ಮುರುಘಾ ಶ್ರೀ ವಿರುದ್ಧದ ಆರೋಪ: ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್

ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣ ಸಂಬಂಧ ಸರ್ಕಾರ, ರಾಜಕೀಯ ಪಕ್ಷಗಳು ಹಸ್ತಕ್ಷೇಪ ಮಾಡದಂತೆ ಹಾಗೂ ನಿಸ್ಪಕ್ಷಪಾತ ನಡೆಸುವಂತೆ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ ಒತ್ತಾಯಿಸಿದ್ದಾರೆ.

ಮುರುಘಾ ಶ್ರೀ ವಿರುದ್ಧದ ಆರೋಪ: ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್
ಚಿತ್ರದುರ್ಗದ ಡಾ ಶಿವಮೂರ್ತಿ ಮುರುಘಾ ಶರಣರು
Follow us
Rakesh Nayak Manchi
| Updated By: Digi Tech Desk

Updated on:Aug 29, 2022 | 1:43 PM

ಬೆಂಗಳೂರು: ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಪ್ರಕರಣ ದಾಖಲಾದ ಸಂಬಂಧ ಸರ್ಕಾರ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ ಲೆಹರ್ ಸಿಂಗ್, ಪ್ರಕರಣದಲ್ಲಿ ಕರ್ನಾಟಕ ಸರ್ಕಾರ, ರಾಜಕೀಯ ಪಕ್ಷಗಳು ಹಸ್ತಕ್ಷೇಪ ಮಾಡಬಾರದು. ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ‌ನಡೆಯಬೇಕು. ಕರ್ನಾಟಕದಿಂದ ಹೊರಗೆ ಪ್ರಕರಣ ವರ್ಗಾಯಿಸಿದರೆ ನ್ಯಾಯ ಸಿಗುತ್ತದೆ ಎಂದಾದರೆ ಅದೂ ಪರಿಗಣನೆಯಾಗಬೇಕು ಎಂದು ಹೇಳಿದ್ದಾರೆ.

ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾದ ಹಿನ್ನೆಲೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನ್ಯಾಯಾಧೀಶ ಗಿರೀಶ್ ಅವರು ಬಾಲಮಂದಿರಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಮಠದಲ್ಲಿನ ಮಕ್ಕಳನ್ನ ಭೇಟಿ ಮಾಡಿ ಸಂತ್ರಸ್ತರಿಗೆ ಕಾನೂನು ಸಲಹೆ ನೀಡಲು ನೀಡಿದ್ದು, ಇದೇ ವೇಳೆ ಬಾಲಮಂದಿರದ ಸಿಬ್ಬಂದಿಗಳ ಬಳಿ ಮಾಹಿತಿ ಪಡೆದು ತೆರಳಿದ್ದಾರೆ.

ಇನ್ನೊಂದೆಡೆ ಚಿತ್ರದುರ್ಗಕ್ಕೆ ರಾಜ್ಯ ಮಕ್ಕಳ ಆಯೋಗದ ಅಧ್ಯಕ್ಷರು, ಸದಸ್ಯರ ಹಾಗೂ ಮಕ್ಕಳ ರಕ್ಷಣಾ ಸಮಿತಿ ಭೇಟಿ ನೀಡಿ ಸಂತ್ರಸ್ತ ಬಾಲಕಿಯರ ಬಳಿ ಮಾಹಿತಿ ಕಲೆಹಾಕಿಕೊಳ್ಳುವ ಸಾಧ್ಯತೆ ಇದೆ. ಅಲ್ಲದೆ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ಭೇಟಿ ನಂತರ ಸ್ಥಳ ಮಹಜರ ನಡೆಸಲು ಪೊಲೀಸ್ ಭದ್ರತೆಯೊಂದಿಗೆ ಕೃತ್ಯ ನಡೆದ ಸ್ಥಳಕ್ಕೆ ಕರೆದೊಯ್ಯುವ ಸಾಧ್ಯತೆ ಇದೆ. ಸ್ಥಳ ಮಹಜರ್ ನಂತರ ಸಂತ್ರಸ್ತರಿಂದ ನ್ಯಾಯಾಧೀಶರ ಮುಂದೆ 164 ಅಡಿಯಲ್ಲಿ ಹೇಳಿಕೆ ದಾಖಲಿಸಿಕೊಳ್ಳಲಾಗುತ್ತದೆ.

ಮಠಕ್ಕೆ ಗ್ರಾಮಾಂತರ ಠಾಣೆಯ ಸಿಪಿಐ ಭೇಟಿ, ಬಂಕಾಪುರದಲ್ಲಿ ಶ್ರೀಗಳು ವಶಕ್ಕೆ

ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾದ ಹಿನ್ನೆಲೆ ಮುರುಘಾಶ್ರೀ ಅಜ್ಞಾತ ಸ್ಥಳಕ್ಕೆ ತೆರಳಿದ ಮಾಹಿತಿ ಮೇರೆಗೆ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಬಾಲಚಂದ್ರನಾಯ್ಕ್ ಅವರು ಮಠಕ್ಕೆ ಭೇಟಿ ನೀಡಿ ಸಮಾಜದ ಮುಖಂಡರಿಂದ ಮಾಹಿತಿ ಪಡೆದಿದ್ದಾರೆ. ಶ್ರೀಗಳು ಅಜ್ಞಾತ ಸ್ಥಳಕ್ಕೆ ತೆರಳಿದ ಮಾಹಿತಿ ತಿಳಿಯುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಶ್ರೀಗಳನ್ನು ಬಂಕಾಪುರ ರಾಷ್ಟ್ರೀಯ ಹೆದ್ದಾರಿ ಬಳಿ ವಶಕ್ಕೆ ಪಡೆದು ಚಿತ್ರದುರ್ಗಕ್ಕೆ ಕರೆದೊಯ್ಯಲಾಗುತ್ತಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:41 pm, Mon, 29 August 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ