
ಚಿತ್ರದುರ್ಗ, ಜನವರಿ 10: ಬೀದರ್-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತವೊಂದು (Accident) ಸಂಭವಿಸಿದ್ದು, ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿರುವಂತಹ (death) ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹಿಂಡಸಕಟ್ಟೆ ಗ್ರಾಮದಲ್ಲಿ ನಡೆದಿದೆ. ವಿಶ್ವನಾಥ್(22), ನಂಜುಂಡಿ(23), ರಾಹುಲ್(23) ಮತ್ತು ಯಶ್ವಂತ್(22) ಮೃತರು. ಮೃತರು ಹಿರಿಯೂರು ತಾಲೂಕಿನ ನಂಜಯ್ಯನಕೊಟ್ಟಿಗೆ ಗ್ರಾಮದವರು. ಹಿರಿಯೂರು ಗ್ರಾಮಾಂತರ ಠಾಣೆ ಸಿಪಿಐ ಆನಂದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿ ಹೊಡೆದಿದ್ದು, ಹನ್ನೆರಡು ಜನರ ಪೈಕಿ 7 ಜನರಿಗೆ ಗಾಯಗಳಾಗಿರುವಂತಹ ಘಟನೆ ಬೆಳಗಾವಿ ತಾಲೂಕಿನ ಹಲಗಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಸವದತ್ತಿ ಯಲ್ಲಮ್ಮ ದೇಗುಲದಿಂದ ಬೆಳಗಾವಿ ಕಡೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ತುಮಕೂರು: ಭೀಕರ ಅಪಘಾತ, ಶಬರಿಮಲೆಗೆ ಹೋಗಿ ಬರುತ್ತಿದ್ದ ಯಲಬುರ್ಗಾ ಮೂಲದ ನಾಲ್ವರು ಸ್ಥಳದಲ್ಲೇ ಸಾವು
ಸದ್ಯ ಗಾಯಾಳುಗಳನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಹೊಂಡಾ ಸಿಟಿ ಕಾರು ಗುಂಡಿಗೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಕಪ್ಪಲ್ಲಿ ಗ್ರಾಮದ ಬಳಿ ಘಟನೆ ನಡೆದಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಕುಶಾಲ್ (25) ಮೃತ ಯುವಕ.
ಓರ್ವ ಯುವತಿ ಸೇರಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಇನ್ನು ಚಿಂತಾಮಣಿಯಿಂದ ಲಕ್ಷ್ಮೀಪುರ ಕ್ರಾಸ್ ಬಳಿ ರೆಸ್ಟೋರೆಂಟ್‌ಗೆ ತೆರಳಿ ಬಳಿಕ ವಾಪಸ್ ಆಗುವ ವೇಳೆ ಘಟನೆ ನಡೆದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:58 pm, Sat, 10 January 26