ಮುರುಘಾಶ್ರೀ ವಿರುದ್ಧ ಸುಳ್ಳು ದೂರು ಕೊಡಲು ಬಾಲಕಿಗೆ ಪ್ರಚೋದನೆ: ಮಠದ ಅಡುಗೆ ಸಹಾಯಕಿ ಅರೆಸ್ಟ್
ಮುರುಘಾಶ್ರೀ ವಿರುದ್ಧ ಸುಳ್ಳು ದೂರು ಕೊಡಲು ಬಾಲಕಿಗೆ ಪ್ರಚೋದನೆ ನೀಡಿದ ಪ್ರಕಣಕ್ಕೆ ಸಂಬಂಧಿಸಿದಂತೆ ಅಡುಗೆ ಸಹಾಯಕಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಚಿತ್ರದುರ್ಗ : ಚಿತ್ರದುರ್ಗದ ಮುರುಘಾ ಮಠದ (Chitradurga Muruga Mutt) ಶಿವಮೂರ್ತಿ ಶರಣರ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳ ವಿರುದ್ಧ ದೂರು ನೀಡುವಂತೆ ಬಾಲಕಿಗೆ ಕುಮ್ಮಕ್ಕು ನೀಡಿದ ಆರೋಪದ ಮೇರೆಗೆ ಚಿತ್ರದುರ್ಗ ಪೊಲೀಸರು (Chitradurga rural Police) ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ ಸುಳ್ಳು ದೂರಿಗೆ ಪಿತೂರಿ ಪ್ರಕರಣದಲ್ಲಿ ಮಠದ ಅಡುಗೆ ಸಹಾಯಕಿ ಇಂದು(ನ.11) ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಮುರುಘಾಶ್ರೀ ವಿರುದ್ಧ ಎರಡನೇ ಪೋಕ್ಸೋ ದೂರು ನೀಡಿದ್ದ ಈ ಮಹಿಳೆಯನ್ನು ಪೊಲೀಸರು ವಿಚಾರಣೆಗೆಂದು ನಿನ್ನೆ(ನ.10) ಮೈಸೂರಿನ ಒಡನಾಡಿ ಸಂಸ್ಥೆಯಿಂದ ಕರೆತಂದಿದ್ದರು. ಇಂದು ವಿಚಾರಣೆ ನಡೆಸಿದ ಬಳಿಕ ಅರೆಸ್ಟ್ ಮಾಡಿದ್ದಾರೆ.
ಮುರುಘಾ ಶ್ರೀಗಳ ಮತ್ತಷ್ಟು ಕಾಮಕೂಟ ಬಿಚ್ಚಿಟ್ಟ ಆಪ್ತರು: ಅಡುಗೆಭಟ್ಟ, ಸಹಾಯಕ, ಆಫೀಸ್ ಬಾಯ್ ಹೇಳಿಕೆ ಇಲ್ಲಿದೆ
ವ್ಯಕ್ತಿಯೊಬ್ಬ ಮುರುಘಾ ಮಠದ ಹಾಸ್ಟೆಲ್‌ನಲ್ಲಿ ಅಭ್ಯಾಸ ಮಾಡುತ್ತಿದ್ದ ಬಾಲಕಿಯೊಬ್ಬಳಿಗೆ ಕರೆ ಮಾಡಿ ಶ್ರೀಗಳ ವಿರುದ್ಧ ಸುಳ್ಳು ದೂರು ಕೊಡುವಂತೆ ಮಾತನಾಡಿದ್ದ ಆಡಿಯೊವೊಂದು ವೈರಲ್ ಆಗಿತ್ತು. ಈ ಸಂಬಂಧ ಮುರುಘಾಮಠದ ಉಸ್ತುವಾರಿ ಬಸವಪ್ರಭು ಶ್ರೀಗಳು ಚಿತ್ರದುರ್ಗದ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು, ಆ ವ್ಯಕ್ತಿ ಯಾರು ಎಂದು ಪತ್ತೆ ಹಚ್ಚಲು ಆಗ್ರಹಿಸಿದ್ದರು. ಈ ಸಂಬಂಧ ತನಿಖೆ ನಡೆಸಿದ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ ಜೆ ಎಂ ವಿದ್ಯಾಪೀಠದಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಅಥಣಿ ಮೂಲದ ಬಸವರಾಜೇಂದ್ರನನ್ನು ಬಂಧಿಸಿದ್ದಾರೆ. ಇದೀಗ ಅಡುಗೆ ಸಹಾಯಕಿಯನ್ನು ಅರೆಸ್ಟ್ ಮಾಡಿದ್ದಾರೆ.
ಈಗ ಮುರುಘಾ ಶರಣರ ವಿರುದ್ಧ ಸುಳ್ಳು ದೂರು ನೀಡುವಂತೆ ವ್ಯಕ್ತಿಯೊಬ್ಬರು ಕರೆ ಮಾಡಿರುವ ಆಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಸಂಭಾಷಣೆ 14 ನಿಮಿಷ 15 ಸೆಕೆಂಡ್ ಕಾಲ ಇದ್ದು, ಕರೆ ಮಾಡಿದ ವ್ಯಕ್ತಿ ಬಾಲಕಿಗೆ ಸುಳ್ಳು ದೂರು ನೀಡುವಂತೆ ಪ್ರಚೋದನೆ ಮಾಡಿದ್ದಲ್ಲದೆ, ಸಹಾಯ ಮಾಡುವುದಾಗಿ ಆಮಿಷವನ್ನೂ ಒಡ್ಡಿದ್ದಾನೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:38 pm, Fri, 11 November 22