ಚಿತ್ರದುರ್ಗ: ಖಾಸಗಿ ಬಸ್​​​ ಪಲ್ಟಿ; ಮೂವರು ಸಾವು, 38ಕ್ಕೂ ಹೆಚ್ಚು ಜನರಿಗೆ ಗಾಯ

ಖಾಸಗಿ ಬಸ್​​​ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ಹೊಳಲ್ಕೆರೆ ಪಟ್ಟಣದ ಬಳಿಯ ಕಣಿವೆ ಪ್ರದೇಶದಲ್ಲಿ ನಡೆದಿದೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಕೂಡಲೇ ಗಾಯಾಳುಗಳನ್ನು ಹೊಳಲ್ಕೆರೆ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಸ್ಥಳಕ್ಕೆ ಹೊಳಲ್ಕೆರೆ ಪಿಎಸ್ ಐ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿತ್ರದುರ್ಗ: ಖಾಸಗಿ ಬಸ್​​​ ಪಲ್ಟಿ; ಮೂವರು ಸಾವು, 38ಕ್ಕೂ ಹೆಚ್ಚು ಜನರಿಗೆ ಗಾಯ
ಖಾಸಗಿ ಬಸ್​ ಪಲ್ಟಿ
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಕಿರಣ್ ಹನುಮಂತ್​ ಮಾದಾರ್

Updated on:Apr 07, 2024 | 11:30 AM

ಚಿತ್ರದುರ್ಗ, ಏ.07: ಜಿಲ್ಲೆಯ ಹೊಳಲ್ಕೆರೆ(Holalkere) ಪಟ್ಟಣದ ಬಳಿಯ ಕಣಿವೆ ಪ್ರದೇಶದಲ್ಲಿ ಖಾಸಗಿ ಬಸ್​​​ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ ಧಾರುಣ ಘಟನೆ ಇಂದು(ಏ.07) ಬೆಳಗ್ಗೆ 5 ಗಂಟೆ ಸುಮಾರಿಗೆ ನಡೆದಿದೆ. ಬಸ್‌ನಲ್ಲಿದ್ದ 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಕೂಡಲೇ ಗಾಯಾಳುಗಳನ್ನು ಹೊಳಲ್ಕೆರೆ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಬೆಂಗಳೂರಿನಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಖಾಸಗಿ ಬಸ್ ಇದಾಗಿದ್ದು, 50 ಜನ ಪ್ರಯಾಣಿಸುತ್ತಿದ್ದ ಮಾಹಿತಿ ದೊರೆತಿದೆ. ಸ್ಥಳಕ್ಕೆ ಹೊಳಲ್ಕೆರೆ ಪಿಎಸ್ ಐ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೊಳಲ್ಕೆರೆ ಪೊಲೀಸ್ ಠಾಣೆ‌ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮೂವರು ಮೃತರ ಪೈಕಿ ಇಬ್ಬರ ಗುರುತು ಪತ್ತೆ

ಇನ್ನು ಖಾಸಗಿ ಬಸ್​​​ ಪಲ್ಟಿಯಾಗಿ ಮೂವರು ಪ್ರಯಾಣಿಕರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಮೃತರ ಪೈಕಿ ಇಬ್ಬರ ಗುರುತು ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಗಣಪತಿ(40) ಹಾಗೂ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಮೂಲದ ಜಗದೀಶ್ ಮೃತರು. ಮತ್ತೊಬ್ಬ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

ಟೈರ್​ ಗೋದಾಮಿನಲ್ಲಿ ಅಗ್ನಿ ಅವಘಡ

ಬೆಂಗಳೂರು: ಚಾಮರಾಜಪೇಟೆಯ ಗವಿಪುರಂ ಬಳಿಯ ಟೈರ್​ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್​ ಯಾವುದೇ ಜೀವಹಾನಿ ಸಂಭವಿಸಿಲ್ಲ. ಮುಂಜಾನೆ 4 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದೆ. ಇನ್ನು ಟೈರ್, ಪೈಪ್ ,ಹಾಗೂ ಪ್ಲೆವುಡ್​ಗಳನ್ನು ಇರಿಸಿರುವ ಸುಮಾರು 3 ಗೋದಾಮಿಗೂ ಬೆಂಕಿ ಆವರಿಸಿದೆ. ಸದ್ಯ ಸಿವಿಲ್ ಡಿಫೆನ್ಸ್ ಹಾಗೂ ಸ್ಥಳೀಯರ ಜೊತೆಗೆ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುತ್ತಿದ್ದಾರೆ.

ಇದನ್ನೂ ಓದಿ:ಬೆಂಗಳೂರು: 2024ರ ಮೊದಲ ಎರಡು ತಿಂಗಳಲ್ಲಿ ಅಪಘಾತದಿಂದ 174 ಜನ ಸಾವು

ಅಕ್ರಮ ದಾಸ್ತಾನು ಗೋದಾಮಿನ ಮೇಲೆ ದಾಳಿ; 5.5 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ

ಹಾವೇರಿ: ರಾಣೆಬೆನ್ನೂರಿನ ಎಂ.ಜಿ.ರಸ್ತೆಯಲ್ಲಿರುವ ಸುರೇಶ್ ಕುಮಾರ್ ದೇವಸಾಯಿ ಎಂಬುವರಿಗೆ ಸೇರಿದ ಗೋದಾಮಿನ ಮೇಲೆ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳ ತಂಡ ದಾಳಿ ಮಾಡಿದ್ದು, ಅಕ್ರಮವಾಗಿ ಸಂಗ್ರಹಿಸಿದ್ದ 5.5 ಲಕ್ಷ ಮೌಲ್ಯದ 528 ಕುಕ್ಕರ್‌, 316 ಫ್ಯಾನ್‌, 126 ಮಿಕ್ಸಿ, 8 ಗ್ಯಾಸ್‌ಸ್ಟವ್​ನ್ನು ಜಪ್ತಿ ಮಾಡಲಾಗಿದೆ. ಈ ಕುರಿತು ರಾಣೆಬೆನ್ನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:29 am, Sun, 7 April 24

ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ
ಕರ್ನಾಟಕ ಬಿಜೆಪಿಯಲ್ಲಿ ಬದಲಾವಣೆ ಬಿರುಗಾಳಿ: ಯತ್ನಾಳ್ ಸ್ಫೋಟಕ ಹೇಳಿಕೆ
ಕರ್ನಾಟಕ ಬಿಜೆಪಿಯಲ್ಲಿ ಬದಲಾವಣೆ ಬಿರುಗಾಳಿ: ಯತ್ನಾಳ್ ಸ್ಫೋಟಕ ಹೇಳಿಕೆ
ತ್ರಿವಿಕ್ರಮ್ ಡೇಂಜರ್​ ಎಂದ ಭವ್ಯಾ ಗೌಡ; ರಾಧೆಗೆ ಈಗ ಬೇಡವಾದ ಕೃಷ್ಣ
ತ್ರಿವಿಕ್ರಮ್ ಡೇಂಜರ್​ ಎಂದ ಭವ್ಯಾ ಗೌಡ; ರಾಧೆಗೆ ಈಗ ಬೇಡವಾದ ಕೃಷ್ಣ