ಚಿತ್ರದುರ್ಗ: ವಾಕಿಂಗ್ ಮುಗಿಸಿ ಮನೆಗೆ ತೆರಳಿದ್ದ ವೇಳೆ ಹೃದಯಾಘಾತದಿಂದ ಡಿವೈಎಸ್​ಪಿ ಸಾವು

ಚಿಕಿತ್ಸೆ ಫಲಿಸದೆ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಡಿಸಿಆರ್​ಬಿ ಮತ್ತು ಡಿವೈಎಸ್​ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಮೇಶ್, 1998 ಬ್ಯಾಚ್​ನಲ್ಲಿ ಪೊಲೀಸ್ ಸೇವೆಗೆ ಸೇರಿದ್ದರು. ಸದ್ಯ ಬಸವೇಶ್ವರ ಆಸ್ಪತ್ರೆಗೆ ಎಸ್​ಪಿ ಜಿ.ರಾಧಿಕಾ ಭೇಟಿ ನೀಡಿದ್ದಾರೆ.

ಚಿತ್ರದುರ್ಗ: ವಾಕಿಂಗ್ ಮುಗಿಸಿ ಮನೆಗೆ ತೆರಳಿದ್ದ ವೇಳೆ ಹೃದಯಾಘಾತದಿಂದ ಡಿವೈಎಸ್​ಪಿ ಸಾವು
ರಮೇಶ (52)
Follow us
TV9 Web
| Updated By: preethi shettigar

Updated on:Nov 09, 2021 | 12:19 PM

ಚಿತ್ರದುರ್ಗ: ಹೃದಯಾಘಾತದಿಂದ ಡಿವೈಎಸ್​ಪಿ ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ವಾಕಿಂಗ್ ಮುಗಿಸಿ ಮನೆಗೆ ತೆರಳಿದ್ದ ವೇಳೆ ಧೀಡಿರ್ ಕುಸಿದು ಬಿದ್ದಿದ್ದ ಡಿವೈಎಸ್​ಪಿ ರಮೇಶ (52) ಅವರನ್ನು ತಕ್ಷಣವೇ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಡಿಸಿಆರ್​ಬಿ ಮತ್ತು ಡಿವೈಎಸ್​ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಮೇಶ್, 1998 ಬ್ಯಾಚ್​ನಲ್ಲಿ ಪೊಲೀಸ್ ಸೇವೆಗೆ ಸೇರಿದ್ದರು. ಸದ್ಯ ಬಸವೇಶ್ವರ ಆಸ್ಪತ್ರೆಗೆ ಎಸ್​ಪಿ ಜಿ.ರಾಧಿಕಾ ಭೇಟಿ ನೀಡಿದ್ದಾರೆ.

ಕೋಲಾರದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಒಂದೇ ಕುಟುಂಬದ ಐವರು ಸಾವು ಮಗು ಅಪಹರಣ ಪ್ರಕರಣದಲ್ಲಿ ಪೊಲೀಸರು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದರಿಂದ ಮರ್ಯಾದೆಗಂಜಿದ ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಕೋಲಾರದ ಕಾರಂಜಿಕಟ್ಟೆಯಲ್ಲಿ ನಡೆದಿದೆ. ಮಗು ಅಪರಹಣ ಪ್ರಕರಣ ಸಂಬಂಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರಿಂದ ಮರ್ಯಾದಗಂಜಿದ್ದ ಕುಟುಂಬ ಆತ್ಮಹತ್ಯೆಗೆ ನಿರ್ಧಾರ ಮಾಡಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಟ್ಟಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ್ದ ಒಂದೇ ಕುಟುಂಬದ ಐವರು ಕೋಲಾರದ ಆರ್.ಎಲ್.ಜಾಲಪ್ಪ ಖಾಸಗಿ ಆಸ್ಪತ್ರೆಯಲ್ಲಿ ಇಂದು ಚಿಕಿತ್ಸೆ ಫಲಕಾರಿಯಾಗೆ ಸಾವನ್ನಪ್ಪಿದ್ದಾರೆ. ಮುನಿಯಪ್ಪ(70), ಬಾಬು (45), ಗಂಗೋತ್ರಿ(17) ನಾರಾಯಣಮ್ಮ (65) ಹಾಗೂ ಪುಷ್ಪ (33) ಮೃತರು ಎಂದು ತಿಳಿದುಬಂದಿದೆ. ಎಲ್ಲರೂ ವಿಷ ಸೇವಿಸುವ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾರೆ. ಡೆತ್ ನೋಟ್ನಲ್ಲಿ ತಮ್ಮದಲ್ಲದ ತಪ್ಪಿಗೆ ನಮ್ಮನ್ನು ಪೊಲೀಸ್ ಠಾಣೆಗೆ ಕರೆಸಿದ್ದರು. ಇದರಿಂದ ಅವಮಾನಿತರಾಗಿ ಮನನೊಂದು ಎಲ್ಲರೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಅಂತ ಉಲ್ಲೇಖಿಸಿದ್ದಾರೆ.

ಏನದು ಮಗು ಅಪಹರಣ ಪ್ರಕರಣ? ಕೋಲಾರ ತಾಲೂಕಿನ ಹೊನ್ನೇನಹಳ್ಳಿಯ ಸತ್ಯ ಹಾಗೂ ಸುಮಿತ್ರ ಎಂಬುವರು ಪ್ರೀತಿಸಿ ಮನೆಯವರಿಗೆ ತಿಳಿಸದೆ ಮದುವೆಯಾಗಿದ್ದರು. ಅವರಿಗೆ ಒಂದು ಹೆಣ್ಣು ಮಗು ಜನಿಸಿತ್ತು. ಮನೆಯವರಿಗೆ ವಿಷಯ ತಿಳಿದರೆ ಹೇಗೋ ಎನ್ನುವ ಭಯದಲ್ಲಿ ಮಗುವನ್ನು ತಮ್ಮ ಪರಿಚಯಸ್ಥರಾದ ಕಾರಂಜಿಕಟ್ಟೆ ನಿವಾಸಿ ಗೀತಾ ಎನ್ನುವವರಿಗೆ ಅಕ್ಟೋಬರ್18 ರಂದು 9 ದಿನದ ಮಗುವನ್ನು ಕೊಟ್ಟಿದ್ದರು. ಈ ವೇಳೆ ಗೀತಾರ ಜೊತೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪುಷ್ಪಾ ಎಂಬುವವರು ಹೋಗಿದ್ದರು. ಈ ಕಾರಣಕ್ಕೆ ಮಗು ಅಪಹರಣ ಪ್ರಕರಣದ ದೂರಿನಲ್ಲಿ ಪುಷ್ಪಾರ ಹೆಸರು ದಾಖಲಾಗಿತ್ತು.

ಅಲ್ಲದೇ ಕೋಲಾರಮ್ಮ ದೇವಾಲಯದ ಬಳಿ ಕುಳಿತು ಮಾತನಾಡಿ ಮಗುವನ್ನು ತೆಗೆದುಕೊಂಡು ಹೋಗಿರುವ ದೃಶ್ಯ ಪೊಲೀಸರಿಗೆ ಸಿಕ್ಕಿದ್ದು, ಅದರಲ್ಲಿ ಪುಷ್ಪಾ ಇದ್ದರು. ಈ ಕಾರಣಕ್ಕೆ ಪೊಲೀಸರು ಪುಷ್ಪಾರನ್ನು ಕೋಲಾರದ ಮಹಿಳಾ ಪೊಲೀಸ್ ಠಾಣೆಗೆ ಕರೆದು ವಿಚಾರಣೆ ನಡೆಸಿದ್ದರು. ಅಲ್ಲದೆ ಮಗುವನ್ನು ತಂದು ಕೊಡುವಂತೆ ತಾಕೀತು ಮಾಡಿದ್ದರು. ಇದಕ್ಕೆ ಅಂಜಿದ ಇಡೀ ಕುಟುಂಬಸ್ಥರು ಆತ್ಮಹತ್ಯೆಗೆ ನಿರ್ಧರಿಸಿದ್ದರು.

ಇದನ್ನೂ ಓದಿ: ಕ್ಯಾಬ್ ಡ್ರೈವರ್​ಗಳಲ್ಲಿ ಹೃದಯಾಘಾತ ಹೆಚ್ಚುತ್ತಿರುವುದಕ್ಕೆ ಅವರ ಜೀವನಶೈಲಿ ಕಾರಣ: ಡಾ ರಾಹುಲ ಪಾಟೀಲ್

ಕಿರಿ ವಯಸ್ಸಿನವರು ಹೃದಯಾಘಾತಕ್ಕೆ ಈಡಾಗುತ್ತಿರುವ ಆಯಾಮದ ಮೇಲೆ ಬೆಂಗಳೂರಿನಲ್ಲಿ ಸಂಶೋಧನೆ ನಡೆಯುತ್ತಿದೆ: ಡಾ ರಾಹುಲ ಪಾಟೀಲ

Published On - 12:14 pm, Tue, 9 November 21

ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್