ಚಿತ್ರದುರ್ಗ: ಗುಡ್ಡಗಾಡು ಪ್ರದೇಶದಲ್ಲಿ ಡ್ರೋನ್ ಮೂಲಕ ಸೀತಾಫಲ ಬೀಜಗಳ ಬಿತ್ತನೆ
ಚಿತ್ರದುರ್ಗ ಜಿಲ್ಲೆಯ ರಾಂಪುರ ಗ್ರಾಮದಲ್ಲಿ ಡ್ರೋನ್ ಮೂಲಕ ಸೀತಾಫಲ ಬೀಜ ಬಿತ್ತನೆ ಮಾಡಲಾಗುತ್ತಿದೆ. ಸುಮಾರು 1 ಲಕ್ಷ ಬೀಜಗಳನ್ನು ಬಿತ್ತನೆ ಮಾಡುವ ಗುರಿಯನ್ನು ಹೊಂದಲಾಗಿದೆ.
ಚಿತ್ರದುರ್ಗ: ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದಲ್ಲಿ ಡ್ರೋನ್ ಮೂಲಕ ಸೀತಾಫಲ ಬೀಜ ಬಿತ್ತನೆ ಮಾಡಲಾಗಿದೆ. ಗ್ರಾಮದ ಬಳಿಯ ಜಟ್ಟಂಗಿ ರಾಮೇಶ್ವರ ಗುಡ್ಡಗಾಡು ಪ್ರದೇಶದಲ್ಲಿ ಡಿಕೆಆರ್ ಗ್ರೂಪ್ನಿಂದ ಸೀತಾಫಲ ಬೀಜ ಬಿತ್ತನೆ ಕಾರ್ಯಕ್ರಮ ನಡೆಯಿತು. ಈ ಗುಡ್ಡಗಾಡು ಪ್ರದೇಶದಲ್ಲಿ ಒಟ್ಟು 1 ಲಕ್ಷ ಸೀತಾಫಲ ಬೀಜ ಬಿತ್ತನೆ ಗುರಿ ಹೊಂದಲಾಗಿದೆ.