AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದ ಗಾರ್ಮೆಂಟ್ಸ್​ಗಳ​ ಮೇಲೆ ದಾಳಿ: 6 ಬಾಂಗ್ಲಾದೇಶ ಪ್ರಜೆಗಳು ಪೊಲೀಸ್​ ವಶಕ್ಕೆ

ಚಿತ್ರದುರ್ಗದಲ್ಲಿ ಪೊಲೀಸರು ಖಾಸಗಿ ಗಾರ್ಮೆಂಟ್ಸ್​ಗಳ ಮೇಲೆ ದಾಳಿ ನಡೆಸಿ 15 ಶಂಕಿತ ಬಾಂಗ್ಲಾದೇಶಿ ನುಸುಳುಕೋರರನ್ನು ವಶಕ್ಕೆ ಪಡೆದಿದ್ದಾರೆ. 15 ಜನರಲ್ಲಿ ಆರು ಮಂದಿ ಅಕ್ರಮವಾಗಿ ನುಸುಳಿದ್ದಾರೆ ಎಂದು ತಿಳಿದುಬಂದಿದೆ. ಆರು ಮಂದಿ ಬಾಂಗ್ಲಾದೇಶಿಗರಲ್ಲಿ ಇಬ್ಬರ ಬಳಿ ಪಶ್ಚಿಮ ಬಂಗಾಳದ ಆಧಾರ್ ಕಾರ್ಡ್​ಗಳು ಪತ್ತೆಯಾಗಿವೆ.

ಚಿತ್ರದುರ್ಗದ ಗಾರ್ಮೆಂಟ್ಸ್​ಗಳ​ ಮೇಲೆ ದಾಳಿ: 6 ಬಾಂಗ್ಲಾದೇಶ ಪ್ರಜೆಗಳು ಪೊಲೀಸ್​ ವಶಕ್ಕೆ
ಶೇಕ್ ಶೈಪುರ್ ರೆಹಮಾನ್, ಸುಮನ್ ಹುಸೇನ್
ಬಸವರಾಜ ಮುದನೂರ್, ಚಿತ್ರದುರ್ಗ
| Edited By: ವಿವೇಕ ಬಿರಾದಾರ|

Updated on:Nov 19, 2024 | 9:15 AM

Share

ಚಿತ್ರದುರ್ಗ, ನವೆಂಬರ್​ 18: ಖಾಸಗಿ ಗಾರ್ಮೆಂಟ್ಸ್​ನಲ್ಲಿ (Garments) ಕೆಲಸ ಮಾಡುತ್ತಿದ್ದ ಆರು ಮಂದಿ ಬಾಂಗ್ಲಾದೇಶದ (Bangladesh) ಪ್ರಜೆಗಳನ್ನು ಚಿತ್ರದುರ್ಗ (Chitradurga) ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ. ಡಿವೈಎಸ್​ಪಿ ದಿನಕರ್ ನೇತೃತ್ವದಲ್ಲಿ ಸಿಪಿಐ ಗುಡ್ಡಪ್ಪ ಮತ್ತು ವೆಂಕಟೇಶ್​ ಅವರು ಇಂದು (ನ.18) ನಗರದಲ್ಲಿ ಗಾರ್ಮೆಂಟ್ಸ್​​​ಗಳ ಮೇಲೆ ದಾಳಿ ಮಾಡಿದರು. ಈ ವೇಳೆ ಒಟ್ಟು 15 ಮಂದಿ ಶಂಕಿತ ಬಾಂಗ್ಲಾ ನುಸುಳುಕೋರರು ಪೊಲೀಸರು ವಶಕ್ಕೆ ಪಡೆದವರು. ಇವರಲ್ಲಿಶೇಕ್​ ಶೈಪುರ ರೆಹಮಾನ್​, ಮಹಮ್ಮದ್​​ ಸುಮನ್​​ ಅಲಿ, ಮಜಾರುಲ್, ಅಜಿಜುಲ್ ಶೇಕ್, ಮಹಮ್ಮದ್ ಸಾಕೀಬ್ ಸಿಕ್ದಾರ್, ಸನೊವರ್ ಹುಸೇನ್ ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತಕ್ಕೆ ನುಸುಳಿರುವುದು ಪಕ್ಕಾ ಆಗಿದೆ.

ವಶಕ್ಕೆ ಪಡೆದವರನ್ನು ಪೊಲೀಸರು ಚಿತ್ರದುರ್ಗದ ಕೋಟೆ, ಗ್ರಾಮಾಂತರ ಠಾಣೆಯಲ್ಲಿ ಚಿತ್ರದುರ್ಗ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ರಂಜಿತ್ ಬಂಡಾರು ನೇತೃತ್ವದಲ್ಲಿ ವಿಚಾರಣೆ ನಡೆಯಿತು. ಈ ವೇಳೆ  ಬಾಂಗ್ಲಾದೇಶಿಗರ ಬಳಿ ಇದ್ದ ಕಾಗದಪತ್ರಗಳನ್ನು ಪರೀಶೀಲಿಸಿದಾಗ, ಆರೂ ಜನ ಬಾಂಗ್ಲಾದೇಶಕ್ಕೆ ಸೇರಿದ ಪ್ರಜೆಗಳಾಗಿದ್ದು, ಭಾರತಕ್ಕೆ ಬಂದು ಇಲ್ಲಿಯೇ ನೆಲೆಸುವ ಉದ್ದೇಶದಿಂದ ಸುಮಾರು ವರ್ಷಗಳ ಹಿಂದೆಯೇ ಅಕ್ರಮವಾಗಿ ಭಾರತಕ್ಕೆ ನುಸುಳಿ, ಪಶ್ಚಿಮ ಬಂಗಾಳ ರಾಜ್ಯಕ್ಕೆ ಬಂದಿದ್ದಾರೆ.

ನಕಲಿ ದಾಖಲೆಗಳು ಪತ್ತೆ

ಕೋಲ್ಕತ್ತ ನಗರದಲ್ಲಿ ನಕಲಿ ಆಧಾರ್ ಕಾರ್ಡ್, ಇತರೆ ದಾಖಲೆಗಳನ್ನು ಮಾಡಿಸಿಕೊಂಡು ಭಾರತದ ವಿವಿಧ ರಾಜ್ಯಗಳಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಈಗ, ಚಿತ್ರದುರ್ಗ ನಗರದಲ್ಲಿ ಕೆಲಸದ ಉದ್ದೇಶದಿಂದಾಗಿ ಬಂದಿದ್ದರಯ ಮಾಹಿತಿ ತಿಳಿದು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಾಂಗ್ಲಾದೇಶಿಗರಿಗೆ ಸಂಬಂಧಿಸಿದ ನಕಲಿ ಆಧಾರ್ ಕಾರ್ಡ್‌ ಗಳು, ಮತದಾರರ ಗುರುತಿನ ಚೀಟಿಗಳು, ಲೇಬರ್ ಕಾರ್ಡ್‌ಗಳು, ಬ್ಯಾಂಕ್ ಪಾಸ್ ಬುಕ್‌ಗಳು. ಪಾನ್ ಕಾರ್ಡ್‌ ಗಳು, ಹಾಗೂ ಒಂದು ಪಾಸ್‌ಪೋರ್ಟ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿವಿಧ ಜಿಲ್ಲೆಗಳಲ್ಲಿ ವಾಸಿಸುತ್ತಿದ್ದ ಬಾಂಗ್ಲಾದೇಶಿಗರು ಪೊಲೀಸರ​ ಅತಿಥಿ

ಕರ್ನಾಟಕದ ಪೊಲೀಸರು ಕಳೆದ ಹಲವು ತಿಂಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದು, ನಾಡಿನಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಬಾಂಗ್ಲಾದೇಶ ಪ್ರಜೆಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ. ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲಸಿದ್ದ ನಾಲ್ವರು ಬಾಂಗ್ಲಾದೇಶ ಪ್ರಜೆಗಳನ್ನು ಇದೇ ವರ್ಷ ಎಪ್ರಿಲ್​ನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇವರ ಬಳಿ ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ, ರೇಷನ್ ಕಾರ್ಡ್, ಆಯುಷ್ಮಾನ್ ಕಾರ್ಡ್, ಮಜ್ದೂರ್ ಕಾರ್ಡ್, ವೋಟರ್ ಐಡಿ ಪತ್ತೆಯಾಗಿದ್ದವು.

ಇದನ್ನೂ ಓದಿ: ಮೂವರು ಪಾಕಿಸ್ತಾನ ಪ್ರಜೆಗಳ ಬಂಧನ, ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು

ಅಕ್ಟೋಬರ್​ ತಿಂಗಳಲ್ಲಿ ಉಡುಪಿ ಪೊಲೀಸರು ಕಾರ್ಯಾಚರಣೆ ನಡೆಸಿ ಒಂಬತ್ತು ಮಂದಿ ಬಾಂಗ್ಲಾದೇಶ ಪ್ರಜೆಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಬಾಂಗ್ಲಾದೇಶಿಗರು ಮೀನುಗಾರಿಕಾ ಕಾರ್ಮಿಕರಾಗಿ ಉಡುಪಿಯ ಮಲ್ಪೆಯಲ್ಲಿ ನೆಲೆಸಿದ್ದರು. ಈ ಒಂಬತ್ತು ಮಂದಿ ಬಳಿ ನಕಲಿ ಭಾರತೀಯ ದಾಖಲೆಗಳು ಪತ್ತೆಯಾಗಿದ್ದವು. ಇಲ್ಲಿಯವರೆಗೆ ಇದು ಅತಿದೊಡ್ಡ ಕಾರ್ಯಾಚರಣೆಯಾಗಿತ್ತು.

ಇನ್ನು, ಶಿವಮೊಗ್ಗದ ಜಯನಗರ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿದ್ದ ಏಳು ಮಂದಿ ಬಾಂಗ್ಲಾದೇಶಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಏಳು ಜನರ ಬಳಿ ಮಂಗಳೂರು ವಿಳಾಸದ ಗುರುತಿನ ಚೀಟಿಗಳು ಪತ್ತೆಯಾಗಿದ್ದವು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:33 pm, Mon, 18 November 24

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More