ಚಳ್ಳಕೆರೆ ಬಳಿ ಭೀಕರ ಅಪಘಾತ; ಸೇತುವೆಗೆ ಕಾರು ಡಿಕ್ಕಿ, ಮೂವರು ಪುಟ್ಟ ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ದುರ್ಮರಣ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಸೇತುವೆಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರು ಪುಟ್ಟ ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಇನ್ನು ಉಳಿದ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಚಿತ್ರದುರ್ಗ, ಜ.25: ಸೇತುವೆಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಭೀಕರ ದುರ್ಘಟನೆ (Accident) ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಪುಟ್ಟ ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ (Death). ಉಳಿದ ಮೂವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಕಾರು ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಕಾರು ಡಿಕ್ಕಿಯಾಗಿದೆ. ಈ ಪರಿಣಾಮ ಅಪಘಾತ ಸಂಭವಿಸಿದ್ದು 2 ವರ್ಷದ ಸಿಂಧುಶ್ರೀ, 5 ತಿಂಗಳ ಹಯ್ಯಾಳಪ್ಪ ಎಂಬ ಪುಟ್ಟ ಮಗು, 3 ತಿಂಗಳ ರಕ್ಷಾ ಎಂಬ ಮತ್ತೊಂದು ಮಗು ಸೇರಿ ಲಿಂಗಪ್ಪ (26) ಅವರು ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ.
ಕಾರಿನಲ್ಲಿದ್ದ ಇನ್ನುಳಿದ ಯಲ್ಲಮ್ಮ (30), ಮಲ್ಲಮ್ಮ (20), ನಾಗಪ್ಪ(35) ಅವರಿಗೆ ಗಂಭೀರ ಗಾಯಗಳಾಗಿದ್ದು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮೃತರು ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ದಂಡಮ್ಮನಹಳ್ಳಿ ಗ್ರಾಮದವರು ಎಂದು ತಿಳಿದು ಬಂದಿದೆ. ದೇವದುರ್ಗದಿಂದ ಬೆಂಗಳೂರಿಗೆ ತೆರಳುವಾಗ ಭೀಕರ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪಿಎಸ್ಐ ಶಿವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಬೆಂಗಳೂರು: ಡಿವೈಡರ್ ಮೇಲೆ ಲಾರಿ ಹಾರಿಸಿದ ಚಾಲಕ, ಮುಂದೆ ಬರುತ್ತಿದ್ದ ಬೈಕ್ಗೆ ಡಿಕ್ಕಿ; ಸವಾರ ಗಂಭೀರ
ದ್ವಿಚಕ್ರಗಳ ಮಧ್ಯೆ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು
ದ್ವಿಚಕ್ರಗಳ ಮಧ್ಯೆ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಾವೇರಿ ನಗರದ ಮೆಣಸಿನಕಾಯಿ ಪೆಟ್ರೋಲ್ ಬಂಕ್ ಎದುರು ಭೀಕರ ಅಪಘಾತ ಸಂಭವಿಸಿದೆ. ಬೈಕ್ ಯೂಟರ್ನ್ ತೆಗುದುಕೊಳ್ಳುವ ವೇಳೆ ರಭಸವಾಗಿ ಬಂದ ಮತ್ತೊಬ್ಬ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಗುದ್ದಿದ ರಭಸಕ್ಕೆ ಬೈಕ್ ಸವಾರನ ತಲೆಗೆ ಪೆಟ್ಟಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಈ ಭೀಕರ ಅಪಘಾತದ ದೃಶ್ಯ CCTV ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಮೃತನನ್ನು ಹಾವೇರಿಯ ಟ್ರ್ಯಾಕ್ಟರ್ ಶೋರೊಂ ಮಾಲೀಕ ರಾಜು ಕಂಬಿ ಎಂದು ಗುರುತಿಸಲಾಗಿದೆ.
ಭೀಕರ ಅಪಘಾತ, ಮೂರುಜನರ ದಾರುಣ ಸಾವು
ಎರಡು ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ದಾರುಣ ಸಾವನ್ನಪ್ಪಿದ್ದಾರೆ. ತಮಿಳುನಾಡಿನ ಧರ್ಮಪುರಿ ಬಳಿಯ ಬೆಂಗಳೂರು-ಸೇಲಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಡಿಕ್ಕಿ ಹೊಡೆದ ಲಾರಿ, ಬಳಿಕ ನಾಲ್ಕೈದು ಕಾರುಗಳಿಗೆ ಗುದ್ದಿದೆ. ಇದಾದ ಬಳಿಕ ಒಂದು ಲಾರಿ ಬ್ರಿಡ್ಜ್ ಮೇಲಿಂದ ಕೆಳಗೆ ಬಿದ್ದಿದೆ. ಮತ್ತೊಂದು ಲಾರಿಗೆ ಹೆದ್ದಾರಿಯಲ್ಲಿಯೇ ಬೆಂಕಿ ಹೊತ್ತಿಕೊಂಡು ಉರಿದಿದೆ. ದುರ್ಘಟನೆಯಲ್ಲಿ ಮೂವರು ಬಲಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಭಯಾನಕ ದೃಶ್ಯ ಹೆದ್ದಾರಿಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 7:33 am, Thu, 25 January 24