ಕಿರುಕುಳ ಆರೋಪ: ಜೈಲರ್ಗೆ ಶೋಕಾಸ್ ನೋಟಿಸ್ ನೀಡಿದ ದಾವಣಗೆರೆ ಜಿಲ್ಲಾ ಕೋರ್ಟ್
ಚಿತ್ರದುರ್ಗಾ ಜಿಲ್ಲಾ ಕಾರಾಗೃಹದ ಜೈಲರ್ ಶ್ರೀಮಂತ ಗೌಡ ಪಾಟೀಲ್ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Court) ಜೈಲರ್ಗೆ ಶೋಕಾಸ್ ನೋಟಿಸ್ ನೀಡಿದೆ.
ಚಿತ್ರದುರ್ಗ, ಡಿಸೆಂಬರ್ 13: ಜಿಲ್ಲಾ ಕಾರಾಗೃಹದ (Central Jail) ಜೈಲರ್ ಶ್ರೀಮಂತ ಗೌಡ ಪಾಟೀಲ್ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ (Davangere) ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Court) ಜೈಲರ್ಗೆ ಶೋಕಾಸ್ ನೋಟಿಸ್ ನೀಡಿದೆ. ನ್ಯಾಮತಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣವೊಂದರಲ್ಲಿ ಹೊನ್ನಾಳಿ ತಾಲೂಕಿನ ಚಿಲೂರು ಗ್ರಾಮದ ಚಂದ್ರಪ್ಪ ಎಂಬ ಆರೋಪಿಯ ಬಂಧನವಾಗಿದೆ. ಆರೋಪಿಯನ್ನು ದಾವಣಗೆರೆ ಜೈಲಿಂದ ಚಿತ್ರದುರ್ಗ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಚಿತ್ರದುರ್ಗ ಜೈಲಿನ ಜೈಲರ್ ಶ್ರೀಮಂತ ಗೌಡ ಪಾಟೀಲ್ ತನಗೆ (ಆರೋಪಿ ಚಂದ್ರಪ್ಪ) ಜಾತಿ ಆಧರಿತ ಹಿಂಸೆ ನೀಡಿದ್ದು ಮತ್ತು ಥಳಿತಿಳಿಸಿದ್ದಾರೆ ಎಂದು ವಕೀಲರ ಮೂಲಕ ಕೋರ್ಟ್ಗೆ ಲಿಖಿತ ದೂರು ನೀಡಿದ್ದಾರೆ. ಅಲ್ಲದೆ ಚಿತ್ರದುರ್ಗ ಜೈಲಿನಿಂದ ದಾವಣಗೆರೆ ಜೈಲಿಗೆ ಶಿಫ್ಟ್ ಮಾಡುವಂತೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಕೈದಿಗಳಿಗೆ ಕಾರಾಗೃಹದಲ್ಲಿ ಕಂಪ್ಯೂಟರ್ ಶಿಕ್ಷಣ; ವಿನೂತನ ಪ್ರಯತ್ನಕ್ಕೆ ಮುಂದಾದ ಚಾಮರಾಜನಗರ ಜಿಲ್ಲಾ ಕಾರಾಗೃಹ
ಆರೋಪಿ ಚಂದ್ರಪ್ಪ ನೀಡಿರುವ ದೂರು ಆಧರಿಸಿ ನ್ಯಾಯಾಲಯ ನೋಟಿಸ್ ನೀಡಿದೆ. ನೋಟಿಸ್ ತಲುಪಿದ ಒಂದು ವಾರದೊಳಗೆ ಜೈಲರ್ ಶ್ರೀಮಂತ ಗೌಡ ಪಾಟೀಲ್ ಖುದ್ದಾಗಿ ಹಾಜರಾಗಿ ಉತ್ತರಿಸುವಂತೆ ನ್ಯಾಯಾಲಯ ಸೂಚನೆ ನೀಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ