AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಮನೆಯ ಗೋಡೆ ಕುಸಿದು ಬಾಲಕಿ ಸಾವು; ತಂದೆಗೆ ಗಂಭೀರ ಗಾಯ

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಬಾಣಗೆರೆ ಗ್ರಾಮದಲ್ಲಿ ಮಳೆರಾಯನ ಆರ್ಭಟಕ್ಕೆ ಬಾಲಕಿ ಬಲಿಯಾಗಿದ್ದಾಳೆ. ನಿರಂತರ ಮಳೆಯಿಂದಾಗಿ ಮನೆ ಗೋಡೆ ಕುಸಿದಿದ್ದು, ಮನೆಯಲ್ಲಿ ಮಲಗಿದ್ದ ಹರ್ಷಿತಾ(11) ಸಾವನ್ನಪ್ಪಿದ್ದಾಳೆ.

ಚಿತ್ರದುರ್ಗ: ಮನೆಯ ಗೋಡೆ ಕುಸಿದು ಬಾಲಕಿ ಸಾವು; ತಂದೆಗೆ ಗಂಭೀರ ಗಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 07, 2021 | 11:03 AM

Share

ಚಿತ್ರದುರ್ಗ: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಳೆ ಹಾನಿ ಮತ್ತು ಪ್ರಾಣ ಹಾನಿ ಸಂಭವಿಸುತ್ತಿದೆ. ಅದರಂತೆ ಇಂದು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಬಾಣಗೆರೆ ಗ್ರಾಮದಲ್ಲಿ ಮಳೆರಾಯನ ಆರ್ಭಟಕ್ಕೆ ಬಾಲಕಿ ಬಲಿಯಾಗಿದ್ದಾಳೆ. ನಿರಂತರ ಮಳೆಯಿಂದಾಗಿ ಮನೆ ಗೋಡೆ ಕುಸಿದಿದ್ದು, ಮನೆಯಲ್ಲಿ ಮಲಗಿದ್ದ ಹರ್ಷಿತಾ(11) ಸಾವನ್ನಪ್ಪಿದ್ದಾಳೆ.

ಹರ್ಷಿತಾ ತಂದೆ ರವಿ (40) ಗಂಭೀರವಾಗಿ ಗಾಯಗೊಂಡಿದ್ದಾರೆ. ತಾಯಿ ಕವಿತಾ (35), ಸಹೋದರಿ ಅಮೂಲ್ಯಾ ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ದೇವನಹಳ್ಳಿ: ಆಟೋ ಚಾಲಕನ ನಿರ್ಲಕ್ಷ್ಯಕ್ಕೆ ಮೂವರ ಬಲಿ ಪ್ರಯಾಣಿಕರನ್ನು ಕೂರಿಸಿಕೊಂಡು ಅತಿವೇಗದಿಂದ ಆಟೋ ಚಾಲನೆ ಮಾಡಿದ ಪರಿಣಾಮ ಆಟೋ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ರಸ್ತೆಯಲ್ಲಿ ಬಿದ್ದ ಆಟೋಗೆ ಕಾರು ಡಿಕ್ಕಿ ಹೊಡೆದು ಆಟೋ ಚಾಲಕ ಸೇರಿ ಆಟೋದಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದೇವನಹಳ್ಳಿಯ ಚಿಕ್ಕಜಾಲ ಬಳಿಯ ಬಾಗಲೂರಿನಲ್ಲಿ ಈ ಅಪಘಾತ ಸಂಭವಿಸಿದೆ.

ಆಟೋ ಚಾಲಕ ಕಿರಣ್ (26), ಪ್ರಯಾಣಿಕರಾದ ಅನ್ವರ್ ಹುಸೇನ್(28) ಮತ್ತು ರಾಹುಲ್( 21) ಸಾವನ್ನಪ್ಪಿದ್ದಾರೆ. ನೆನ್ನೆ ಸಂಜೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಟೋದಲ್ಲಿದ್ದ ಇನ್ನೊರ್ವ ವ್ಯಕ್ತಿ ವಾಸಪ್ಪ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಪ್ರಯಾಣಿಕರನ್ನು ಕೂರಿಸಿಕೊಂಡು ಬೂದಿಗೆರೆ ಕಡೆಯಿಂದ ಬಾಗಲೂರು ಕಡೆಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಅಪಘಾತ ಬಳಿಕ ಕಾರನ್ನು ಸ್ಥಳದಲ್ಲೇ ಬಿಟ್ಟು ಕಾರು ಚಾಲಕ ಪರಾರಿಯಾಗಿದ್ದಾನೆ. ಸದ್ಯ ಕಾರು ಚಾಲಕನ ವಿರುದ್ಧ ಚಿಕ್ಕಜಾಲ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂಧ್ರಪ್ರದೇಶ: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು ಇನ್ನೋವಾ ಕಾರಿಗೆ ಲಾರಿ ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಕಡಪ‌ ಜಿಲ್ಲಾ‌ ಅಗ್ರಹಾರಂ ಬಳಿ ನಡೆದಿದೆ. ಮೃತರೆಲ್ಲಾ ಮಹಾರಾಷ್ಟ್ರ ಮೂಲದವರು ಎಂದು ತಿಳಿದುಬಂದಿದೆ. ಇನ್ನೂ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Shivamogga: ಮಳೆಗೆ ನಲುಗಿದ ಶಿವಮೊಗ್ಗ; ಸೋಮಿನಕೊಪ್ಪದಲ್ಲಿ ಮೀನು ಹಿಡಿಯಲು ಹೋಗಿದ್ದ ಯುವಕ ಸಾವು

ಆತ್ಮಹತ್ಯೆ ಮಾಡಿಕೊಳ್ಳಲು ಮೆಟ್ರೋ ಸ್ಟೇಶನ್​ ಗೋಡೆ ಹತ್ತಿದ ಯುವತಿಯನ್ನು ಆಕೆಗೆ ಗೊತ್ತಾಗದಂತೆ ಕಾಪಾಡಿದ ಪೊಲೀಸ್​; ವಿಡಿಯೋ ವೈರಲ್

Published On - 9:20 am, Sat, 7 August 21