ನೆನೆಗುದಿಗೆ ಬಿದ್ದ ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ: ಎರಡು ದಶಕಗಳ ದುರ್ಗದ ಜನರ ಹೋರಾಟಕ್ಕೆ ಜಯ ಸಿಗುತ್ತಾ?

ಎರಡು ವರ್ಷದ ಹಿಂದೆಯೇ ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗದ ಯೋಜನೆಯನ್ನು ಸರ್ಕಾರ ಘೋಷಿಸಿದೆ. ಭೂಸ್ವಾಧೀನ ಪ್ರಕ್ರಿಯಗೆ ಚಾಲನೆ ನೀಡಿರುವುದಾಗಿ ಹೇಳಿದೆ. ಆದರೆ ಚಿತ್ರದುರ್ಗ ಮತ್ತು ಹಿರಿಯೂರು ಭಾಗದಲ್ಲಿ ಭೂಸ್ವಾಧೀನ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ನೇರವಾಗಿ ರಾಜಧಾನಿ ಬೆಂಗಳೂರು ಸಂಪರ್ಕ ಕಲ್ಪಿಸಲಿರುವ ದಾವಣಗೆರೆ-ಚಿತ್ರದುರ್ಗ-ತುಮಕೂರು ರೈಲು ಮಾರ್ಗ ಆಮೆಗತಿಯಲ್ಲಿ ಸಾಗಿದ್ದಂತು ಓಪನ್ ಸೀಕ್ರೇಟ್.

ನೆನೆಗುದಿಗೆ ಬಿದ್ದ ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ: ಎರಡು ದಶಕಗಳ ದುರ್ಗದ ಜನರ ಹೋರಾಟಕ್ಕೆ ಜಯ ಸಿಗುತ್ತಾ?
ಚಿತ್ರದುರ್ಗ ನಗರದ ರೈಲ್ವೆ ನಿಲ್ದಾಣ
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಗಂಗಾಧರ​ ಬ. ಸಾಬೋಜಿ

Updated on:Sep 02, 2023 | 10:06 PM

ಚಿತ್ರದುರ್ಗ, ಸೆಪ್ಟೆಂಬರ್​ 3: ಐತಿಹಾಸಿಕ ಕೋಟೆನಾಡು ಚಿತ್ರದುರ್ಗ ನಗರದಲ್ಲಿ ರೈಲ್ವೆ (train) ನಿಲ್ದಾಣವೇನೋ ಇದೆ. ಆದರೆ ರಾಜ್ಯದ ರಾಜಧಾನಿ ಸಂಪರ್ಕಿಸುವ ನೇರ ರೈಲು ಮಾರ್ಗ ಮಾತ್ರ ಈವರೆಗೆ ನಿರ್ಮಾಣ ಆಗಿಲ್ಲ. ನೇರ ರೈಲು ಮಾರ್ಗ ಎಂಬುದು ಇಂದಿಗೂ ದುರ್ಗಕ್ಕೆ ಗಗನ ಕುಸುಮವೇ ಆಗಿದೆ. ಎರಡು ದಶಕಗಳಿಂದ ನೇರ ರೈಲು ಮಾರ್ಗಕ್ಕಾಗಿ ದುರ್ಗದ ಜನರು ಹೋರಾಟ ಮಾಡುತ್ತಿದ್ದಾರೆ. ಆದರೆ ಸರ್ಕಾರಗಳು ಮಾತ್ರ ನೇರ ರೈಲು ಮಾರ್ಗದ ಹುಸಿ ಭರವಸೆ ನೀಡುತ್ತಲೇ ಬಂದಿವೆ. ಈ ಕುರಿತು ಒಂದು ವರದಿ ಇಲ್ಲಿದೆ ಮುಂದೆ ಓದಿ.

ಚಿತ್ರದುರ್ಗ ನಗರದಿಂದ ರಾಜ್ಯದ ರಾಜಧಾನಿ ಬೆಂಗಳೂರಿಗೆ ಈವರೆಗೆ ನೇರ ರೈಲು ಮಾರ್ಗ ನಿರ್ಮಾಣ ಆಗಿಲ್ಲ. ಕಳೆದೆರಡು ದಶಕಗಳಿಂದ ದುರ್ಗದ ಜನರು ಹೋರಾಟ ಮಾಡುತ್ತ ಬಂದಿದ್ದಾರೆ. ಆದರೆ ಚುನಾವಣೆ ಸಂದರ್ಭಗಳಲ್ಲಿ ಮಾತ್ರ ನೇರು ರೈಲು ಮಾರ್ಗವನ್ನು ಅಂಗೈಯಲ್ಲೇ ತೋರಿಸುವ ರಾಜಕಾರಣಿಗಳು ಬಳಿಕ ಮರೆತೇ ಬಿಡುತ್ತಾರೆ. ಎರಡು ವರ್ಷದ ಹಿಂದೆಯೇ ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗದ ಯೋಜನೆಯನ್ನು ಸರ್ಕಾರ ಘೋಷಿಸಿದೆ.

ಇದನ್ನೂ ಓದಿ: ಚಿತ್ರದುರ್ಗ: ಕಾಲೇಜು ಆವರಣದಲ್ಲೇ ಧರಣಿ ಕುಳಿತ ನರ್ಸಿಂಗ್ ವಿದ್ಯಾರ್ಥಿಗಳು: ಮೂಲ ಸೌಕರ್ಯ ಕಲ್ಪಿಸುವಂತೆ ಪಟ್ಟು

ಭೂಸ್ವಾಧೀನ ಪ್ರಕ್ರಿಯಗೆ ಚಾಲನೆ ನೀಡಿರುವುದಾಗಿ ಹೇಳಿದೆ. ಆದರೆ ಚಿತ್ರದುರ್ಗ ಮತ್ತು ಹಿರಿಯೂರು ಭಾಗದಲ್ಲಿ ಭೂಸ್ವಾಧೀನ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಹೀಗಾಗಿ, ರೈಲ್ವೆ ಕನೆಕ್ಟಿವಿಟಿ ಇಲ್ಲದ ಕಾರಣಕ್ಕೆ ಚಿತ್ರದುರ್ಗದಲ್ಲಿ ವ್ಯಾಪಾರ ವ್ಯವಹಾರಗಳು ಅಭಿವೃದ್ಧಿ ಕಂಡಿಲ್ಲ. ಉದ್ಯಮಗಳ ಸ್ಥಾಪನೆಗೆ ಉದ್ಯಮಿಗಳು ಹಿಂದೇಟು ಹಾಕುತ್ತಾರೆ. ಐತಿಹಾಸಿಕ ನಾಡಾಗಿದ್ದರೂ ಪ್ರವಾಸೋದ್ಯಮವೂ ಅಭಿವೃದ್ಧಿ ಕಂಡಿಲ್ಲ. ಹೀಗಾಗಿ, ರೈಲ್ವೆ ಯೋಜನೆಗೆ ಇನ್ನೆಷ್ಟು ವರ್ಷಗಳು ಬೇಕೆಂದು ಸ್ಥಳೀಯರು ಕಿಡಿ ಕಾರುತ್ತಿದ್ದಾರೆ.

ಇದನ್ನೂ ಓದಿ: ಇಂಜೆಕ್ಷನ್‌ ರಿಯಾಕ್ಷನ್​ನಿಂದ 7 ವರ್ಷದ ಬಾಲಕ ಸಾವು ಆರೋಪ, ಅಂಬ್ಯುಲೆನ್ಸ್ ನಲ್ಲಿಯೇ ಹೆರಿಗೆ ತಾಯಿ ಮಗು ಸೇಫ್

ಈ ಬಗ್ಗೆ ಚಿತ್ರದುರ್ಗ ಬಿಜೆಪಿ ಸಂಸದ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವ್ರನ್ನು ಕೇಳಿದರೆ ಈಗಾಗಲೇ ದಾವಣಗೆರೆಯಿಂದ ಭರಮಸಾಗದವರೆಗೆ ಕೆಲಸ ಆರಂಭ ಆಗಿದೆ. ಭರಮಸಾಗದಿಂದ 29 ಕಿ.ಮೀಟರ್ ರೈಲ್ವೆ ಕಾಮಗಾರಿಯ ಟೆಂಡರ್ ಆಗಿದೆ. ಆ ಕಾಮಗಾರಿ 3 ತಿಂಗಳಲ್ಲಿ ಆರಂಭ ಆಗಲಿದೆ. ಚಿತ್ರದುರ್ಗ ಮತ್ತು ಹಿರಿಯೂರು ಭಾಗದಲ್ಲಿ ಶೇ.80ರಷ್ಟು ಭೂಸ್ವಾಧೀನ ಪ್ರಕ್ರಿಯೆ ಮುಗಿದಿದ್ದು 100 ಕೋಟಿ ರೂ. ಹಣ ನೀಡಲಾಗಿದೆ. 1900 ಕೋಟಿ ರೂ. ವೆಚ್ಚದಲ್ಲಿ ಈ ಭಾಗದಲ್ಲಿ ಕಾಮಗಾರಿಯೂ ನಡೆಯಲಿದ್ದು, ಶೀಘ್ರ ರೈಲ್ವೆ ಯೋಜನೆ ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ನೇರವಾಗಿ ರಾಜಧಾನಿ ಬೆಂಗಳೂರು ಸಂಪರ್ಕ ಕಲ್ಪಿಸಲಿರುವ ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ ಆಮೆಗತಿಯಲ್ಲಿ ಸಾಗಿದ್ದಂತು ಓಪನ್ ಸೀಕ್ರೇಟ್. ಚಿತ್ರದುರ್ಗ ಮತ್ತು ಹಿರಿಯೂರು ಭಾಗದಲ್ಲಿ ಇನ್ನೂ ಭೂಸ್ವಾಧೀನ ಪ್ರಕ್ರಿಯೆಯೇ ಪೂರ್ಣಗೊಂಡಿಲ್ಲ. ಇನ್ನು ಕಾಮಗಾರಿ ಪೂರ್ಣಗೊಳ್ಳುವುದು ಯಾವ ಕಾಲದಲ್ಲೋ ಎಂಬ ಅನುಮಾನ ಜನರಲ್ಲಿ ಮೂಡಿದೆ. ಹೀಗಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ನೇರ ರೈಲು ಮಾರ್ಗ ಪೂರ್ಣಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:05 pm, Sat, 2 September 23

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್