Chitradurga News: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿ ದೇವರಾಜ ಅರಸು ನಿಗಮದ ಅಧಿಕಾರಿ: ಬಂಧನ

9 ಸಾವಿರ ರೂಪಾಯಿ ಲಂಚ ಸ್ವೀಕಾರ ವೇಳೆ ಡಿ. ದೇವರಾಜ ಅರಸು ನಿಗಮದ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದಿದ್ದಾರೆ.

Chitradurga News: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿ ದೇವರಾಜ ಅರಸು ನಿಗಮದ ಅಧಿಕಾರಿ: ಬಂಧನ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on:May 26, 2023 | 7:10 PM

ಚಿತ್ರದುರ್ಗ: ಲಂಚ ಸ್ವೀಕಾರ ವೇಳೆ ಡಿ. ದೇವರಾಜ ಅರಸು ನಿಗಮದ ಅಧಿಕಾರಿ ಲೋಕಾಯುಕ್ತ (Lokayukta) ಬಲೆಗೆ ಬಿದಿದ್ದಾರೆ. ಲೋಕಾಯುಕ್ತ ಎಸ್​​ಪಿ ವಾಸುದೇವರಾಮ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿದ್ದು, ದೇವರಾಜ ಅರಸು ನಿಗಮದ ಕೇಸ್ ವರ್ಕರ್ ಆಗಿರುವ ಮಲ್ಲೇಶ್​ನನ್ನು ಬಂಧಿಸಿದ್ದಾರೆ. 50 ಸಾವಿರ ರೂ. ಸಾಲದ ಮೊತ್ತ ಬಿಡುಗಡೆ ಮಾಡಲು ಬುರುಜನಹಟ್ಟಿಯ ರಾಕೇಶ್​ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 9 ಸಾವಿರ ರೂಪಾಯಿ ಲಂಚ ಸ್ವೀಕಾರ ವೇಳೆ ಲೋಕಾಯುಕ್ತ ಬಲೆಗೆ ಬಿದಿದ್ದು ಅರೆಸ್ಟ್​ ಮಾಡಲಾಗಿದೆ.

ಹಸುವಿನ ಮರಣೋತ್ತರ ಪರೀಕ್ಷೆ ವರದಿ ನೀಡಲು ಲಂಚ

ಹಸುವಿನ ಮರಣೋತ್ತರ ಪರೀಕ್ಷೆ ವರದಿ ನೀಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಪಶು ವೈದ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದಲ್ಲಿ ನಡೆದಿದೆ.

ಎಸ್​ಪಿ ಮೃತ್ಯುಂಜಯ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿದ್ದು, ಚಿಕ್ಕಜಾಜೂರು ಪಶು ಆಸ್ಪತ್ರೆ ವೈದ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ ಬಲೆಗೆ ಬಿದ್ದಾರೆ. ಮೃತ‌ ಹಸುವಿನ ಪೋಸ್ಟ್ ಮಾರ್ಟ್ಂ ರಿಪೋರ್ಟ್ ನೀಡಲು ಕಾಗಳಗೆರೆ ಗ್ರಾಮದ ರೈತ ಎಸ್.ಸ್ವಾಮಿಯಿಂದ 7,000 ರೂ. ಲಂಚ ಸ್ವೀಕರಿಸುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: Lokayukta Raid: ಹಾವೇರಿ, ಮಂಡ್ಯದಲ್ಲಿ ಲೋಕಾಯುಕ್ತ ದಾಳಿ, ಸಿಕ್ಕಿಬಿದ್ದ ಪಿಎಸ್​ಐ ಮತ್ತು ಮಳವಳ್ಳಿ ಎಪಿಎಂಸಿ ಕಾರ್ಯದರ್ಶಿ

ಮಳವಳ್ಳಿ ಎಪಿಎಂಸಿ ಕಾರ್ಯದರ್ಶಿ ಸಾಕಮ್ಮ ಲೋಕಾಯುಕ್ತ ಬಲೆಗೆ

ಮಂಡ್ಯ: ಮಂಡ್ಯದಲ್ಲೂ ಭ್ರಷ್ಟ ಅಧಿಕಾರಿಯೊಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ಬೇಟೆಯಾಡಿದ್ದರು. ಗೋದಾಮಿಗೆ ಅನುಮತಿ ನೀಡಲು ಲಂಚ ಸ್ವೀಕರಿಸುತ್ತಿದ್ದ ಜಿಲ್ಲೆಯ ಮಳವಳ್ಳಿ ತಾಲೂಕಿನ ಎಪಿಎಂಸಿ ಕಾರ್ಯದರ್ಶಿ ಸಾಕಮ್ಮ ಅವರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದರು. ಕಲ್ಕುಣಿ ಆನಂದ್ ಎಂಬವರು ಗೋದಾಮು ನಿರ್ಮಾಣ ಮಾಡಲು ಅನುಮತಿ ನೀಡುವಂತೆ ಕೋರಿದ್ದರು. ಈ ವೇಳೆ ಎಪಿಎಂಸಿ ಕಾರ್ಯದರ್ಶಿ ಸಾಕಮ್ಮ ಅವರು 50 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು.

ಇದನ್ನೂ ಓದಿ: Lokayukta Raid: ಮುಂದುವರಿದ ಭ್ರಷ್ಟರ ಬೇಟೆ, ಲಂಚಕ್ಕೆ ಕೈಯೊಡ್ಡುತ್ತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ

ಗೋದಾಮು ನಿರ್ಮಾಣಕ್ಕೆ ಅನುಮತಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟ ಕಾರ್ಯದರ್ಶಿ ವಿರುದ್ಧ ಲೋಕಾಯುಕ್ತ ಕಚೇರಿಗೆ ಕಲ್ಕುಣಿ ಆನಂದ್ ಅವರು ದೂರು ನೀಡಿದ್ದರು. ಅದರಂತೆ ಕಲ್ಕುಣಿ ಆನಂದ್ ಎಂಬುವರ ಬಳಿಯಿಂದ ಬೇಡಿಕೆ ಇಟ್ಟ 50 ಸಾವಿರ ಲಂಚದ ಹಣದ ಪೈಕಿ ಮಾರ್ಚ್ 21 ಮುಂಗಡವಾಗಿ 20 ಸಾವಿರ ಹಣ ಸ್ವೀಕಾರ ಮಾಡುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಸಾಕಮ್ಮ ಅವರನ್ನು ಬಂಧಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:09 pm, Fri, 26 May 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್