ಗಮನ ಬೇರೆಡೆ ಸೆಳೆದು KSRTC ಬಸ್‌ನಲ್ಲಿ ಚಿನ್ನಾಭರಣ ಕಳ್ಳತನ: ಆಂಧ್ರಪ್ರದೇಶದ ಮಹಿಳೆಯರ ಬಂಧನ

ಚಿತ್ರದುರ್ಗದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳೆಯ ಗಮನ ಬೇರೆಡೆ ಸೆಳೆದು 6.3 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಆಂಧ್ರಪ್ರದೇಶ ಮೂಲದ ಇಬ್ಬರು ಖತರ್ನಾಕ್ ಮಹಿಳೆಯರನ್ನು ಚಳ್ಳಕೆರೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಚಳ್ಳಕೆರೆ ಮತ್ತು ಮೊಳಕಾಲ್ಮೂರು ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 55 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.

ಗಮನ ಬೇರೆಡೆ ಸೆಳೆದು KSRTC ಬಸ್‌ನಲ್ಲಿ ಚಿನ್ನಾಭರಣ ಕಳ್ಳತನ: ಆಂಧ್ರಪ್ರದೇಶದ ಮಹಿಳೆಯರ ಬಂಧನ
ಸಾಂದರ್ಭಿಕ ಚಿತ್ರ
Image Credit source: Getty Images

Updated on: Oct 12, 2026 | 2:39 PM

ಚಿತ್ರದುರ್ಗ, ಅಕ್ಟೋಬರ್​​ 12: ಭರ್ಜರಿ ಕಾರ್ಯಾಚರಣೆ ನಡೆಸಿರುವ ಚಿತ್ರದುರ್ಗ ಪೊಲೀಸರು, ಅಂತಾರಾಜ್ಯ ಕಳ್ಳಿಯರ ತಂಡವನ್ನು ಖೆಡ್ಡಾಕ್ಕೆ ಬೀಳಿಸಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಂದ 6.3 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದ ಆರೋಪದ ಮೇಲೆ ಆಂಧ್ರಪ್ರದೇಶದ ಇಬ್ಬರು ಮಹಿಳೆಯರನ್ನು ಚಳ್ಳಕೆರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ ತಾಲ್ಲೂಕಿನ ನಿವಾಸಿಗಳಾದ ಶಾಂತಿ ಮತ್ತು ನೀಲವೇಣಿ ಎಂದು ಗುರುತಿಸಲಾಗಿದೆ.

ಗಮನ ಬೇರೆಡೆ ಸೆಳೆದು ಚಿನ್ನಾಭರಣ ಕಳ್ಳತನ

ಪೊಲೀಸರ ಪ್ರಕಾರ, ರಾಯಚೂರು ಜಿಲ್ಲೆಯ ಸಿಂಧನೂರು ನಿವಾಸಿ ಲಕ್ಷ್ಮಿ ಅವರು ಸಂಬಂಧಿಕರ ನಿಶ್ಚಿತಾರ್ಥ ಸಮಾರಂಭದಲ್ಲಿ ಪಾಲ್ಗೊಳ್ಳಲು ಜುಲೈ 6ರಂದು ಚಳ್ಳಕೆರೆಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಆರೋಪಿಗಳು ಅವರ ಗಮನವನ್ನು ಬೇರೆಡೆ ಸೆಳೆದು, ಬ್ಯಾಗ್‌ನಲ್ಲಿದ್ದ ಹರಳುಗಳನ್ನು ಹೊಂದಿದ 35 ಗ್ರಾಂ ತೂಕದ ಚಿನ್ನದ ಸರ, ಪೆಂಡೆಂಟ್ ಹಾಗೂ ಮೂರು ಗ್ರಾಂ ತೂಕದ ಒಂದು ಜೋಡಿ ಚಿನ್ನದ ಗುಂಡಿನಾಕಾರದ ಕಿವಿಯೋಲೆಗಳನ್ನು ಕದ್ದಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಾಹಿತಿ ಮತ್ತು ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ಚಳ್ಳಕೆರೆ ಉಪವಿಭಾಗದ ಡಿವೈಎಸ್‌ಪಿ ಸತ್ಯನಾರಾಯಣ ರಾವ್ ಅವರ ಮಾರ್ಗದರ್ಶನದಲ್ಲಿ, ಇನ್‌ಸ್ಪೆಕ್ಟರ್ ಕುಮಾರ್ ಕೆ. ನೇತೃತ್ವದ ಪೊಲೀಸ್ ತಂಡ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.

ಇದನ್ನೂ ಓದಿ: ಸ್ನೇಹಿತೆಯ ಬರ್ತ್‌ಡೇ ಪಾರ್ಟಿಗೆ ಹೋಗೋಣ ಬಾ ಎಂದು ನಂಬಿಸಿ ಕರೆದೊಯ್ದು ಮಗಳನ್ನೇ ಹಾಳು ಮಾಡಿದ ತಂದೆಗೆ 20 ವರ್ಷ ಜೈಲು ಶಿಕ್ಷೆ

ಆರೋಪಿಗಳ ವಿರುದ್ಧ ಚಳ್ಳಕೆರೆ ಮತ್ತು ಮೊಳಕಾಲ್ಮೂರು ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 55 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಚಳ್ಳಕೆರೆ ಪ್ರಕರಣಕ್ಕೆ ಸಂಬಂಧಿಸಿದಂತೆ 4.3 ಲಕ್ಷ ರೂಪಾಯಿ ಮೌಲ್ಯದ 38 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ 2 ಲಕ್ಷ ರೂಪಾಯಿ ಮೌಲ್ಯದ 17 ಗ್ರಾಂ ಚಿನ್ನಾಭರಣವನ್ನು ಜಪ್ತಿ ಮಾಡಲಾಗಿದೆ ಎಂದು ಟೈಮ್ಸ್​​ ಆಫ್​​ ಇಂಡಿಯಾ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:38 pm, Mon, 12 October 26

ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Loading...
Unable to load recommendations.
Follow Us