ಸರ್ಕಾರಕ್ಕೆ ಪೂರ್ಣ ಸ್ವಾತಂತ್ರ್ಯವಿದ್ದರೆ ಉತ್ತಮ ಆಡಳಿತ ಸಾಧ್ಯ; ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ
ಉತ್ತಮ ಆಡಳಿತ ನೀಡಲು ಎಲ್ಲರ ಸಹಕಾರ ಅಗತ್ಯವಿದೆ. ಕೇಂದ್ರ, ರಾಜ್ಯದ ಪ್ರತಿನಿಧಿಗಳು ಮುಖ್ಯಮಂತ್ರಿಗೆ ಸ್ವಾತಂತ್ರ್ಯ ನೀಡಿ. ಯಾವುದೇ ಪಕ್ಷದ ವ್ಯಕ್ತಿ ಕನಿಷ್ಠ 5 ವರ್ಷ ಮುಂದುವರಿದರೆ ಒಳ್ಳೆಯ ಕಾರ್ಯ ಸಾಧ್ಯ. ಒಳ್ಳೆಯ ಆಡಳಿತ ನಡೆಸಲು ಅವಕಾಶವನ್ನು ಕಲ್ಪಿಸಬೇಕು.
ಚಿತ್ರದುರ್ಗ: ಸರ್ಕಾರಕ್ಕೆ ಪೂರ್ಣ ಪ್ರಮಾಣದಲ್ಲಿ ಸ್ವಾತಂತ್ರ್ಯವಿದ್ದರೆ ಉತ್ತಮ ಆಡಳಿತ ನಡೆಸಲು ಸಾಧ್ಯವೆಂದು ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯ ತರಳಬಾಳು ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ವಿಡಿಯೋ ಹೇಳಿಕೆಯನ್ನು ಬಿಡುಗಡೆ ಮಾಡಿದ ಶ್ರೀಗಳು, ಕೇಂದ್ರ ಸರ್ಕಾರ ಹತೋಟಿ ಸಾಧಿಸುವ ಸಂಚು ಮಾಡಿದ್ರೆ, ಎಂಥ ಮುಖ್ಯಮಂತ್ರಿ ಇದ್ದರೂ ಪರಿಪೂರ್ಣ ಆಡಳಿತ ಅಸಾಧ್ಯವೆಂದು ಅಭಿಪ್ರಾಯಪಟ್ಟರು.
ಉತ್ತಮ ಆಡಳಿತ ನೀಡಲು ಎಲ್ಲರ ಸಹಕಾರ ಅಗತ್ಯವಿದೆ. ಕೇಂದ್ರ, ರಾಜ್ಯದ ಪ್ರತಿನಿಧಿಗಳು ಮುಖ್ಯಮಂತ್ರಿಗೆ ಸ್ವಾತಂತ್ರ್ಯ ನೀಡಿ. ಯಾವುದೇ ಪಕ್ಷದ ವ್ಯಕ್ತಿ ಕನಿಷ್ಠ 5 ವರ್ಷ ಮುಂದುವರಿದರೆ ಒಳ್ಳೆಯ ಕಾರ್ಯ ಸಾಧ್ಯ. ಒಳ್ಳೆಯ ಆಡಳಿತ ನಡೆಸಲು ಅವಕಾಶವನ್ನು ಕಲ್ಪಿಸಬೇಕು. ಆಡಳಿತದಲ್ಲಿ ದೋಷ ಕಂಡುಬಂದರೆ ಆಗ ಕ್ರಮಕೈಗೊಳ್ಳಬೇಕು ಅಂತ ಶ್ರೀಗಳು ತಿಳಿಸಿದರು.
ಒಂದು ವರ್ಷ, 2 ವರ್ಷಕ್ಕೆ ಮುಖ್ಯಮಂತ್ರಿಯನ್ನು ಬದಲಿಸಬಾರದು. ಸಿಎಂ ಬದಲಾವಣೆಯಿಂದ ಅಧಿಕಾರಿಗಳು ಕೆಲಸ ಮಾಡಲು ಸಾಧ್ಯವಾಗಲ್ಲ. ಇದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಲಿ. ಹಾಲಿ ಸಿಎಂಗೆ ಪೂರ್ಣಾವಧಿ ಕೆಲಸ ಮಾಡಲು ಬಿಡಬೇಕು. ಮುಖ್ಯಮಂತ್ರಿ ಯಡಿಯೂರಪ್ಪ ಯಶಸ್ವಿಯಾಗಿ ಕೊವಿಡ್ ನಿರ್ವಹಿಸಿದ್ದಾರೆ. ಈ ವೇಳೆ ನೆಪ ಮಾಡಿಕೊಂಡು ಸಿಎಂ ಬದಲಾವಣೆ ಮಾಡುವುದು ಒಳ್ಳೆಯ ರಾಜಕಾರಣದ ಸಂಕೇತ ಅಲ್ಲ ಅಂತ ಶ್ರೀಗಳು ಬಿಡುಗಡೆಯಾದ ವಿಡಿಯೋದಲ್ಲಿ ತಿಳಿಸಿದ್ದಾರೆ.
ಈಗಲಾದರೂ ಕೇಂದ್ರ ಸರ್ಕಾರ ಅನಾವಶ್ಯಕ ಮೂಗು ತೂರಿಸುವುದು ಬಿಡಲಿ. ಕರ್ನಾಟಕ ಸರ್ಕಾರಕ್ಕೆ ಹೆಚ್ಚು ಆರ್ಥಿಕ ನೆರವು ನೀಡಬೇಕು. ಆರ್ಥಿಕ ನೆರವು ನೀಡದೆ ಪದೇಪದೇ ಕಿರುಕುಳ ನೀಡಿದರೆ ಉತ್ತಮ ಆಡಳಿತ ಅಸಾಧ್ಯ. ಒಬ್ಬರನ್ನು ತೆಗೆದು ಮತ್ತೊಬ್ಬರನ್ನು ಹಾಕುವುದರಿಂದ ಕರ್ನಾಟಕದಲ್ಲಿ ಅವ್ಯವಸ್ಥೆ ಸೃಷ್ಟಿ ಆಗುತ್ತದೆ. ಅವ್ಯವಸ್ಥೆ ಆಗಲು ಕೇಂದ್ರ ಸರ್ಕಾರ ಅವಕಾಶ ನೀಡಬಾರದು ಅಂತ ಶ್ರೀಗಳು ಮನವಿ ಮಾಡಿದ್ದಾರೆ.
ಇದನ್ನೂ ಓದಿ
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತು; ಮೌನಕ್ಕೆ ಶರಣಾದ ಸುತ್ತೂರು ಮಠದ ಶ್ರೀಗಳು
ಈ ನಾಡು ಕಂಡಂತಹ ಶ್ರೇಷ್ಠ ನಾಯಕ; ಸಿಎಂ ಬಿ.ಎಸ್.ಯಡಿಯೂರಪ್ಪ ಪರ ವಿವಿಧ ಮಠಾಧೀಶರ ಬ್ಯಾಟಿಂಗ್
(Dr Sri Panditaradhya Shivacharya says if the government has the independence, it will be able to govern better)