬಾರ್‌ವೊಂದರಲ್ಲಿ ಎಣ್ಣೆ ಬಿಡ್ಕೊಂಡಿದ್ರು.

ಹೀಗೆ ಬಾರ್‌ನಿಂದ ಇಬ್ರು ಹೊರಬಂದಿದ್ದಾರೆ. ಈ ವೇಳೆ ತರಗು ಪೇಟೆ ಕಡೆ ನಡೆದುಕೊಂಡು ಹೋಗುವಾಗ ದಾರಿ ಮಧ್ಯೆ ನಿಂತಿದ್ದವರನ್ನ ಇವ್ರು ದಿಟ್ಟಿಸಿ ನೋಡಿದ್ರಂತೆ ಅಷ್ಟೇ. ಯಾಕೇ ಗುರಾಯಿಸುತ್ತೀಯಾ ಅಂತಾ ಹಲ್ಲೆ ಮಾಡೋಕೆ ಮುಂದಾಗಿದ್ದಾರೆ. ಆಗ ಎಚ್ಚೆತ್ತ ಇಂದ್ರೇಸ್‌ ಅಲ್ಲಿಂದ ಎಸ್ಕೇಪ್ ಆಗಿದ್ರೆ, ರಮೇಶ್‌ಗೆ ಎತ್ತಾ ಹೋಗ್ಬೇಕು ಅಂತಾ ತಿಳಿದಿಲ್ಲ. ಅಲ್ಲೇ ಶಟರ್‌ ಎಳೆದಿದ್ದ ಶಾಪ್‌ಬಳಿ ನಿಂತಿದ್ದ.ಆಗ ಕ್ರಿಮಿಗಳು ರಮೇಶ್‌ ಕತ್ತಿಗೆ ಚಾಕು ಹಾಕಿ ಎಸ್ಕೇಪ್ ಆಗಿದ್ರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:33 am, Wed, 29 March 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್