ಚಿತ್ರದುರ್ಗ 1.50 ಕೋಟಿ ರೂ. ದರೋಡೆ ಪ್ರಕರಣ; 10 ಮಂದಿ ಅರೆಸ್ಟ್, ಲಕ್ಷಾಂತರ ಮೌಲ್ಯದ ವಸ್ತುಗಳು ಜಪ್ತಿ

2023ರ ಡಿಸೆಂಬರ್ 03ರಂದು ಈಚಲನಾಗೇನಹಳ್ಳಿ ಬಳಿ ಅಡಿಕೆ ವ್ಯಾಪಾರಿ ಇರ್ಫಾನುಲ್ಲಾ & ಜಾಕೀರ್ ಅವರನ್ನು ಅಡ್ಡಗಟ್ಟಿ ಒಂದೂವರೆ ಕೋಟಿ ದರೋಡೆ ಮಾಡಲಾಗಿತ್ತು. ಈ ಪ್ರಕರಣವನ್ನು ಭೇದಿಸಿ ಪೊಲೀಸರು 10 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 63.25 ಲಕ್ಷ ಹಣ ವಶಕ್ಕೆ ಪಡೆಯಲಾಗಿದೆ.

ಚಿತ್ರದುರ್ಗ 1.50 ಕೋಟಿ ರೂ. ದರೋಡೆ ಪ್ರಕರಣ; 10 ಮಂದಿ ಅರೆಸ್ಟ್, ಲಕ್ಷಾಂತರ ಮೌಲ್ಯದ ವಸ್ತುಗಳು ಜಪ್ತಿ
ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ
Edited By: ಆಯೇಷಾ ಬಾನು

Updated on: Jan 02, 2024 | 9:27 AM

ಚಿತ್ರದುರ್ಗ, ಜ.02: ಚಿತ್ರದುರ್ಗದಲ್ಲಿ 1.50 ಕೋಟಿ ರೂ. ದರೋಡೆ (Robbery) ಆಗಿದ್ದ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸರು (Chitradurga Rural Police) ಭೇದಿಸಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರು 10 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 63.25 ಲಕ್ಷ ಹಣ ವಶಕ್ಕೆ ಪಡೆಯಲಾಗಿದೆ. ಹಾಗೂ ದರೋಡೆ ಮಾಡಿದ್ದ ಹಣದಲ್ಲಿ ಖರೀದಿಸಿದ್ದ 9 ಲಕ್ಷ ಮೌಲ್ಯದ ಕಾರು, 1.35 ಲಕ್ಷ ಮೌಲ್ಯದ ಬೈಕ್, ಕೃತ್ಯಕ್ಕೆ ಬಳಸಿದ್ದ ಕಾರು, 3 ಬೈಕ್ ವಶಕ್ಕೆ ಪಡೆಯಲಾಗಿದೆ.

2023ರ ಡಿಸೆಂಬರ್ 03ರಂದು ಈಚಲನಾಗೇನಹಳ್ಳಿ ಬಳಿ ಅಡಿಕೆ ವ್ಯಾಪಾರಿ ಇರ್ಫಾನುಲ್ಲಾ & ಜಾಕೀರ್ ಅವರನ್ನು ಅಡ್ಡಗಟ್ಟಿ ಒಂದೂವರೆ ಕೋಟಿ ದರೋಡೆ ಮಾಡಲಾಗಿತ್ತು. ಈ ಪ್ರಕರಣವನ್ನು ಭೇದಿಸಿ ಪೊಲೀಸರು 10 ಆರೋಪಿಗಳನ್ನು ಬಂಧಿಸಿದ್ದಾರೆ. ದಾವಣಗೆರೆಯ ಶಶಿಕಿರಣ್, ಮಂಜುನಾಥ್, ಪ್ರತಾಪ್ ಗೌಡ, ಕಿರಣ್, ಲಿಂಗರಾಜ್, ಬೆಂಗಳೂರಿನ ನವೀನ್, ಹುಸೇನ್, ಶ್ರೀನಿವಾಸ್, ಚಿತ್ರದುರ್ಗದ ಷಫಿವುಲ್ಲಾ, ಸಮೀರ್​​ ಬಾಷಾ ಬಂಧಿತರು. ಆರೋಪಿಗಳಿಂದ ಬೈಕ್, ಕಾರು, ನಗದು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಅಂತರ್ ರಾಜ್ಯ ದರೋಡೆಕೋರರ ಹೆಡೆ ಮುರಿ ಕಟ್ಟಿದ ಬೀದರ್ ಪೊಲೀಸ್: 94 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿ

ಘಟನೆ ವಿವರ

ಡಿಸೆಂಬರ್ 3 ರಂದು ಚಿತ್ರದುರ್ಗ ತಾಲ್ಲೂಕು ಹೊಸಹಳ್ಳಿ ಗ್ರಾಮದ ಅಡಿಕೆ ವ್ಯಾಪಾರಿ ಮಹಮ್ಮದ್ ಇರ್ಫಾನುಲ್ಲಾ ತನ್ನ ಸ್ನೇಹಿತ ಜಾಕೀರ್ ಅವರೊಂದಿಗೆ ಹೈದರಾಬಾದ್‍ಗೆ ಹೋಗಿ ಅಡಿಕೆ ವ್ಯಾಪಾರ ಮಾಡಿ 1.50 ಕೋಟಿ ರೂ ಹಣ ಪಡೆದುಕೊಂಡು, ಹೈದರಾಬಾದ್‍ನಿಂದ ಡಿಸೆಂಬರ್ 4 ರಂದು ಚಿತ್ರದುರ್ಗಕ್ಕೆ ಹಿಂತಿರುಗಿದ್ದರು. ಆದರೆ ಈಚಲನಾಗೇನಹಳ್ಳಿ ಬಳಿ ಕಾರನ್ನು ರಸ್ತೆಗೆ ಅಡ್ಡ ನಿಲ್ಲಿಸಿದ 4 ಜನ ದರೋಡೆಕೋರರು ಮಹಮ್ಮದ್ ಇರ್ಪಾನುಲ್ಲಾ ಮತ್ತು ಆತನ ಸ್ನೇಹಿತನ ಮೇಲೆ ಹಲ್ಲೆ ಮಾಡಿ ಚಾಕು ತೋರಿಸಿ ಬೆದರಿಸಿ ಅವರ ಬಳಿಯಿದ್ದ ಎರಡು ಹಣದ ಬ್ಯಾಗ್‍ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ದೂರು ದಾಖಲಾಗಿತ್ತು.

ಈ ಪ್ರಕರಣದಲ್ಲಿ ಕಳುವಾದ ಹಣ ಮತ್ತು ಆರೋಪಿತರನ್ನು ಪತ್ತೆ ಮಾಡಲು ಪೊಲೀಸ್ ಅಧೀಕ್ಷಕರವರ ಮಾರ್ಗದರ್ಶನದಲ್ಲಿ ಚಿತ್ರದುರ್ಗ ಉಪವಿಭಾಗದ ಉಪಾಧೀಕ್ಷಕರಾದ ಅನಿಲ್ ಕುಮಾರ್‌, ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ.ಮುದ್ದರಾಜ.ವೈ ಹಾಗೂ ಸಿಬ್ಬಂದಿ ಪ್ರಕರಣದ ತನಿಖೆ ಕೈಗೊಂಡಿದ್ದು, 10 ಮಂದಿ ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬಸವರಾಜ ಮುದನೂರ್, ಚಿತ್ರದುರ್ಗ

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us