ಲೋಕಸಭಾ ಚುನಾವಣೆ ಬಳಿಕ ಎರಡು ಪಕ್ಷಗಳಿಂದ 25 ರಿಂದ 30 ಶಾಸಕರು ಕಾಂಗ್ರೆಸ್ ಸೇರ್ತಾರೆ- ಡಿ.ಸುಧಾಕರ್
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಜೆಡಿಎಸ್ಗೆ ಮುಜುಗರ ಉಂಟುಮಾಡಿದ್ದು, 12 ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದರ ಬೆನ್ನಲ್ಲೇ ಲೋಕಸಭಾ ಚುನಾವಣೆ ಬಳಿಕ 25 ರಿಂದ 30 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಸಚಿವ ಡಿ.ಸುಧಾಕರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಚಿತ್ರದುರ್ಗ, ಮೇ.17: ಇತ್ತೀಚೆಗೆ ಹನ್ನೆರಡು ಜೆಡಿಎಸ್ ಶಾಸಕರು ಕಾಂಗ್ರೆಸ್(Congress) ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಅದಕ್ಕೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ‘ಅದೆಲ್ಲವೂ ಸುಳ್ಳು ಎಂದು ಸ್ಪಷ್ಟನೆ ನೀಡಿದ್ದರು. ಇದರ ಬೆನ್ನಲ್ಲೇ ಲೋಕಸಭಾ ಚುನಾವಣೆ ಮುಗಿದ ನಂತರ ಬಿಜೆಪಿ, ಜೆಡಿಎಸ್ನಿಂದ 25 ರಿಂದ 30 ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ (D. Sudhakar) ಸ್ಪೋಟಕ ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ‘ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಮತ್ತಷ್ಟು ಬಲಶಾಲಿ ಆಗಲಿದೆ ಎಂದರು.
ಇದೇ ವೇಳೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಳ್ಳ ಹಿಡಿದಿದೆ ಎಂಬ ಜಗದೀಶ್ ಶೆಟ್ಟರ್ ಹೇಳಿಕೆ ವಿಚಾರ, ‘ಜಗದೀಶ್ ಶೆಟ್ಟರ್ ಅವರು ಮಾಜಿ ಸಿಎಂ ಆಗಿದ್ದವರು. ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ನಾನು ಇದ್ದವನು. ಕಾನೂನು ಸುವ್ಯವಸ್ಥೆ ಹೇಗಿತ್ತು ಎಂದು ನೋಡಿದ್ದೇನೆ. ನಮ್ಮ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ತುಂಬಾ ದಕ್ಷವಾಗಿದ್ದು, ರಾಜ್ಯದಲ್ಲಿ ಅಚ್ಚುಕಟ್ಟಾಗಿದೆ ಎಂದು ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ:ಕಲಬುರಗಿ ಪ್ರಭಾವಿ ನಾಯಕ, ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆ
ಅಪರಾಧಿಗೆ ಕೇಂದ್ರ ಸರ್ಕಾರ ಭದ್ರತೆ ಕೊಡ್ತಿದೆ
ಇನ್ನು ಅಂಜಲಿ ಹತ್ಯೆ ಕೇಸ್ಗೆ ನಮ್ಮ ನಾಯಕರು ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ. ಎಸ್ಐಟಿ ಸ್ವತಂತ್ರ ತನಿಖಾ ಸಂಸ್ಥೆ, ಅದಕ್ಕೆ ಸರ್ಕಾರದಿಂದ ಸಂಪೂರ್ಣ ಸ್ವತಂತ್ರ್ಯ ಕೊಡಲಾಗಿದೆ. ಅವರು ಸಮರ್ಥವಾಗಿ ತನಿಖೆ ಮಾಡುತ್ತಿದ್ದಾರೆ. ಆದ್ರೆ, ಪ್ರಜ್ವಲ್ ರೇವಣ್ಣ ಕೇಸ್ ವಿಚಾರವಾಗಿ ಕೇಂದ್ರ ಸರ್ಕಾರ ಸಹಕಾರ ಕೊಡುತ್ತಿಲ್ಲ. ಕೇಂದ್ರ ಮನಸ್ಸು ಮಾಡಿದ್ರೆ 1 ನಿಮಿಷದಲ್ಲಿ ಪ್ರಜ್ವಲ್ನನ್ನು ಹಿಡಿಯಬಹುದು. ಸಾವಿರಾರು ಹೆಣ್ಣುಮಕ್ಕಳು ಆ ಕೇಸ್ನಲ್ಲಿ ದುಃಖತಪ್ತರಾಗಿದ್ದಾರೆ. ಅಪರಾಧಿಗೆ ಡಿಪ್ಲೋಮೆಟಿಕ್ ಪಾಸ್ ಪೋರ್ಟ್ ಕೊಟ್ಟಿದೆ. ತನಿಖಾ ಸಂಸ್ಥೆಗಳಿಂದ ಪಾಸ್ಪೋರ್ಟ್ ಕ್ಯಾನ್ಸಲ್ ಮಾಡಿಸಲಿ. ಆದರೆ, ಎನ್ಡಿಎ ಸರ್ಕಾರ ಅದನ್ನು ಮಾಡುತ್ತಿಲ್ಲ. ಈಗಾಗಲೇ ಅಪರಾಧಿ ನಾಪತ್ತೆಯಾಗಿ ಇಪ್ಪತ್ತು ದಿನ ಆಗಿದೆ ಎಂದು ಕಿಡಿಕಾರಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ