ಮದ್ಯ ಸೇವಿಸಿ ರಸ್ತೆಯಲ್ಲಿ ಮೋಜು ಮಸ್ತಿ; ಪ್ರಶ್ನೆ ಮಾಡಿದ ಭದ್ರಾ ವನ್ಯಜೀವಿ ವಿಭಾಗದ ಸಿಬ್ಬಂದಿಗಳ ಮೇಲೆ ಹಲ್ಲೆ
ರಸ್ತೆ ಮಧ್ಯೆ ಬೊಲೆರೋ ವಾಹನ ನಿಲ್ಲಿಸಿ ಮೋಜುಮಸ್ತಿ ಮಾಡಿದ ತಂಡಕ್ಕೆ ಪ್ರಶ್ನೆ ಮಾಡಿದ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಸದ್ಯ ಈ ಸಂಬಂಧ ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು: ಭದ್ರಾ ವನ್ಯಜೀವಿ ವಿಭಾಗದ ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮುತ್ತೋಡಿ ಬಳಿಯ ಹೊನ್ನಾಳದಲ್ಲಿ ನಡೆದಿದೆ. ಮದ್ಯ ಸೇವಿಸಿ ರಸ್ತೆಯಲ್ಲಿ ಮೋಜುಮಸ್ತಿ ಮಾಡುತ್ತಿದ್ದ ತಂಡಕ್ಕೆ ಪ್ರಶ್ನೆ ಮಾಡಿದ ಹಿನ್ನೆಲೆ ಉಪವಲಯ ಅರಣ್ಯಾಧಿಕಾರಿ ರಂಗಸ್ವಾಮಿ ಹಾಗೂ ಅರಣ್ಯ ರಕ್ಷಕ ಮಂಜುನಾಥ್ ಮೇಲೆ ಹಲ್ಲೆ ಮಾಡಿದ್ದಾರೆ.
ರಸ್ತೆ ಮಧ್ಯೆ ಬೊಲೆರೋ ವಾಹನ ನಿಲ್ಲಿಸಿ ಮೋಜುಮಸ್ತಿ ಮಾಡಿದ ತಂಡಕ್ಕೆ ಪ್ರಶ್ನೆ ಮಾಡಿದ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಸದ್ಯ ಈ ಸಂಬಂಧ ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಸಿಬ್ಬಂಧಿಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಮೈಸೂರು: ನರಸೀಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ ಹಲವು ದಿನಗಳಿಂದ ತಾಲ್ಲೂಕಿನಾದ್ಯಂತ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಮೈಸೂರು ಜಿಲ್ಲೆಯ ನರಸೀಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಪತ್ತೆಗೆ ಎಸ್ಪಿ ಚೇತನ್ ತಂಡ ರಚನೆ ಮಾಡಿದ್ದರು. ನಂಜನಗೂಡು ಡಿವೈಎಸ್ಪಿ ಗೋವಿಂದರಾಜು, ಸರ್ಕಲ್ ಇನ್ಸ್ಪೆಕ್ಟರ್ ಕೃಷ್ಣಪ್ಪ, ಪಿಎಸ್ಐ ಮಂಜು ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಪ್ರಕರಣ ನಡೆದ ಕೆಲವೇ ದಿನಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ನರಸೀಪುರ ಪೊಲೀಸ್ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ 2 ಟಾಟಾ ಏಸ್ ವಾಹನ, ಒಂದು ಬೈಕ್ ಹಾಗೂ ಪೈಪ್ಗಳು ವಶಕ್ಕೆ ಪಡೆಯಲಾಗಿದೆ. ನಾಗೇಂದ್ರ, ರಾಜು, ಅಬ್ದುಲ್ಲಾ, ಯಾಸಿರ್, ತಬ್ರೆಷ್ ಬಂಧಿತ ಆರೋಪಿಗಳು.
ಇದನ್ನೂ ಓದಿ: Tv9 Impact: ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಮೋಜು ಮಸ್ತಿ ಮಾಡಿದ್ದವರಿಗೆ ಪೊಲೀಸರಿಂದ ಎಚ್ಚರಿಕೆ
ಕೊವಿಡ್ ಟೈಮ್‌ನಲ್ಲಿ ಅಧಿಕಾರಿಗಳ ಮೋಜು-ಮಸ್ತಿ.. ಘೇರಾವ್ ಮಾಡಿ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು
Published On - 8:34 am, Fri, 1 October 21