ಚಿತ್ರದುರ್ಗ ಕಲುಷಿತ ನೀರು ಸೇವನೆ ಪ್ರಕರಣ: ಅಸ್ವಸ್ಥಗೊಂಡವರ ಸಂಖ್ಯೆ 185ಕ್ಕೆ ಏರಿಕೆ

ಚಿತ್ರದುರ್ಗ ಹೊರವಲಯದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿ ಐವರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ವಸ್ಥಗೊಂಡವರ ಸಂಖ್ಯೆ 185ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ ಕಲುಷಿತ ನೀರು ಸೇವನೆ ಪ್ರಕರಣ: ಅಸ್ವಸ್ಥಗೊಂಡವರ ಸಂಖ್ಯೆ 185ಕ್ಕೆ ಏರಿಕೆ
ಕಲುಷಿತ ನೀರು
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ವಿವೇಕ ಬಿರಾದಾರ

Updated on: Aug 05, 2023 | 9:38 AM

ಚಿತ್ರದುರ್ಗ: ಕಲುಷಿತ ನೀರು ಸೇವಿಸಿ (Contaminated water) ಐವರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ವಸ್ಥಗೊಂಡವರ ಸಂಖ್ಯೆ 185ಕ್ಕೆ ಏರಿಕೆಯಾಗಿದೆ. ಓರ್ವ ಗರ್ಭಿಣಿಯ ಗರ್ಭಪಾತವಾಗಿದೆ. 25 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 155 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿತ್ರದುರ್ಗ ಹೊರವಲಯದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಜುಲೈ 31ರಂದು ಕಲುಷಿತ ನೀರು ಸೇವಿಸಿ ಮೂರು ಜನ ಸಾವನ್ನಪ್ಪಿದ್ದರು. ಜೊತೆಗೆ ಸುಮಾರು ನೂರು ಜನ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಘಟನೆಗೆ ಸಂಬಂಧಪಟ್ಟಂತೆ ಮೃತರ ಸಂಖ್ಯೆ ನಿನ್ನೆ (ಜು.04) ಐದಕ್ಕೆ ಏರಿತ್ತು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ: ಪ್ರಯೋಗಾಲಯ ವರದಿ ಬಹಿರಂಗ, ಕಾಲರಾ ಮಾದರಿ ಪತ್ತೆ

ಆಗಸ್ಟ 3 ರಂದು ಪ್ರಯೋಗಾಲಯ ವರದಿ ಬಂದಿದ್ದು, ಕಾಲರಾ ಮಾದರಿಯ ಸೂಕ್ಷ್ಮಾಣು ಅಂಶ ಪತ್ತೆಯಾಗಿತ್ತು. ವಾಂತಿ, ಭೇದಿ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆ ಮಾಡಿದ್ದು, ಈ ನೀರು ಕುಡಿಯಲು ಯೋಗ್ಯವಲ್ಲವೆಂದು ಚಿತ್ರದುರ್ಗ ಜಿಲ್ಲಾ ಸರ್ವೇಕ್ಷಣಾ ಘಟಕ ವರದಿಯಲ್ಲಿ ಉಲ್ಲೇಖಿಸಿತ್ತು. ಇದೀಗ ಪ್ರಕರಣ ಸಂಬಂಧ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಾಕಿಯಿದೆ.

5 ಲಕ್ಷ ರೂ. ಪರಿಹಾರ ನೀಡುವಂತೆ ಸೂಚನೆ

ಇನ್ನು 5 ಲಕ್ಷ ರೂ. ಪರಿಹಾರ ಚೆಕ್‌ ನೀಡುವಂತೆ ಜಿಲ್ಲಾಧಿಕಾರಿಗೆ ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಸೂಚನೆ ನೀಡಿದ್ದರು. ಮೃತರ ಕುಟುಂಬಕ್ಕೆ ತಲಾ 50 ಸಾವಿರ ರೂ. ವೈಯಕ್ತಿಕ ಸಹಾಯ ಧನ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ