ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಐವರು ಸಾವು; ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ – ಗುಂಡೂರಾವ್

ಚಿತ್ರದುರ್ಗದ 17ನೇ ವಾರ್ಡ್​ ವ್ಯಾಪ್ತಿಯ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಐವರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಥಳಕ್ಕೆ ಭೇಟಿ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಬಳಿಕ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರದ ಚೆಕ್ ನೀಡಿದರು.

ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಐವರು ಸಾವು; ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ - ಗುಂಡೂರಾವ್
ಪರಿಹಾರದ ಚೆಕ್​ ವಿತರಿಸಿದ ಸಚಿವ ದಿನೇಶ್​ ಗುಂಡೂರಾವ್​
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ವಿವೇಕ ಬಿರಾದಾರ

Updated on: Aug 05, 2023 | 2:49 PM

ಚಿತ್ರದುರ್ಗ: ನಗರದ 17ನೇ ವಾರ್ಡ್​ ವ್ಯಾಪ್ತಿಯ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು (Contaminated Water) ಸೇವಿಸಿ ಐವರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಸ್ಥಳಕ್ಕೆ ಭೇಟಿ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಬಳಿಕ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರದ ಚೆಕ್ ನೀಡಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ನೀಡಿದ್ದೇವೆ ಎಂದು ಹೇಳಿದರು.

ಕವಾಡಿಗರಹಟ್ಟಿ ದುರಂತ ವಿಚಾರ ಸಾಕಷ್ಟು ನೋವುಂಟು ಮಾಡಿದೆ. ಮತ್ತೆ ಬೇರೆ ಕಡೆ ಇಂತಹ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಪ್ರಕರಣ ಸಂಬಂಧ ಸೂಕ್ತ ವರದಿ ನೀಡುವಂತೆ ಸೂಚಿಸಲಾಗಿದೆ. ಇಲಾಖೆಯ ಲೋಪದೋಷವಿದ್ದರೇ ಸರಿಪಡಿಸಲು ಸೂಚನೆ ನೀಡಿದ್ದೇನೆ. ಇಂತಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ಮುಂದೇನು ಮಾಡಬೇಕೆಂದು ಉಸ್ತುವಾರಿ ಸಚಿವರ ಜೊತೆ ಚರ್ಚೆ ಮಾಡಲಾಗುತ್ತದೆ. ಕವಾಡಿಗರಹಟ್ಟಿಯ ಸಮಗ್ರ ಅಭಿವೃದ್ಧಿ ಮಾಡಲು ನಾವು ಸಿದ್ಧರಾಗಿದ್ದೇವೆ. ಉಸ್ತುವಾರಿ ಸಚಿವರು ಕೂಡ ಈ ಕುರಿತು ಆದೇಶ ನೀಡಿದ್ದಾರೆ. ಯಾಕೆ ಆಯ್ತು ಹೇಗೆ ಆಯ್ತು ಎಂಬುದನ್ನು ವಿಚಾರಣೆ ಮಾಡಲು ಹೇಳಿದ್ದೇವೆ. ಸ್ಪಷ್ಟ ವರದಿ ಬಂದ ಬಳಿಕ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಊಹಾಪೋಹಗಳಿಗೆ ಕಿವಿಗೊಡಬಾರದು. ನಿಜಾಂಶ ಏನೆಂದು ಕಂಪ್ಲೀಟ್ ವರದಿ ಮೂಲಕ ಹೊರ ಬರಲಿದೆ. ನಾನು ಇನ್ನೂ ರಿಪೋರ್ಟ್ ನೋಡಿಲ್ಲ, ಯಾರದ್ದೇ ಲೋಪವಿದ್ದರೂ ಕ್ರಮ ಕೈಗೊಳ್ಳುತ್ತೇವೆ ಎಂದರು.

ಇದನ್ನೂ ಓದಿ: ಚಿತ್ರದುರ್ಗ ಕಲುಷಿತ ನೀರು ಸೇವನೆ ಪ್ರಕರಣ: ಅಸ್ವಸ್ಥಗೊಂಡವರ ಸಂಖ್ಯೆ 185ಕ್ಕೆ ಏರಿಕೆ

ಈಗಾಗಲೇ ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳ ಅಮಾನತು ಆಗಿದ್ದಾರೆ. ಕಾಲರಾಗೆ ಶೀಘ್ರಗತಿಯಲ್ಲಿ ಚಿಕಿತ್ಸೆ ಪಡೆದರೆ ಅನಾಹುತ ಆಗಲ್ಲ. ಈ ಪ್ರಕರಣ ಗಂಭೀರವಾಗಿ ಪರಿಗಣಿಸಲು ನಾವು ಬಂದಿದ್ದೇವೆ. ರಾಜ್ಯದಲ್ಲಿ ಈರೀತಿ ನಡೆದ ಎಲ್ಲಾ ಪ್ರಕರಣಗಳನ್ನೂ ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಪ್ರಕರಣದ ಎಲ್ಲಾ ವರದಿಗಳೂ ಬಹಿರಂಗವಾಗುತ್ತವೆ ಎಂದು ಹೇಳಿದರು.

ಕಲುಷಿತ ನೀರಿನಿಂದ ಆಗಿದೆ ಎಂಬ ಪ್ರಾಥಮಿಕ ವರದಿ ಇದೆ

ಕವಾಡಿಗರಹಟ್ಟಿಯಲ್ಲಿ ಬಹಳಷ್ಟು ಜನ ಅಸ್ತವ್ಯಸ್ಥಗೊಂಡಿದ್ದರು. ಐದು ಜನ ಸಾವಿಗೀಡಾಗಿದ್ದಾರೆ. ಒಂದೇ ಜಾತಿ, ಧರ್ಮದವರು ಇಲ್ಲ ಎಲ್ಲರೂ ಇದ್ದಾರೆ. ಕಲುಷಿತ ನೀರಿನಿಂದ ಆಗಿದೆ ಎಂಬ ಪ್ರಾಥಮಿಕ ವರದಿ ಇದೆ. ಇನ್ನು ತನಿಖೆಗಳು ಆಗಬೇಕು, ಕೆಮಿಕಲ್ ವರದಿಗಳು ಬರಬೇಕು. ವರದಿಗಳು ಬಂದ ಮೇಲೆ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಸಿಎಂ ಏನಾಗುತ್ತಿದೆ ಎಂಬುದನ್ನು ಗಮನಿಸುತ್ತಿದ್ದಾರೆ. ನಾವು ಕೂಡ ಸ್ಥಳಕ್ಕೆ ಭೇಟಿ ನೀಡಿದ್ದೇವೆ. ಅಲ್ಲಿಯ ಶಾಸಕರು ಬಹಳ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಐವರು ಜನರನ್ನು ಸಸ್ಪೆಂಡ್ ಮಾಡಿದ್ದೇವೆ. ತನಿಖೆ ಹಂತದಲ್ಲಿದೆ ಈಗ ನಾನೇನು ಹೇಳೋದಿಕ್ಕೆ ಹೋಗಲ್ಲ ಎಂದು ಬಾಗಲಕೋಟೆಯಲ್ಲಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ