ಭಾರತೀಯ ಸೇನೆಯಲ್ಲಿ ಕೆಲಸ ಕೊಡಿಸುವುದಾಗಿ 150 ಯುವಕರಿಗೆ ವಂಚನೆ; ಆರೋಪಿ ಬಂಧನ

ಭಾರತೀಯ ಸೇನೆ, ವಾಯುಸೇನೆ ಮತ್ತು ನೌಕಾಪಡೆಯಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ಹುಬ್ಬಳ್ಳಿ ಮೂಲದ ಶಿವರಾಜ್ ವಟಗಲ್ ಮತ್ತು ಆತನ ಸಹಚರರು 150 ಜನ ಯುವಕರಿಗೆ 1 ಕೋಟಿ ರೂ. ವಂಚಿಸಿದ್ದಾರೆ. ವಂಚಕ ಶಿವರಾಜ್​ ಮತ್ತು ಆತನ ಸಂಗಾತಿ ಬೀಮವ್ವ ವಿರುದ್ಧ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಭಾರತೀಯ ಸೇನೆಯಲ್ಲಿ ಕೆಲಸ ಕೊಡಿಸುವುದಾಗಿ 150 ಯುವಕರಿಗೆ ವಂಚನೆ; ಆರೋಪಿ ಬಂಧನ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Oct 24, 2023 | 7:45 AM

ಚಿತ್ರದುರ್ಗ ಅ.24: ಭಾರತೀಯ ಸಶಸ್ತ್ರ ಪಡೆಗಳಲ್ಲಿ (Indian armed forces) ಉದ್ಯೋಗ ನೀಡುವುದಾಗಿ ಭರವಸೆ ನೀಡಿ 150 ಜನ ಯುವಕರಿಗೆ 1 ಕೋಟಿ ರೂ. ವಂಚಿಸಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಹುಬ್ಬಳ್ಳಿ (Hubballi) ಮೂಲದ ಶಿವರಾಜ್ ವಟಗಲ್ (40) ಬಂಧಿತ ಆರೋಪಿ. ಶಿವರಾಜ್ ವಟಗಲ್ ಭಾರತೀಯ ಸೇನೆಯಲ್ಲಿ (Indian Army) ಕಾರ್ಯನಿರ್ವಹಿಸಿದ್ದೇನೆ ಎಂದು ಸುಳ್ಳು ಹೇಳಿ ಯುವಕರನ್ನು ನಂಬಿಸುತ್ತಿದ್ದನು.

ಯುವಕರನ್ನು ನಂಬಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದನು. ಈ ದಾಖಲೆಗಳನ್ನು ಯುವಕರಿಗೆ ತೋರಿಸಿ ನಂಬಿಸುತ್ತಿದ್ದನು. ಭಾರತೀಯ ಸೇನೆ, ವಾಯುಸೇನೆ ಮತ್ತು ನೌಕಾಪಡೆಯಲ್ಲಿ ಉದ್ಯೋಗ  ಕೊಡಿಸುತ್ತೇನೆ ಎಂದು ಶಿವರಾಜ್ ವಟಗಲ್  150 ಯುವಕರಿಗೆ 1 ಕೋಟಿ ರೂ. ವಂಚಿಸಿದ್ದನು. ಈತನಿಂದ ವಂಚನೆಗೆ ಒಳಗಾದ ಪ್ರಕಾಶ್ (31) ಎಂಬುವರು ದಾವಣಗೆರೆ ಜಿಲ್ಲೆಯ ಶಿವರಾಜ್ ವಟಗಲ್ ವಿರುದ್ಧ ಚಿತ್ರದುರ್ಗದ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸೈಬರ್ ವಂಚನೆ ಪ್ರಕರಣದಲ್ಲಿ ಏರಿಕೆ, ಅನಕ್ಷರಸ್ಥರಿಗಿಂತ ಶಿಕ್ಷಿತರಿಗೇ ಹೆಚ್ಚು ವಂಚನೆ

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮತ್ತು ಮಿಲಿಟರಿ ಗುಪ್ತಚರ ಜಂಟಿಯಾಗಿ ಕಾರ್ಯಾಚರಣೆ ಇಳಿದಿತ್ತು. ಅಕ್ಟೋಬರ್ 20 ರಂದು ಮಿಲಿಟರಿ ಗುಪ್ತಚರ, ಬೆಂಗಳೂರು ಮತ್ತು ಚಿತ್ರದುರ್ಗ ಜಿಲ್ಲೆಯ ಶ್ರೀರಾಂಪುರ ಪೊಲೀಸ್ ತಂಡವು ಜಂಟಿ ಕಾರ್ಯಾಚರಣೆ ನಡೆಸಿ ಚಿತ್ರದುರ್ಗದಲ್ಲಿ ವಂಚಕ ಶಿವರಾಜ್​ ಮತ್ತು ಆತನ ಸಂಗಾತಿ ಭೀಮವ್ವರನ್ನು ಬಂಧಿಸಿದರು. ದಾವಣಗೆರೆ, ಚಿತ್ರದುರ್ಗ ಮಾತ್ರವಲ್ಲದೇ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಶಿವರಾಜ ವಂಚನೆ ಮಾಡಿರುವುದು ಬಯಲಾಗಿದೆ.

ವಂಚಕ ಶಿವರಾಜ್​ ಮತ್ತು ಆತನ ಸಂಗಾತಿ ಬೀಮವ್ವ ವಿರುದ್ಧ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವಂಚಕ ಶಿವರಾಜ್ ನಕಲಿ ನಕಲಿ ಗುರುತಿನ ಚೀಟಿಗಳು ಮತ್ತು ಸೇನಾ ನೇಮಕಾತಿ ಸಂಬಂಧಿತ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ 

Published On - 7:36 am, Tue, 24 October 23

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ