ಕಳವಾದ 2 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಾರಸುದಾರರಿಗೆ ಒಪ್ಪಿಸಿದ ಚಿತ್ರದುರ್ಗ ಪೊಲೀಸರು

ಚಿತ್ರದುರ್ಗ ಡಿವೈಎಸ್​ಪಿ ಪಾಂಡುರಂಗ, ಹಿರಿಯೂರು ಡಿವೈಎಸ್​ಪಿ ರೋಷನ್ ಜಮೀರ್, ಚಳ್ಳಕೆರೆ ಡಿವೈಎಸ್​ಪಿ ಶ್ರೀಧರ್ ಸೇರಿ ಇತರೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಕಳವಾದ 2 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಾರಸುದಾರರಿಗೆ ಒಪ್ಪಿಸಿದ ಚಿತ್ರದುರ್ಗ ಪೊಲೀಸರು
ವಸ್ತುಗಳನ್ನು ವಾರಸುದಾರರಿಗೆ ಒಪ್ಪಿಸಿದ ಪೊಲೀಸರು
Follow us
TV9 Web
| Updated By: sandhya thejappa

Updated on: Dec 02, 2021 | 2:41 PM

ಚಿತ್ರದುರ್ಗ: ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕಳೆದ 2020ರ ನವೆಂಬರ್ನಿಂದ 2021ರ ನವೆಂಬರ್ ವರೆಗೆ ಅಂದರೆ ಒಂದು ವರ್ಷದಲ್ಲಿ ದಾಖಲಾಗಿದ್ದ 65 ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. ಕದ್ದ ವಸ್ತುಗಳನ್ನು ವಶಕ್ಕೆ ಪಡೆದಿದ್ದ ಪೊಲೀಸರು ನ್ಯಾಯಾಲಯದ ಅನುಮತಿ ಮೇರೆಗೆ ವಾರಸುದಾರರಿಗೆ ವಾಪಸ್ ಕೊಡುವ ನಿಟ್ಟಿನಲ್ಲಿ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದೇ ವೇಳೆ ಸುಮಾರು 2 ಕೋಟಿಗೂ ರೂ. ಹೆಚ್ಚು ಮೌಲ್ಯದ ವಿವಿಧ ವಸ್ತುಗಳನ್ನು ವಾರಸುದಾರರಿಗೆ ಒಪ್ಪಿಸಲಾಯಿತು.

ಚಿತ್ರದುರ್ಗ ಎಸ್​ಪಿ ಜಿ ರಾಧಿಕಾ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ 54 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, 1.39 ಕೋಟಿ ಮೌಲ್ಯದ ಅಡಿಕೆ ಹಾಗೂ ಶ್ರೀಗಂಧ, 3.81 ಲಕ್ಷ ನಗದು, 14.31ಲಕ್ಷ ಮೌಲ್ಯದ ಒಟ್ಟು 22 ದ್ವಿಚಕ್ರ ವಾಹನ, ಎರಡು ಎತ್ತುಗಳು ಸೇರಿ ವಿವಿಧ ವಸ್ತುಗಳನ್ನು ವಾರಸುದಾರರಿಗೆ ಹಿಂದುರಿಗಿಸಲಾಯಿತು. ಈ ವೇಳೆ ಕಳವಾಗಿದ್ದ ವಸ್ತುಗಳನ್ನು ಮರಳಿ ಪಡೆದ ವಾರಸುದಾರರು ಸಂತಸ ವ್ಯಕ್ತಪಡಿಸಿ ಪೊಲೀಸರಿಗೆ ಕೃತಜ್ಞತೆ ಸಲ್ಲಿಸಿದರು.

ಚಿತ್ರದುರ್ಗ ಡಿವೈಎಸ್​ಪಿ ಪಾಂಡುರಂಗ, ಹಿರಿಯೂರು ಡಿವೈಎಸ್​ಪಿ ರೋಷನ್ ಜಮೀರ್, ಚಳ್ಳಕೆರೆ ಡಿವೈಎಸ್​ಪಿ ಶ್ರೀಧರ್ ಸೇರಿ ಇತರೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಕೊವಿಡ್ ಸಮಯದಲ್ಲಿ ಕಳ್ಳರು ಚಿನ್ನ ಸರ ಕದ್ದು ಪರಾರಿಯಾಗಿದ್ದರು. ಕಳವಾದ ವಸ್ತು ಸಿಗುವ ಭರವಸೆ ಇರಲಿಲ್ಲ. ಆದರೂ ಧೈರ್ಯ ಮಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದೆವು. ಆದರೆ ಪೊಲೀಸರು ಕಳ್ಳರನ್ನು ಬಂಧಿಸಿ ಕದ್ದ ಸರ ವಶಕ್ಕೆ ಪಡೆದಿದ್ದಾರೆ. ಸದ್ಯ ಪೊಲೀಸರು ಕಳವಾದ ನಮ್ಮ ವಸ್ತು ನಮಗೆ ಒಪ್ಪಿಸಿದ್ದು, ಪೊಲೀಸರ ಮೇಲಿನ ನಂಬಿಕೆ ಹೆಚ್ಚಿಸಿದೆ ಅಂತ ನಾಗರತ್ನ ಹೇಳುತ್ತಾರೆ.

ಕಳವು ಪ್ರಕರಣಗಳನ್ನು ದಾಖಲಿಸಿಕೊಂಡ ನಮ್ಮ ಪೊಲೀಸ್ ಅಧಿಕಾರಿಗಳು ಪ್ರಕರಣ ಬೇಧಿಸುವಲ್ಲಿ ಶ್ರಮಿಸಿದ್ದಾರೆ. ಟೆಕ್ನಾಲಜಿ, ಇಂಟಲಿಜೆನ್ಸ್ ಬಳಸಿಕೊಂಡು ನಿರಂತರ ಪೆಟ್ರೋಲಿಂಗ್ ಮೂಲಕ ಕಳ್ಳರನ್ನು ಪತ್ತೆ ಮಾಡಿ ಕದ್ದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಕೋರ್ಟ್ ಅನುಮತಿ ಪಡೆದಿರುವ ವಸ್ತುಗಳನ್ನು ಮಾತ್ರ ಈಗ ವಾರಸುದಾರರಿಗೆ ನೀಡಿದ್ದೇವೆ. ಇನ್ನುಳಿದ ಕೆಲ ಪ್ರಕರಣಗಳಲ್ಲಿ ಪತ್ತೆಯಾದ ವಸ್ತುಗಳನ್ನು ಸಹ ವಾರಸುದಾರರಿಗೆ ನೀಡಲಾಗುವುದು. ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳ ಕಾರ್ಯ ಶ್ಲಾಘನೀಯ ಅಂತ ಎಸ್ಪಿ ಜಿ.ರಾಧಿಕಾ ಹೇಳಿದ್ದಾರೆ.

ಇದನ್ನೂ ಓದಿ

ಯಶ್​-ರಾಧಿಕಾ ಪಂಡಿತ್​ ಪುತ್ರಿ ಆಯ್ರಾ ಹುಟ್ಟುಹಬ್ಬ; 3ನೇ ವರ್ಷದ ಜನ್ಮದಿನ ಆಚರಿಸಿಕೊಂಡ ಸ್ಟಾರ್​ ಕಿಡ್​

ರೆಡ್​ ಕಾರ್ಪೆಟ್​ನಲ್ಲಿ ಒಟ್ಟಾಗಿ ಹೆಜ್ಜೆಹಾಕಿದ ರಾಹುಲ್- ಆಥಿಯಾ; ಈ ಹಿಂದಿನ ಬಾಲಿವುಡ್- ಕ್ರಿಕೆಟ್ ತಾರಾ ಜೋಡಿಗಳ ಚಿತ್ರಗಳು ಇಲ್ಲಿವೆ

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ