ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಐವರ ಸಾವು ಪ್ರಕರಣ; ಗಂಜಿ ಕೇಂದ್ರದ ಆಹಾರದಲ್ಲೂ ಜಿರಳೆ ಪತ್ತೆ

ಕವಾಡಿಗರಹಟ್ಟಿ ಗಂಜಿ ಕೇಂದ್ರದಿಂದ ನೀಡಲಾದ ಆಹಾರದಲ್ಲಿ ಜಿರಳೆ ಪತ್ತೆಯಾಗಿತ್ತು. ತಡರಾತ್ರಿ‌ ಪ್ರತಿಭಟನೆ ನಡೆಸಿ ನಿವಾಸಿಗಳು ಆಕ್ರೋಶ ಹೊರ ಹಾಕಿದ್ದಾರೆ. ಗಂಜಿ ಕೇಂದ್ರದ ಸಿಬ್ಬಂದಿಗೆ ತರಾಟೆ ತೆಗೆದುಕೊಂಡಿದ್ದಾರೆ. ಸದ್ಯ ಸ್ಥಳಕ್ಕೆ ಚಿತ್ರದುರ್ಗ ತಹಶೀಲ್ದಾರ್ ನಾಗವೇಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಆಹಾರದ ಪರೀಕ್ಷೆ ನಡೆಸಿ ಕ್ರಮ‌ ಜರುಗಿಸುವ​ ಭರವಸೆ ನೀಡಿದ್ದಾರೆ.

ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಐವರ ಸಾವು ಪ್ರಕರಣ; ಗಂಜಿ ಕೇಂದ್ರದ ಆಹಾರದಲ್ಲೂ ಜಿರಳೆ ಪತ್ತೆ
ಜಿರಳೆ ಪತ್ತೆ ಹಿನ್ನೆಲೆ ಕವಾಡಿಗರಹಟ್ಟಿ ಬಡಾವಣೆ ನಿವಾಸಿಗಳ ಆಕ್ರೋಶ
Edited By: ಆಯೇಷಾ ಬಾನು

Updated on: Aug 23, 2023 | 11:37 AM

ಚಿತ್ರದುರ್ಗ, ಆ.23: ಚಿತ್ರದುರ್ಗ ಜಿಲ್ಲೆಯ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿ ಐವರು ಮೃತಪಟ್ಟಿದ್ದಾರೆ(Contaminated Water) . ಹಾಗೂ ಹಲವರು ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ ಸಂಬಂಧ ಕವಾಡಿಗರಹಟ್ಟಿಯಲ್ಲಿ ಗಂಜಿ ಕೇಂದ್ರ ತೆರೆಯಲಾಗಿದ್ದು ಗಂಜಿ ಕೇಂದ್ರದಿಂದ ವಿತರಿಸಿದ್ದ ಆಹಾರದಲ್ಲಿ ಜಿರಳೆ(cockroach) ಪತ್ತೆಯಾಗಿದೆ. ಹೀಗಾಗಿ ವಿಷಪೂರಿತ ಆಹಾರದಿಂದ ಸಮಸ್ಯೆಯಾದರೆ ಹೊಣೆ ಯಾರು? ಎಂದು ಗಂಜಿ ಕೇಂದ್ರದ ಸಿಬ್ಬಂದಿಗೆ ಜನ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ನಿನ್ನೆ ರಾತ್ರಿ ಕವಾಡಿಗರಹಟ್ಟಿ ಗಂಜಿ ಕೇಂದ್ರದಿಂದ ನೀಡಲಾದ ಆಹಾರದಲ್ಲಿ ಜಿರಳೆ ಪತ್ತೆಯಾಗಿತ್ತು. ತಡರಾತ್ರಿ‌ ಪ್ರತಿಭಟನೆ ನಡೆಸಿ ನಿವಾಸಿಗಳು ಆಕ್ರೋಶ ಹೊರ ಹಾಕಿದ್ದಾರೆ. ಗಂಜಿ ಕೇಂದ್ರದ ಸಿಬ್ಬಂದಿಗೆ ತರಾಟೆ ತೆಗೆದುಕೊಂಡಿದ್ದಾರೆ. ಸದ್ಯ ಸ್ಥಳಕ್ಕೆ ಚಿತ್ರದುರ್ಗ ತಹಶೀಲ್ದಾರ್ ನಾಗವೇಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಆಹಾರದ ಪರೀಕ್ಷೆ ನಡೆಸಿ ಕ್ರಮ‌ ಜರುಗಿಸುವ​ ಭರವಸೆ ನೀಡಿದ್ದಾರೆ. ಆದರೆ ಪರೀಕ್ಷಿಸಿ ಕ್ರಮ ಕೈಗೊಳ್ಳುವ ನಂಬಿಕೆ ಇಲ್ಲ ಎಂದು ಸ್ಥಳೀಯರು ಕಿಡಿಕಾರಿದ್ದಾರೆ. ಗಂಜಿ ಕೇಂದ್ರದಿಂದ ಕಳಪೆ ಆಹಾರ ಪೂರೈಸಲಾಗುತ್ತಿದೆ. ವಿಷಪೂರಿತ ಆಹಾರದಿಂದ ಸಮಸ್ಯೆಯಾದರೆ ಹೊಣೆ ಯಾರು ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ಇನ್ಮುಂದೆ ಕಲುಷಿತ ನೀರು ಸೇವಿಸಿ ಮರಣ ಹೊಂದಿದರೇ ಜಿ.ಪಂ ಸಿಇಒಗಳೇ ನೇರ ಹೊಣೆ: ಸಿಎಂ ಸಿದ್ದರಾಮಯ್ಯ

ನಗರಸಭೆಯ ಪೌರ ಕಾರ್ಮಿಕರಿಗೆ ಕಳಪೆ ಆಹಾರ

ಕೆಲ ದಿನಗಳ ಹಿಂದೆ ಚಿತ್ರದುರ್ಗದಲ್ಲಿ ನಗರಸಭೆಯ ಪೌರ ಕಾರ್ಮಿಕರಿಗೆ ಕಳಪೆ ಆಹಾರ ಪೂರೈಕೆ ಮಾಡಲಾಗುತ್ತಿದ್ದು ಉಪಹಾರದ ಬಾಕ್ಸ್ ನಲ್ಲಿ ಬೆಂದಿರುವ ಜಿರಳೆ ಪತ್ತೆಯಾಗಿತ್ತು. ಕರುನಾಡ ವಿಜಯಸೇನೆ ನೇತೃತ್ವದಲ್ಲಿ ಚಿತ್ರದುರ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ನಗರಸಭೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆದಿತ್ತು. ನಗರಸಭೆಯ ಪೌರಕಾರ್ಮಿಕರಾದ ತಿಪ್ಪೇಸ್ವಾಮಿ ಮತ್ತು 10-12 ಪೌರಕಾರ್ಮಿಕರು ಎಂದಿನಂತೆ ಬೆಳಗ್ಗೆ ನಗರ ಸ್ವಚ್ಛತೆಯಲ್ಲಿ ತೊಡಗಿದ್ದರು. ಬಳಿಕ ನಗರಸಭೆಯಿಂದ ಪೌರಕಾರ್ಮಿಕರಿಗೆ ಉಪಹಾರ ಪೂರೈಕೆ ಮಾಡಲಾಯಿತು. ಆದ್ರೆ, ಎಗ್ ರೈಸ್ ನಲ್ಲಿ ಬೆಂದ ಜಿರಳೆ ಪತ್ತೆ ಆಗಿದ್ದು ಕಾರ್ಮಿಕರು ಕಂಗಾಲಾಗಿದ್ದರು. ಅನೇಕ ಸಲ ಕಳಪೆ ಆಹಾರ ಪೂರೈಕೆ ಬಗ್ಗೆ ನಗರಸಭೆ ಅಧಿಕಾರಿಗಳಿಗೆ ದೂರು ಹೇಳಿದರೂ ಪ್ರಯೋಜನ ಆಗಿಲ್ಲ ಎಂದು ಪೌರ ಕಾರ್ಮಿಕ ತಿಪ್ಪೇಸ್ವಾಮಿ ಆಕ್ರೋಶ ಹೊರ ಹಾಕಿದ್ದರು.

ಚಿತ್ರದುರ್ಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:57 am, Wed, 23 August 23

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us