AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೌಕರಿ ಕೊಡಿಸುವುದಾಗಿ ನಂಬಿಸಿ ಲಕ್ಷ ಲಕ್ಷ ಹಣ ವಂಚನೆ! ಹೊಸದುರ್ಗ ಪೊಲೀಸರಿಂದ ಐವರು ಅರೆಸ್ಟ್

ಹಣ ಲಪಟಾಯಿಸಿದ ವಂಚಕರ ಗ್ಯಾಂಗ್ ಉದ್ಯೋಗಾಕಾಂಕ್ಷಿಗಳ ದಾಖಲೆಗಳನ್ನು ಪಡೆದಿದೆ. ಬಳಿಕ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ಕೆಎಸ್ಆರ್​ಟಿ ತರಬೇತಿ ಕೇಂದ್ರದ ಮುಂಭಾಗದ ಪ್ರವಾಸಿ ಮಂದಿರಕ್ಕೆ ಕರೆಸಿ ಸಂದರ್ಶನದ ನಾಟಕ ನಡೆಸಿದೆ.

ನೌಕರಿ ಕೊಡಿಸುವುದಾಗಿ ನಂಬಿಸಿ ಲಕ್ಷ ಲಕ್ಷ ಹಣ ವಂಚನೆ! ಹೊಸದುರ್ಗ ಪೊಲೀಸರಿಂದ ಐವರು ಅರೆಸ್ಟ್
ಬಂಧಿತ ಆರೋಪಿಗಳು
TV9 Web
| Edited By: |

Updated on:Oct 27, 2021 | 11:37 AM

Share

ಚಿತ್ರದುರ್ಗ: ನಿರುದ್ಯೋಗ ಎಂಬುದು ಪೆಡಂಭೂತವಾಗಿ ಯುವ ಸಮೂಹವನ್ನು ಕಾಡುತ್ತಿದೆ. ಸರ್ಕಾರಿ ನೌಕರಿ ಎಂಬುದು ಮರೀಚಿಕೆಯಂತಾದ ಸಂದಿಗ್ಧ ಕಾಲಘಟ್ಟವಿದು. ಇದೇ ಸಮಯವನ್ನು ಬಂಡವಾಳ ಮಾಡಿಕೊಂಡ ವಂಚಕರು ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ಸುಮಾರು 500 ಜನರಿಗೆ ವಂಚಿಸಿ, 70 ಲಕ್ಷ ರೂಪಾಯಿ ಲಪಟಾಯಿಸಿದ್ದಾರೆ. ವಂಚಕರ ಜಾಡು ಹಿಡಿದ ಹೊಸದುರ್ಗ ಠಾಣೆಯ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ವಂಚಕರ ಬಂಧನ ವಂಚನೆಯಲ್ಲಿ ಭಾಗಿಯಾಗಿದ್ದ ಬಾಗಲಕೋಟೆಯ ಮಹಮ್ಮದ್ ಸಾಬ್, ವಿಜಯಪುರದ ಬಸವರಾಜ್, ಬಾಗಲಕೋಟೆಯ ವೀರಭದ್ರಪ್ಪ, ವಿಜಯನಗರ ಜಿಲ್ಲೆಯ ಮಂಜುನಾಥ, ಬೆಂಗಳೂರಿನ ಅನಿಲ್ರನ್ನು ಹೊಸದುರ್ಗ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 12ಲಕ್ಷ 40ಸಾವಿರ ರೂ. ನಗದು ಹಾಗೂ ಕಾರು ವಶಕ್ಕೆ ಪಡೆದಿದ್ದಾರೆ.

ವಂಚಕರ ಬಲೆ ಸಾರಿಗೆ ಇಲಾಖೆಯಲ್ಲಿ 2019ರಲ್ಲಿ ಸಂಚಾರಿ ನಿರೀಕ್ಷಕರು ಹಾಗೂ ಸಹಾಯಕ ಸಂಚಾರಿ ನಿರೀಕ್ಷಕರ ಹುದ್ದೆಗಳನ್ನು ಕರೆಯಲಾಗಿದೆ. ಸಾರಿಗೆ ಇಲಾಖೆ ಸೇರಿದಂತೆ ಸರ್ಕಾರದ ಮಟ್ಟದಲ್ಲಿ, ವಿಧಾನಸೌಧ ಮತ್ತು ವಿಕಾಸ ಸೌಧದಲ್ಲಿ ನಮಗೆ ಅನೇಕ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ. ಹಣ ನೀಡಿದರೆ ನೌಕರಿ ಮಾಡಿಸಿಕೊಡುತ್ತೇವೆ ಎಂದು ವಂಚಕರ ಗ್ಯಾಂಗ್ ಉದ್ಯೋಗಾಕಾಂಕ್ಷಿಗಳಿಗೆ ಬಲೆ ಬೀಸಿದೆ. ಪರಿಣಾಮ ರಾಜ್ಯದ ವಿವಿಧೆಡೆ ಸುಮಾರು 500 ಜನ ಉದ್ಯೋಗಾಕಾಂಕ್ಷಿಗಳು ವಂಚಕರ ಮೋಸದ ಜಾಲಕ್ಕೆ ಬಲಿಯಾಗಿ ಹಣ ನೀಡಿದ್ದಾರೆ.

ಹಣ ಲಪಟಾಯಿಸಿದ ವಂಚಕರ ಗ್ಯಾಂಗ್ ಉದ್ಯೋಗಾಕಾಂಕ್ಷಿಗಳ ದಾಖಲೆಗಳನ್ನು ಪಡೆದಿದೆ. ಬಳಿಕ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ಕೆಎಸ್ಆರ್​ಟಿ ತರಬೇತಿ ಕೇಂದ್ರದ ಮುಂಭಾಗದ ಪ್ರವಾಸಿ ಮಂದಿರಕ್ಕೆ ಕರೆಸಿ ಸಂದರ್ಶನದ ನಾಟಕ ನಡೆಸಿದೆ. ಅಲ್ಲದೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆಸಿಕೊಂಡು ಮೆಡಿಕಲ್ ಟೆಸ್ಟ್ ಮಾಡಿಸಿದೆ. ನಕಲಿ ಆದೇಶ ಪತ್ರಗಳನ್ನು ನೀಡಿ ಕಳುಹಿಸಿದೆ. ವಂಚಕರು ನೀಡಿದ ನಕಲಿ ಆದೇಶ ಪತ್ರಗಳನ್ನು ಹಿಡಿದು ನೌಕರಿಗೆಂದು ಸಾರಿಗೆ ಇಲಾಖೆ ಕಚೇರಿಗೆ ಹೋದಾಗ ಸತ್ಯಾಂಶ ಬಯಲಾಗಿದೆ.

ಹೊಸದುರ್ಗ ಠಾಣೆಗೆ ದೂರು ಹೊಸದುರ್ಗದ ಅಭಿಷೇಕ್ ಎಂಬುವರು ಅಕ್ಟೋಬರ್ 9ರಂದು ಈ ಬಗ್ಗೆ ದೂರು ನೀಡಿದ್ದಾರೆ. ಮಹ್ಮದ್ ಸಾಬ್ ಮತ್ತಿತರರು ಸಾರಿಗೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿ ನೂರಾರು ಜನರ ಬಳಿ ಹಣ ಪಡೆದು ವಂಚಿಸಿದ್ದಾರೆ. ನಕಲಿ ಆದೇಶ ಪತ್ರ ನೀಡಿದ್ದು, ಈ ಬಗ್ಗೆ ತನಿಖೆ ನಡೆಸಿ ಕ್ರಮಕೈಗೊಳ್ಳುವ ಮೂಲಕ ನ್ಯಾಯ ಒದಗಿಸುವಂತೆ ಕೇಳಿಕೊಳ್ಳುತ್ತಾರೆ. ದೂರು ಆಧರಿಸಿ ಸಿಪಿಐ ಫೈಜುಲ್ಲಾ ನೇತೃತ್ವದ ತಂಡ ತನಿಖೆ ಕೈಗೊಂಡಾಗ ವಂಚಕರು ಬಲೆಗೆ ಬಿದ್ದಿದ್ದಾರೆ. ಮಂಜುನಾಥ ಹಾಗೂ ಅನಿಲ್ ಈಗಾಗಲೇ ವಂಚನೆ ಪ್ರಕರಣದಲ್ಲಿ ಬಂಧಿತರಾಗಿದ್ದು, ಪರಪ್ಪನ ಅಗ್ರಹಾರದಲ್ಲಿದ್ದರು. ಕೋರ್ಟ್ ಅನುಮತಿ ಪಡೆದು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ.

ಸಾರಿಗೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಉದ್ಯೋಗಾಕಾಂಕ್ಷಿಗಳಿಗೆ ವಂಚಿಸುತ್ತಿದ್ದ ಜಾಲವನ್ನು ಹೊಸದುರ್ಗ ಠಾಣೆಯ ಸಿಪಿಐ ಫೈಜುಲ್ಲಾ ನೇತೃತ್ವದ ತಂಡ ಭೇದಿಸಿದೆ. ಬಾಗಲಕೋಟೆ, ವಿಜಯಪುರ, ವಿಜಯನಗರ ಹಾಗೂ ಬೆಂಗಳೂರು ಮೂಲದ ಆರೋಪಿಗಳನ್ನು ಬಂಧಿಸಲಾಗಿದೆ. ಇಬ್ಬರು ಆರೋಪಿಗಳು ಈಗಾಗಲೇ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದರು. ಅವರನ್ನು ಕೋರ್ಟ್ ಅನುಮತಿ ಮೇರೆಗೆ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಸೂಕ್ತ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಜಿ ರಾಧಿಕಾ ತಿಳಿಸಿದ್ದಾರೆ.

ಇದನ್ನೂ ಓದಿ

ಪೆಗಾಸಸ್ ತಂತ್ರಾಂಶ ಗೂಢಚಾರಿಕೆ ಪ್ರಕರಣ: ತನಿಖೆಗೆ ತಜ್ಞರ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರಕ್ಕೆ ಹಿನ್ನಡೆ

KBC 13: ₹ 12.5 ಲಕ್ಷ ಮೊತ್ತದ ಕ್ರಿಕೆಟ್ ಕುರಿತ ಪ್ರಶ್ನೆಗೆ ತಪ್ಪಾದ ಉತ್ತರ ನೀಡಿದ ಸ್ಪರ್ಧಿ; ನೀವು ಉತ್ತರಿಸಬಲ್ಲಿರಾ?

Published On - 11:18 am, Wed, 27 October 21

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ