AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ 1.50 ಕೋಟಿ ರೂ. ದರೋಡೆ ಪ್ರಕರಣ; 10 ಮಂದಿ ಅರೆಸ್ಟ್, ಲಕ್ಷಾಂತರ ಮೌಲ್ಯದ ವಸ್ತುಗಳು ಜಪ್ತಿ

2023ರ ಡಿಸೆಂಬರ್ 03ರಂದು ಈಚಲನಾಗೇನಹಳ್ಳಿ ಬಳಿ ಅಡಿಕೆ ವ್ಯಾಪಾರಿ ಇರ್ಫಾನುಲ್ಲಾ & ಜಾಕೀರ್ ಅವರನ್ನು ಅಡ್ಡಗಟ್ಟಿ ಒಂದೂವರೆ ಕೋಟಿ ದರೋಡೆ ಮಾಡಲಾಗಿತ್ತು. ಈ ಪ್ರಕರಣವನ್ನು ಭೇದಿಸಿ ಪೊಲೀಸರು 10 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 63.25 ಲಕ್ಷ ಹಣ ವಶಕ್ಕೆ ಪಡೆಯಲಾಗಿದೆ.

ಚಿತ್ರದುರ್ಗ 1.50 ಕೋಟಿ ರೂ. ದರೋಡೆ ಪ್ರಕರಣ; 10 ಮಂದಿ ಅರೆಸ್ಟ್, ಲಕ್ಷಾಂತರ ಮೌಲ್ಯದ ವಸ್ತುಗಳು ಜಪ್ತಿ
ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಆಯೇಷಾ ಬಾನು

Updated on: Jan 02, 2024 | 9:27 AM

ಚಿತ್ರದುರ್ಗ, ಜ.02: ಚಿತ್ರದುರ್ಗದಲ್ಲಿ 1.50 ಕೋಟಿ ರೂ. ದರೋಡೆ (Robbery) ಆಗಿದ್ದ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸರು (Chitradurga Rural Police) ಭೇದಿಸಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರು 10 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 63.25 ಲಕ್ಷ ಹಣ ವಶಕ್ಕೆ ಪಡೆಯಲಾಗಿದೆ. ಹಾಗೂ ದರೋಡೆ ಮಾಡಿದ್ದ ಹಣದಲ್ಲಿ ಖರೀದಿಸಿದ್ದ 9 ಲಕ್ಷ ಮೌಲ್ಯದ ಕಾರು, 1.35 ಲಕ್ಷ ಮೌಲ್ಯದ ಬೈಕ್, ಕೃತ್ಯಕ್ಕೆ ಬಳಸಿದ್ದ ಕಾರು, 3 ಬೈಕ್ ವಶಕ್ಕೆ ಪಡೆಯಲಾಗಿದೆ.

2023ರ ಡಿಸೆಂಬರ್ 03ರಂದು ಈಚಲನಾಗೇನಹಳ್ಳಿ ಬಳಿ ಅಡಿಕೆ ವ್ಯಾಪಾರಿ ಇರ್ಫಾನುಲ್ಲಾ & ಜಾಕೀರ್ ಅವರನ್ನು ಅಡ್ಡಗಟ್ಟಿ ಒಂದೂವರೆ ಕೋಟಿ ದರೋಡೆ ಮಾಡಲಾಗಿತ್ತು. ಈ ಪ್ರಕರಣವನ್ನು ಭೇದಿಸಿ ಪೊಲೀಸರು 10 ಆರೋಪಿಗಳನ್ನು ಬಂಧಿಸಿದ್ದಾರೆ. ದಾವಣಗೆರೆಯ ಶಶಿಕಿರಣ್, ಮಂಜುನಾಥ್, ಪ್ರತಾಪ್ ಗೌಡ, ಕಿರಣ್, ಲಿಂಗರಾಜ್, ಬೆಂಗಳೂರಿನ ನವೀನ್, ಹುಸೇನ್, ಶ್ರೀನಿವಾಸ್, ಚಿತ್ರದುರ್ಗದ ಷಫಿವುಲ್ಲಾ, ಸಮೀರ್​​ ಬಾಷಾ ಬಂಧಿತರು. ಆರೋಪಿಗಳಿಂದ ಬೈಕ್, ಕಾರು, ನಗದು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಅಂತರ್ ರಾಜ್ಯ ದರೋಡೆಕೋರರ ಹೆಡೆ ಮುರಿ ಕಟ್ಟಿದ ಬೀದರ್ ಪೊಲೀಸ್: 94 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿ

ಘಟನೆ ವಿವರ

ಡಿಸೆಂಬರ್ 3 ರಂದು ಚಿತ್ರದುರ್ಗ ತಾಲ್ಲೂಕು ಹೊಸಹಳ್ಳಿ ಗ್ರಾಮದ ಅಡಿಕೆ ವ್ಯಾಪಾರಿ ಮಹಮ್ಮದ್ ಇರ್ಫಾನುಲ್ಲಾ ತನ್ನ ಸ್ನೇಹಿತ ಜಾಕೀರ್ ಅವರೊಂದಿಗೆ ಹೈದರಾಬಾದ್‍ಗೆ ಹೋಗಿ ಅಡಿಕೆ ವ್ಯಾಪಾರ ಮಾಡಿ 1.50 ಕೋಟಿ ರೂ ಹಣ ಪಡೆದುಕೊಂಡು, ಹೈದರಾಬಾದ್‍ನಿಂದ ಡಿಸೆಂಬರ್ 4 ರಂದು ಚಿತ್ರದುರ್ಗಕ್ಕೆ ಹಿಂತಿರುಗಿದ್ದರು. ಆದರೆ ಈಚಲನಾಗೇನಹಳ್ಳಿ ಬಳಿ ಕಾರನ್ನು ರಸ್ತೆಗೆ ಅಡ್ಡ ನಿಲ್ಲಿಸಿದ 4 ಜನ ದರೋಡೆಕೋರರು ಮಹಮ್ಮದ್ ಇರ್ಪಾನುಲ್ಲಾ ಮತ್ತು ಆತನ ಸ್ನೇಹಿತನ ಮೇಲೆ ಹಲ್ಲೆ ಮಾಡಿ ಚಾಕು ತೋರಿಸಿ ಬೆದರಿಸಿ ಅವರ ಬಳಿಯಿದ್ದ ಎರಡು ಹಣದ ಬ್ಯಾಗ್‍ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ದೂರು ದಾಖಲಾಗಿತ್ತು.

ಈ ಪ್ರಕರಣದಲ್ಲಿ ಕಳುವಾದ ಹಣ ಮತ್ತು ಆರೋಪಿತರನ್ನು ಪತ್ತೆ ಮಾಡಲು ಪೊಲೀಸ್ ಅಧೀಕ್ಷಕರವರ ಮಾರ್ಗದರ್ಶನದಲ್ಲಿ ಚಿತ್ರದುರ್ಗ ಉಪವಿಭಾಗದ ಉಪಾಧೀಕ್ಷಕರಾದ ಅನಿಲ್ ಕುಮಾರ್‌, ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ.ಮುದ್ದರಾಜ.ವೈ ಹಾಗೂ ಸಿಬ್ಬಂದಿ ಪ್ರಕರಣದ ತನಿಖೆ ಕೈಗೊಂಡಿದ್ದು, 10 ಮಂದಿ ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್