AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ಬರಗಾಲಕ್ಕೆ ನೀರು-ಮೇವು ಸಿಗದೆ ಗೂಳೆ ಹೊರಟ ಕುರಿಗಾಹಿಗಳು;ಕ್ಯಾರೆ ಎನ್ನದ ಚಿತ್ರದುರ್ಗ ಜಿಲ್ಲಾಡಳಿತ

ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಭೀಕರ ಬರಗಾಲ ಎದುರಾಗಿದೆ. ಬಿತ್ತಿದ ಬೆಳೆ ಭೂಮಿಯಲ್ಲೇ ಹುಸಿಯಾಗಿ ರೈತಾಪಿ ವರ್ಗ ಕಂಗಾಲಾಗಿ ಕುಳಿತಿದೆ. ಮತ್ತೊಂದು ಕಡೆ ನೀರು-ಮೇವು ಸಿಗದೆ ಕುರಿ-ಮೇಕೆ ಜಾನುವಾರುಗಳ ಸಮೇತ ಕುರಿಗಾಹಿಗಳು ಗೂಳೆ ಹೊರಟಿದ್ದಾರೆ. ಆದ್ರೆ, ಜಿಲ್ಲಾಡಳಿತ ಮಾತ್ರ ಈ ಬಗ್ಗೆ ಮಾಹಿತಿಯೇ ಇಲ್ಲ ಎಂದು ಸಬೂಬು ಹೇಳುತ್ತಿದೆ. 

ಭೀಕರ ಬರಗಾಲಕ್ಕೆ ನೀರು-ಮೇವು ಸಿಗದೆ ಗೂಳೆ ಹೊರಟ ಕುರಿಗಾಹಿಗಳು;ಕ್ಯಾರೆ ಎನ್ನದ ಚಿತ್ರದುರ್ಗ ಜಿಲ್ಲಾಡಳಿತ
ಚಿತ್ರದುರ್ಗ
ಬಸವರಾಜ ಮುದನೂರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 28, 2023 | 8:53 PM

Share

ಚಿತ್ರದುರ್ಗ, ಅ.28: ರಣ ಭೀಕರ ಬರಗಾಲದಿಂದಾಗಿ ರೈತಾಪಿ ವರ್ಗ ಕಂಗಾಲಾಗಿ ಕುಳಿತಿದೆ. ಗುಡ್ಡ ಗಾಡು ಪ್ರದೇಶದಲ್ಲಿ ನೀರು ಮೇವಿಲ್ಲದೆ ಜನ-ಜಾನುವಾರುಗಳ ಸ್ಥಿತಿ ಶೋಚನೀಯವಾಗಿದೆ. ಈ ಹಿನ್ನಲೆ ಕುರಿ-ಮೇಕೆ ಜಾನುವಾರುಗಳನ್ನು ಬದುಕಿಸಿಕೊಳ್ಳಲು ಕುರಿಗಾಹಿಗಳು(Shepherds) ಗೂಳೆ ಹೊರಟಿದ್ದಾರೆ. ಹೌದು, ಕೋಟೆನಾಡು ಚಿತ್ರದುರ್ಗ(Chitradurga) ಜಿಲ್ಲೆಯಲ್ಲಿ ಜಾನುವಾರು ಸಾಕಣೆ ಕೃಷಿಯಷ್ಟೇ ಪ್ರಾಮುಖ್ಯತೆ ಪಡೆದುಕೊಂಡಿದೆ. ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು ಮತ್ತು ಮೊಳಕಾಲ್ಮೂರು ಭಾಗದಲ್ಲಿ ಜಾನುವಾರು ಸಾಕಣೆಯೇ ಪ್ರಮುಖ ಕಸುಬಾಗಿದೆ. ಆದ್ರೆ, ಈ ವರ್ಷ ಭೀಕರ ಬರಗಾಲ ಎದುರಾದ ಪರಿಣಾಮ ಕಾಡು ಬರಿದಾಗಿದೆ.

ಕುರಿ-ಮೇಕೆ ಜಾನುವಾರುಗಳಿಗೆ ನೀರು-ಮೇವು ಸಿಗದ ದುಸ್ಥಿತಿ ನಿರ್ಮಾಣ ಆಗಿದೆ. ಹೀಗಾಗಿ, ಚಳ್ಳಕೆರೆ ಮತ್ತು ಮೊಳಕಾಲ್ಮೂರು ಭಾಗದ ಕುರಿಗಾಹಿಗಳು ಕುರಿ-ಮೇಕೆ ಸಮೇತ ಬಳ್ಳಾರಿ ಮತ್ತು ಮಲೆನಾಡು ಸೇರಿದಂತೆ ಎಲ್ಲಿ ನೀರು-ಮೇವು ಕಾಣುತ್ತದೋ ಆಕಡೆಗೆ ಹೆಜ್ಜೆ ಹಾಕುತ್ತ ಸಾಗಿದ್ದಾರೆ. ಚಿತ್ರದುರ್ಗ-ಚಳ್ಳಕೆರೆ ರಸ್ತೆಗೆ ಹೋದರೆ ಸಾಕು ಪ್ರತಿನಿತ್ಯ ಗೂಳೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇನ್ನು ನೀರು-ಮೇವಿನ ಕೊರತೆ ಮತ್ತು ಎಲ್ಲಾದರೂ ಮೇವು ಕಂಡಲ್ಲಿ ಕುರಿ-ಮೇಕೆ ಬಿಟ್ಟರೆ ಗಲಾಟೆ ಶುರುವಾಗುತ್ತದೆ. ಸರ್ಕಾರ ಕುರಿ-ಮೇಕೆ, ಜಾನುವಾರುಗಳಿಗೆ ಯಾವುದೇ ವ್ಯವಸ್ಥೆ ಕಲ್ಪಿಸಿಲ್ಲ. ಹೀಗಾಗಿ, ಬೇರೆ ಪ್ರದೇಶಗಳಿಗೆ ಗೂಳೆ ಹೋಗುತ್ತಿದ್ದೇವೆ ಎಂದು ಕುರಿಗಾಹಿ ಮಂಜುನಾಥ್ ಎಂಬುವವರು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ:ಚಿತ್ರದುರ್ಗದಲ್ಲಿ ಭೀಕರ ಬರಗಾಲ: ಬರ ಪೀಡಿತ ಜಿಲ್ಲೆ ಎಂದು ಘೋಷಿಸಿ ಸೈಲೆಂಟ್ ಆದ ಸರ್ಕಾರ, ಆಕ್ರೋಶಗೊಂಡ ರೈತರು

ಗೂಳೆ ಹೋಗುತ್ತಿರುವ ಬಗ್ಗೆ ಮಾಹಿತಿ ಇಲ್ಲ ಎಂದ ಜಿಲ್ಲಾಧಿಕಾರಿ

ಇನ್ನು ಭೀಕರ ಬರಗಾಲದಿಂದ ಕೃಷಿ ಬೆಳೆ ಬಹುತೇಕ ಹಾನಿಗೊಳಗಾಗಿದೆ. ಜಾನುವಾರು ಸಾಕಣೆ ಮೇಲೂ ಭಾರೀ ದುಷ್ಪರಿಣಾಮ ಉಂಟಾಗಿದೆ. ಹೀಗಾಗಿ, ಕುರಿ-ಮೇಕೆ ಸಮೇತ ಅನೇಕರು ಗೂಳೆ ಹೋಗುತ್ತಿದ್ದಾರೆ. ಆದ್ರೆ, ಸರ್ಕಾರ ಮಾತ್ರ ಗೂಳೆ ಹೋಗದ ರೀತಿ ಕ್ರಮ ಕೈಗೊಂಡಿದ್ದೇವೆ. ನೀರು-ಮೇವಿನ ಸಮಸ್ಯೆ ಉಂಟಾಗದಂತೆ ಸಕಲ ವ್ಯವಸ್ಥೆಗಳನ್ನು ನೀಡಿದ್ದೇವೆಂದು ಹೇಳುತ್ತಲೇ ಇದೆ. ಜಿಲ್ಲಾಧಿಕಾರಿ ದಿವ್ಯಪ್ರಭು ಅವ್ರನ್ನು ಕೇಳಿದ್ರೆ ‘ ಗೂಳೆ ಹೋಗುತ್ತಿರುವ ಬಗ್ಗೆ ಮಾಹಿತಿ ಇಲ್ಲ, ಮಾಹಿತಿ ಪಡೆದು ಪ್ರತಿಕ್ರಿಯಿಸುತ್ತೇನೆ ಎನ್ನುತ್ತಾರೆ. ಅದೇ ಪ್ರಶ್ನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರನ್ನು ಕೇಳಿದ್ರೆ, ಯಾರೂ ಗೂಳೆ ಹೋಗುತ್ತಿಲ್ಲ. ಆ ಬಗ್ಗೆ ನಮಗಂತೂ ಮಾಹಿತಿ ಇಲ್ಲ. ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದಲ್ಲಿ ಭೀಕರ ಬರಗಾಲದಿಂದಾಗಿ ಒಂದು ಕಡೆ ಕೃಷಿಕ ವರ್ಗ ಹೈರಾಣಾಗಿದೆ. ಮತ್ತೊಂದು ಕಡೆ ಜಾನುವಾರು ಸಾಕಣೆಯನ್ನೇ ನಂಬಿಕೊಂಡಿದ್ದ ವರ್ಗವೂ ಗೂಳೆ ಹೋಗುವ ಸ್ಥಿತಿ ನಿರ್ಮಾಣ ಆಗಿದೆ. ಆದ್ರೆ, ಜಿಲ್ಲಾಡಳಿತ ಮಾತ್ರ ಈ ಬಗ್ಗೆ ಮಾಹಿತಿಯೇ ಇಲ್ಲವೆಂದು ವಾದಿಸುತ್ತ ಸೈಲೆಂಟಾಗಿ ಕುಳಿತಿದೆ. ಇನ್ನಾದರೂ ಜಿಲ್ಲಾಡಳಿತ ಮತ್ತು ಸರ್ಕಾರ ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್