AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಆಪ್ತ, ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ ವಿಧಿವಶ

ಗಾಂಧಿ ಪರಿವಾರದ ಆಪ್ತ ಹಾಗೂ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ (95) ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇಂದು ಚಿತ್ರದುರ್ಗದ ಮುಕ್ತಿಧಾಮದಲ್ಲಿ ಅವರ ಅಂತ್ಯಸಂಸ್ಕಾರ ನಡೆಯಲಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಜಯದೇವ ಕ್ರೀಡಾಂಗಣ ಸೇರಿದಂತೆ ವಿವಿಧೆಡೆ ವ್ಯವಸ್ಥೆ ಮಾಡಲಾಗಿದೆ. ಮೃತರ ಅಂತಿಮ ದರ್ಶನ ಪಡೆಯಲು ಸಿಎಂ ಹಾಗೂ ಡಿಸಿಎಂ ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದಾರೆ.

ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಆಪ್ತ, ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ ವಿಧಿವಶ
ಹೆಚ್ ಹನುಮಂತಪ್ಪ(95) ವಿಧಿವಶ
ಬಸವರಾಜ ಮುದನೂರ್
| Edited By: |

Updated on: Jul 13, 2026 | 8:34 AM

Share

ಮುಖ್ಯಾಂಶಗಳು

  • ಗಾಂಧಿ ಪರಿವಾರದ ಆಪ್ತ, ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ ನಿಧನ
  • ಇಂದು ಚಿತ್ರದುರ್ಗದ ಮುಕ್ತಿಧಾಮದಲ್ಲಿ ಅಂತಿಮ ದರ್ಶನ ಹಾಗೂ ಅಂತ್ಯಸಂಸ್ಕಾರ
  • ಅಂತಿಮ ನಮನ ಸಲ್ಲಿಸಲು ಚಿತ್ರದುರ್ಗಕ್ಕೆ ಆಗಮಿಸಲಿರುವ ಸಿಎಂ ಮತ್ತು ಡಿಸಿಎಂ

ಚಿತ್ರದುರ್ಗ, ಜುಲೈ 13: ಇಂದಿರಾಗಾಂಧಿ, ರಾಜೀವ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರೊಂದಿಗೆ ಅತ್ಯಂತ ನಿಕಟ ಸಂಪರ್ಕ ಹೊಂದಿದ್ದ, ಕಾಂಗ್ರೆಸ್‌ನ ಹಿರಿಯ ರಾಷ್ಟ್ರೀಯ ನಾಯಕ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ (95) ಅವರು ವಯೋಸಹಜ ಅನಾರೋಗ್ಯದಿಂದ ನಿನ್ನೆ (ಭಾನುವಾರ) ಮಧ್ಯಾಹ್ನ ವಿಧಿವಶರಾಗಿದ್ದಾರೆ. ಗಾಂಧಿ ಪರಿವಾರಕ್ಕೆ ಅತ್ಯಂತ ಆಪ್ತರಾಗಿದ್ದ ಹನುಮಂತಪ್ಪ ಮೂರು ಬಾರಿ ರಾಜ್ಯಸಭಾ ಸದಸ್ಯರಾಗಿ ಮತ್ತು ಎರಡು ಬಾರಿ ಕೇಂದ್ರ ರೇಷ್ಮೆ ಮಂಡಳಿಯ ಅಧ್ಯಕ್ಷರಾಗಿ ದೇಶ ಹಾಗೂ ರಾಜ್ಯಕ್ಕೆ ಗಣನೀಯ ಸೇವೆ ಸಲ್ಲಿಸಿದ್ದರು. ಅವರ ನಿಧನಕ್ಕೆ ರಾಜಕೀಯ ಗಣ್ಯರು ತೀವ್ರ ಕಂಬನಿ ಮಿಡಿದಿದ್ದಾರೆ.

ಇಂದು ಮಧ್ಯಾಹ್ನ ಅಂತ್ಯಸಂಸ್ಕಾರ; ಸಿಎಂ, ಡಿಸಿಎಂ ಭೇಟಿ

ಮೃತರ ಅಂತ್ಯಸಂಸ್ಕಾರವು ಇಂದು ಮಧ್ಯಾಹ್ನ 4 ಗಂಟೆಗೆ ಚಿತ್ರದುರ್ಗದ ಮುಕ್ತಿಧಾಮದಲ್ಲಿ ನೆರವೇರಲಿದೆ. ಗಣ್ಯರ ಅಂತಿಮ ದರ್ಶನಕ್ಕಾಗಿ ನಗರದ ವಿವಿಧೆಡೆ ಸಾರ್ವಜನಿಕ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 10 ಗಂಟೆಯವರೆಗೆ ನೆಹರು ನಗರದ ಅವರ ನಿವಾಸದ ಬಳಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 10 ರಿಂದ 11 ಗಂಟೆಯವರೆಗೆ ಸರಸ್ವತಿ ಕಾನೂನು ಕಾಲೇಜು ಆವರಣ, 11:30ರವರೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿ, ನಂತರ ಜಯದೇವ ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಗಣ್ಯರ ಆಗಮನ ಮತ್ತು ಬಂದೋಬಸ್ತ್

ರಾಷ್ಟ್ರೀಯ ನಾಯಕರಾಗಿದ್ದ ಹನುಮಂತಪ್ಪ ಅವರಿಗೆ ಅಂತಿಮ ನಮನ ಸಲ್ಲಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಮಧ್ಯಾಹ್ನ 2:15ಕ್ಕೆ ಹೆಲಿಕಾಪ್ಟರ್ ಮೂಲಕ ಚಿತ್ರದುರ್ಗಕ್ಕೆ ಆಗಮಿಸಲಿದ್ದಾರೆ. ಸಿಎಂ ಮತ್ತು ಡಿಸಿಎಂ ಭೇಟಿಯ ಹಿನ್ನೆಲೆಯಲ್ಲಿ ಜಯದೇವ ಕ್ರೀಡಾಂಗಣ ಹಾಗೂ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ