ಚಿತ್ರದುರ್ಗ ಮುರುಘಾಶ್ರೀಗೆ ಹೃದಯ ಸಮಸ್ಯೆ: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲು ಪೊಲೀಸ್​​ ಅಧಿಕಾರಿಗಳಿಗೆ ನ್ಯಾಯಾಲಯ ಸೂಚನೆ

| Updated By: ವಿವೇಕ ಬಿರಾದಾರ

Updated on: Sep 21, 2022 | 1:40 PM

ಚಿತ್ರದುರ್ಗದ ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀ ಅವರಿಗೆ ಹೃದಯ ಸಮಸ್ಯೆ ಹಿನ್ನೆಲೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲು ಚಿತ್ರದುರ್ಗ ಹೆಚ್ಚುವರಿ ಸೆಷನ್ಸ್​​​ ನ್ಯಾಯಾಲಯ ಸೂಚನೆ ನೀಡಿದೆ.

ಚಿತ್ರದುರ್ಗ ಮುರುಘಾಶ್ರೀಗೆ ಹೃದಯ ಸಮಸ್ಯೆ: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲು ಪೊಲೀಸ್​​ ಅಧಿಕಾರಿಗಳಿಗೆ ನ್ಯಾಯಾಲಯ ಸೂಚನೆ
ಚಿತ್ರದುರ್ಗದ ಡಾ ಶಿವಮೂರ್ತಿ ಮುರುಘಾ ಶರಣರು
Follow us on

ಚಿತ್ರದುರ್ಗ: ಪೋಕ್ಸೋ (Pocso) ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಮುರುಘಾಶ್ರೀ ಅವರಿಗೆ ಹೃದಯ ಸಮಸ್ಯೆ ಕಾಯಿಲೆ ಇರುವ ಹಿನ್ನೆಲೆ ಶಿವಮೊಗ್ಗದ (Shivamogga) ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲು ಚಿತ್ರದುರ್ಗ ಹೆಚ್ಚುವರಿ ಸೆಷನ್ಸ್​​​ ನ್ಯಾಯಾಲಯ ಸೂಚನೆ ನೀಡಿದೆ. ಸೆಷನ್ಸ್​​​ ನ್ಯಾಯಾಲಯ ಜಿಲ್ಲಾ ಕಾರಾಗೃಹದ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಶ್ರೀಗಳನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲು ತಯಾರಿ ಮಾಡಲಾಗುತ್ತಿದೆ. ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾಶ್ರೀ ಸೆ.27ರವರೆಗೆ ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ. ಮುರುಘಾಶ್ರೀ ಅವರಿಗೆ ಕರೊನರಿ ಎಂಜೋಗ್ರಾಮ್ ಮಾಡಿಸಲು ಅನುಮತಿ ನೀಡಲು ಮುರುಘಾಶ್ರೀ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 1:17 pm, Wed, 21 September 22