ಚಿತ್ರದುರ್ಗ: ಹೊಸದುರ್ಗ ಪಟ್ಟಣದ ಕುಂಚಿಟಿಗ ಮಠದ ಬಳಿ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಮತ್ತೊಂದು ಚಿರತೆ ಬಿದ್ದಿದೆ. ಕಳೆದ ಎರಡು ದಿನಗಳ ಹಿಂದಷ್ಟೇ ಚಿರತೆಯೊಂದು ಬೋನಿಗೆ ಬಿದ್ದಿತ್ತು.
ಒಂದು ವಾರದಿಂದ ಕುಂಚಿಟಿಗ ಮಠದ ಬಳಿ 2ಚಿರತೆ ಕಾಣಿಸಿಕೊಂಡಿದ್ದವು. ಹೀಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಬೋನು ಅಳವಡಿಸಿದ್ದರು. 2 ದಿನಗಳ ಹಿಂದೆ ಒಂದು ಚಿರತೆ ಬೋನಿಗೆ ಬಿದ್ದಿತ್ತು. ಇದೀಗ ಮತ್ತೊಂದು ಚಿರತೆಯೂ ಬೋನಿಗೆ ಬಿದ್ದಿದೆ.