Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರುಘಾ ಮಠಕ್ಕೆ ಹೊಸ ಪೀಠಾಧ್ಯಕ್ಷರು ಬೇಕು: ಸರ್ಕಾರಕ್ಕೆ ಮನವಿ ಸಲ್ಲಿಸಲು ಭಕ್ತರ ಸಭೆ ನಿರ್ಧಾರ

ಒಂದು ವೇಳೆ ಶಿವಮೂರ್ತಿ ಶರಣರು ನಿರ್ದೋಷಿಯಾಗಿ ಹೊರ ಬಂದರೆ ಏನು ಮಾಡುವಿರಿ ಎಂಬ ಪ್ರಶ್ನೆಗೆ ಉತ್ತರಿಸಲು ಅವರು ಒಪ್ಪಲಿಲ್ಲ.

ಮುರುಘಾ ಮಠಕ್ಕೆ ಹೊಸ ಪೀಠಾಧ್ಯಕ್ಷರು ಬೇಕು: ಸರ್ಕಾರಕ್ಕೆ ಮನವಿ ಸಲ್ಲಿಸಲು ಭಕ್ತರ ಸಭೆ ನಿರ್ಧಾರ
ಚಿತ್ರದುರ್ಗದ ಡಾ ಶಿವಮೂರ್ತಿ ಮುರುಘಾ ಶರಣರು
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 29, 2022 | 3:35 PM

ಚಿತ್ರದುರ್ಗ: ಪೊಕ್ಸೋ ಪ್ರಕರಣದಲ್ಲಿ ಜೈಲು ಸೇರಿರುವ ಮುರುಘಾ ಮಠದ ಹಾಲಿ ಪೀಠಾಧ್ಯಕ್ಷ ಶಿವಮೂರ್ತಿ ಮುರುಘಾ ಶರಣರನ್ನು ಪದಚ್ಯುತಿಗೊಳಿಸಿ, ಹೊಸ ಪೂರ್ಣಕಾಲೀನ ಪೀಠಾಧ್ಯಕ್ಷರನ್ನು ಸರ್ಕಾರವೇ ಆಯ್ಕೆ ಮಾಡಬೇಕು ಎಂದು ಮನವಿ ಸಲ್ಲಿಸಲು ಮಾಜಿ ಸಚಿವ ಏಕಾಂತಯ್ಯ ನೇತೃತ್ವದ ಸಭೆ ನಿರ್ಧರಿಸಿತು. ಪ್ರಸ್ತುತ ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಪೀಠಾಧ್ಯಕ್ಷರ ಕರ್ತವ್ಯ ನಿರ್ವಹಿಸಲು ಸಾಧ್ಯವಾಗದ ಸ್ಥಿತಿಯಿದೆ. ಮಠದ ಧಾರ್ಮಿಕ, ಆಡಳಿತಾತ್ಮಕ ಚಟುವಟಿಕೆಗೆ ಅಡೆತಡೆ ಆಗಿದೆ. ಇಂಥ ಸಂದರ್ಭದಲ್ಲಿ ಹೊಸ ಪೀಠಾಧ್ಯಕ್ಷರ ನೇಮಕ ಅಗತ್ಯವಾಗಿದೆ. ಸರ್ಕಾರವು ಇದನ್ನು ವಿಶೇಷ ಸಂದರ್ಭ ಎಂದು ಪರಿಗಣಿಸಿ ಕ್ರಮಕೈಗೊಳ್ಳಬೇಕು ಎಂದು ಸಭೆಯಲ್ಲಿ ಹಲವು ಅಭಿಪ್ರಾಯಪಟ್ಟರು.

ಚಿತ್ರದುರ್ಗದ ಎಸ್.ನಿಜಲಿಂಗಪ್ಪ ಸ್ಮಾರಕ ಆವರಣದಲ್ಲಿ ನಡೆದ ವೀರಶೈವ ಲಿಂಗಾಯತ ಸಮಾಜದ ಸಭೆಯ ನಂತರ ಮಾತನಾಡಿದ ಅವರು, ಸರ್ಕಾರ ಮತ್ತು ನ್ಯಾಯಾಲಯಕ್ಕೆ ಹೊಸ ಪೀಠಾಧ್ಯಕ್ಷೆ ಬಗ್ಗೆ ತೀರ್ಮಾನ ಮಾಡಲು ಅಧಿಕಾರವಿದೆ. ಕಾನೂನಾತ್ಮಕ ಅಥವಾ ಆಡಳಿತಾತ್ಮಕ ಕ್ರಮ ಕೈಗೊಳ್ಳಬೇಕು. ಮುಖ್ಯಮಂತ್ರಿಯನ್ನು ಮುಖತಃ ಭೇಟಿ ಮಾಡಿ ಪರಿಸ್ಥಿತಿ ವಿವರಿಸಲು ತೀರ್ಮಾನಿಸಿದ್ದೇವೆ. ಈಗಿನ ಪೀಠಾದ್ಯಕ್ಷರನ್ನು ವಜಾಗೊಳಿಸಿ ಹೊಸಬರ ನೇಮಿಸಬೇಕು ಎಂದು ಆಗ್ರಹಿಸಿದರು.

ಒಂದು ವೇಳೆ ಶಿವಮೂರ್ತಿ ಶರಣರು ನಿರ್ದೋಷಿಯಾಗಿ ಹೊರ ಬಂದರೆ ಏನು ಮಾಡುವಿರಿ ಎಂಬ ಪ್ರಶ್ನೆಗೆ ಉತ್ತರಿಸಲು ಅವರು ಒಪ್ಪಲಿಲ್ಲ. ಈ ಮೊದಲು ಶಿವಮೂರ್ತಿ ಶರಣರೇ ಒಬ್ಬರನ್ನು ಉತ್ತರಾಧಿಕಾರಿಗಾಗಿ ನೇಮಿಸಿರುವುದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈ ಘೋಷಣೆ ಕಾನೂನು ಪ್ರಕಾರ ಆಗಿದೆಯೇ ಇಲ್ಲವೇ ನೋಡಬೇಕು. ಮುರುಘಾಶ್ರೀ ಉತ್ತರಾಧಿಕಾರಿ ನೇಮಿಸಿದ ಬಗ್ಗೆ ನಾವು ಚಿಂತನೆ ಮಾಡಿಲ್ಲ ಎಂದರು.

ಸಮಾಲೋಚನಾ ಸಭೆಯಲ್ಲಿ ಶಿವಮೂರ್ತಿ ಮುರುಘಾ ಶರಣರ ಹೆಸರನ್ನು ಕೆಲವರು ಪ್ರಸ್ತಾಪಿಸಿದ್ದಕ್ಕೆ ತೀವ್ರ ಆಕ್ಷೇಪ ಕೇಳಿಬಂತು. ಮುರುಘಾ ಶರಣರ ಹೆಸರು ಪ್ರಸ್ತಾಪಿಸದಂತೆ ಆಕ್ಷೇಪಿಸಿದಾಗ, ಹೆಸರು ಪ್ರಸ್ತಾಪಿಸಿದೇ ಚರ್ಚೆ ನಡೆಸುವುದು ಸಾಧ್ಯವೇ ಎಂದು ಮತ್ತೊಂದು ಗುಂಪಿನವರು ಪ್ರಶ್ನಿಸಿದರು. ಇದರಿಂದ ಸಭೆಯಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಯಿತು. ಸಭಿಕರು ಪರಸ್ಪರ ವಾದಕ್ಕಿಳಿದರು. ಪೊಲೀಸರು ಹಾಗೂ ಸ್ಥಳೀಯ ಮುಖಂಡರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊತ್ತು ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಮುರುಘಾ ಶರಣರು ಪೀಠ ತ್ಯಾಗ ಮಾಡದ ಹಿನ್ನೆಲೆಯಲ್ಲಿ ಮುರುಘಾಮಠದ ಉಳಿವಿಗಾಗಿ ವೀರಶೈವ ಲಿಂಗಾಯತ ಸಮಾಜದ ಪ್ರಮುಖರು ಸಭೆಯಲ್ಲಿ ಹಲವು ವಿಚಾರಗಳನ್ನು ಚರ್ಚಿಸಿದರು. ಹೊಳಲ್ಕೆರೆಯ ಮಾಜಿ ಶಾಸಕ ರಮೇಶ, ಸಮುದಾಯದ ಮುಖಂಡರಾದ ಕೆ.ವಿ.ಪ್ರಭಾಕರ್, ಷಣ್ಮುಖಪ್ಪ, ವಿಜಯಕುಮಾರ್ ಸೇರಿ ಹಲವರು ಸಭೆಯಲ್ಲಿ ಭಾಗವಹಿಸಿದ್ದರು.

ವೀರಶೈವ ಸಮಾಜದ ಮುಖಂಡ ಸೈಟ್ ಬಾಬು ಮಾತನಾಡಿ, ಮುರುಘಾ ಮಠದ ಪರಂಪರೆ, ಸಂಸ್ಕೃತಿ ಉಳಿಯಬೇಕು. ಮಠಕ್ಕೆ ಹೊಸ‌ ಸ್ವಾಮೀಜಿ ನೇಮಕ ಆಗಬೇಕು. ಮುರುಘಾ ಮಠದಲ್ಲಿ ಈಗಿರುವ ಸಮಿತಿಗಳು ರದ್ದಾಗಬೇಕು. ನಾವೆಲ್ಲಾ ಹೋಗಿ ಮಠದಲ್ಲಿದ್ದವರನ್ನು ಹೊರ ಹಾಕೋಣ‌ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಏಕಾಂತಯ್ಯ ಪೊಲೀಸರ ವರ್ತನೆಯ ಬಗ್ಗೆ ಆಕ್ಷೇಪಿಸಿದರು. ಬಂದೋಬಸ್ತ್​​ಗಾಗಿ ನಾವು ಪೊಲೀಸರಿಗೆ ಮನವಿ ಮಾಡಿದ್ದೆವು. ಆದರೆ ಪೊಲೀಸರು ಸಭೆಯಲ್ಲಿ ಗೊಂದಲ‌ ಸೃಷ್ಟಿಗೆ ಅವಕಾಶ ನೀಡಿದ್ದಾರೆ. ಮುರುಘಾಶ್ರೀ ಪರ ಪೊಲೀಸರು ಕೆಲಸ‌ ಮಾಡುತ್ತಿದ್ದಾರೆ. ಸ್ಥಳಕ್ಕೆ ಎಸ್​ಪಿ ಬರುವವರೆಗೂ ಸಭೆ ಮುಂದುವರಿಸುವುದಿಲ್ಲ ಎಂದು ಪಟ್ಟು ಹಿಡಿದರು. ಕೊನೆಗೆ ಸ್ಥಳೀಯ ಮುಖಂಡರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.

Published On - 3:34 pm, Thu, 29 September 22

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ