ಚಿತ್ರದುರ್ಗದಲ್ಲಿ ವಿದ್ಯುತ್ ತಂತಿ ತಗುಲಿ ಅವಘಡ: ಮೂವರು ಸಾವು

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕಾಳಘಟ್ಟ ಗ್ರಾಮದ ಬಳಿ ವಿದ್ಯುತ್ ತಂತಿ ತಗುಲಿ ಮೂವರು ಕಾರ್ಮಿಕರು ಮೃತಪಟ್ಟಿರುವಂತಹ ಘಟನೆ ನಡೆದಿದೆ. ಗಂಭೀರ ಗಾಯಗೊಂಡಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.

ಚಿತ್ರದುರ್ಗದಲ್ಲಿ ವಿದ್ಯುತ್ ತಂತಿ ತಗುಲಿ ಅವಘಡ: ಮೂವರು ಸಾವು
ಫಾರುಕ್, ನಜೀರ್, ಶ್ರೀನಿವಾಸ್
Edited By:

Updated on: Jul 23, 2025 | 2:36 PM

ಚಿತ್ರದುರ್ಗ, ಜುಲೈ 23: ವಿದ್ಯುತ್ ತಂತಿ ತಗುಲಿ (Electric shock) ಮೂವರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕಾಳಘಟ್ಟ ಗ್ರಾಮದ ಬಳಿ ನಡೆದಿದೆ. ದಾವಣಗೆರೆ ಮೂಲದ ಕಾರ್ಮಿಕರಾದ ನಜೀರ್(30), ಫಾರುಕ್(30) ಮತ್ತು ಹೊಳಲ್ಕೆರೆ ತಾಲೂಕಿನ ಗ್ಯಾರೆಹಳ್ಳಿಯ ಶ್ರೀನಿವಾಸ್(35) ಮೃತರು. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಶ್ರೀನಿವಾಸ್​​ ಎಂಬುವವರು ತೋಟದಲ್ಲಿ ಕಬ್ಬಿಣದ ಕಂಬ ನೆಡುವ ವೇಳೆ ವಿದ್ಯುತ್ ತಂತಿ ತಗುಲಿ ದುರಂತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮನೆ ಜವಾಬ್ದಾರಿ ಹಾಗೂ ಮಾನಸಿಕ ಖಿನ್ನತೆಯಿಂದ ಯುವಕ ಆತ್ಮಹತ್ಯೆ

ಮನೆ ಜವಾಬ್ದಾರಿ ಹಾಗೂ ಮಾನಸಿಕ ಖಿನ್ನತೆಯಿಂದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನೆಲಂಮಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಮಾಕಳಿಯಲ್ಲಿ ನಡೆದಿದೆ. ತರುಣ್ (19) ಮೃತ ಯುವಕ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ
ಬಿಕ್ಲು ಶಿವ ಕೊಲೆ ಕೇಸ್: ಹತ್ಯೆಗೆ ಪ್ರಮುಖ ಕಾರಣ ಪತ್ತೆ ಮಾಡಿದ ಪೊಲೀಸರು!
ವಿದ್ಯುತ್ ತಂತಿ ತಗುಲಿ ಒಂದೇ ಗ್ರಾಮದ ಮೂವರು ರೈತರು ಸಾವು
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು

ಇದನ್ನೂ ಓದಿ: ವಿದ್ಯುತ್ ತಂತಿ ತಗುಲಿ ಒಂದೇ ಗ್ರಾಮದ ಮೂವರು ರೈತರು ಸಾವು, ಮುಗಿಲು ಮುಟ್ಟಿದ ಆಕ್ರಂದನ

ತರುಣ್​​ ಎಸ್​​ಎಸ್​​ಎಲ್​​ಸಿಯಲ್ಲಿ ಟಾಪರ್ ಆಗಿದ್ದ. ಮನೆ ಜವಬ್ದಾರಿ ಹಿನ್ನೆಲೆ ಕಾಲೇಜು ಅರ್ಧಕ್ಕೆ ಬಿಟ್ಟು ಕೆಲಸಕ್ಕೆ ಸೇರಿದ್ದ. ಕಳೆದ ಆರು ತಿಂಗಳ ಹಿಂದೆ ತರುಣ್ ತಂದೆ ಮೃತಪಟ್ಟಿದ್ದರು. ಮನೆ ಜವಬ್ದಾರಿ ಹೆಗಲ ಮೇಲೆ ಹೊತ್ತಿದ್ದ ತರುಣ್, ಈ ಹಿನ್ನೆಲೆ ಮಾನಸಿಕವಾಗಿ ಕುಗ್ಗಿದ್ದ. ಹೀಗಾಗಿ ನೇಣಿಗೆ ಶರಣಾಗಿದ್ದಾನೆ.

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಚಾಲಕ ಸಾವು

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮಂಚದೇವನಹಳ್ಳಿಯಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಅರುಣ್(38) ಮೃತ ಚಾಲಕ. ತಡರಾತ್ರಿ ಸ್ನೇಹಿತರ ಜೊತೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬೈಲುಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:48 pm, Wed, 23 July 25