AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಪೈಲಟ್​ ರಹಿತ ತಪಸ್ ವಿಮಾನ ಪತನ

ಚಿತ್ರದುರ್ಗ: ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಪೈಲಟ್​ ರಹಿತ ತಪಸ್ ವಿಮಾನ ಪತನ

ಬಸವರಾಜ ಮುದನೂರ್, ಚಿತ್ರದುರ್ಗ
| Edited By: ಆಯೇಷಾ ಬಾನು|

Updated on:Aug 20, 2023 | 9:34 AM

Share

ಚಳ್ಳಕೆರೆ ತಾಲೂಕಿನ ಕುದಾಪುರ ಬಳಿಯಿರುವ ಡಿಆರ್​ಡಿಒ ಸಿದ್ಧಪಡಿಸಿದ್ದ ಪೈಲಟ್ ರಹಿತ ವಿಮಾನ ಪತನಗೊಂಡಿದೆ. ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಡ್ರೋನ್​​ ಮಾದರಿಯ ತಪಸ್ ವಿಮಾನ ನಿಯಂತ್ರಣ ತಪ್ಪಿ ವದ್ದಿಕೆರೆ ಬಳಿಯ ಜಮೀನಿನಲ್ಲಿ ಬಿದ್ದಿದೆ.

ಚಿತ್ರದುರ್ಗ, ಆ.20: ಜಿಲ್ಲೆಯ ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದ ಬಳಿ ಪೈಲಟ್​ ರಹಿತ ತಪಸ್ ವಿಮಾನ(Tapas Flight) ಪತನಗೊಂಡಿದೆ. ಚಳ್ಳಕೆರೆ ತಾಲೂಕಿನ ಕುದಾಪುರ ಬಳಿಯಿರುವ ಡಿಆರ್​ಡಿಒ(DRDO) ಸಿದ್ಧಪಡಿಸಿದ್ದ ಪೈಲಟ್ ರಹಿತ ವಿಮಾನ ಪತನಗೊಂಡಿದೆ. ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಡ್ರೋನ್​​ ಮಾದರಿಯ ತಪಸ್ ವಿಮಾನ ನಿಯಂತ್ರಣ ತಪ್ಪಿ ವದ್ದಿಕೆರೆ ಬಳಿಯ ಜಮೀನಿನಲ್ಲಿ ಬಿದ್ದಿದೆ. ರೆಕ್ಕೆ ಕಳಚಿ ಪತನಗೊಂಡ ತಪಸ್ ವಿಮಾನ ನೋಡಲು ಜನ ಸೇರಿದ್ದಾರೆ.

Published on: Aug 20, 2023 09:30 AM
Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More