ಅವನೊಬ್ಬ ಹುಚ್ಚ, ಹುಚ್ಚರ ಬಗ್ಗೆ ಯಾರಾದರೂ ಮಾತನಾಡುತ್ತಾರಾ? ಅನಂತ್ ಕುಮಾರ್ ಹೆಗಡೆ ವಿರುದ್ಧ ಹೆಚ್.ಆಂಜನೇಯ ವಾಗ್ದಾಳಿ

ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ಸಂಸದ ಅನಂತ್ ಕುಮಾರ ಹೆಗಡೆ ವಾಗ್ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿ ಚಿತ್ರದುರ್ಗದಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಹೆಚ್​.ಆಂಜನೇಯ ಕಿಡಿಕಾರಿದ್ದಾರೆ. ಅವನೊಬ್ಬ ಹುಚ್ಚ, ಹುಚ್ಚರ ಬಗ್ಗೆ ಯಾರಾದರೂ ಮಾತನಾಡುತ್ತಾರಾ? ಎಂದಿದ್ದಾರೆ.

ಅವನೊಬ್ಬ ಹುಚ್ಚ, ಹುಚ್ಚರ ಬಗ್ಗೆ ಯಾರಾದರೂ ಮಾತನಾಡುತ್ತಾರಾ? ಅನಂತ್ ಕುಮಾರ್ ಹೆಗಡೆ ವಿರುದ್ಧ ಹೆಚ್.ಆಂಜನೇಯ ವಾಗ್ದಾಳಿ
ಹೆಚ್.ಆಂಜನೇಯ
Edited By: ಆಯೇಷಾ ಬಾನು

Updated on: Jan 15, 2024 | 12:48 PM

ಚಿತ್ರದುರ್ಗ,ಜ.15: ಅನಂತ್​ ಕುಮಾರ್ ಹೆಗಡೆ (Ananth Kumar Hegde) ಒಬ್ಬ ಹುಚ್ಚ, ಹುಚ್ಚರ ಬಗ್ಗೆ ಯಾರಾದ್ರೂ ಮಾತಾಡ್ತಾರಾ? ಅವನ ಬಗ್ಗೆ ಮಾತಾಡಲ್ಲ ಅಂತಾ ಮಾಜಿ ಸಚಿವ ಹೆಚ್. ಆಂಜನೇಯ (H Anjaneya) ಅವರು ಅನಂತಕುಮಾರ ಹೆಗಡೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವನ ಬಗ್ಗೆ ಮಾತಾಡಿ ದೊಡ್ಡವನನ್ನಾಗಿಸಿದಂತೆ ಆಗುತ್ತದೆ. ಅವನು ಬೆಳೆದ ಹಿನ್ನೆಲೆ ಸಂಸ್ಕೃತಿ ಅದೇ ರೀತಿ ಇರಬೇಕು. ಹೀಗಾಗಿ ಅವನು ಆ ರೀತಿ ವರ್ತನೆ ಮಾಡುತ್ತಾನೆ. ನಾವು ಆರೀತಿ ಅಲ್ಲ, ನಾನು ಸಹ ಏಕವಚನ ಬಳಸಬಾರದು ಅಂತಾ ಟಾಂಗ್ ಕೊಟಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ಸಂಸದ ಅನಂತ್ ಕುಮಾರ ಹೆಗಡೆ ವಾಗ್ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿ ಚಿತ್ರದುರ್ಗದಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಹೆಚ್​.ಆಂಜನೇಯ ಕಿಡಿಕಾರಿದ್ದಾರೆ. ಅವನೊಬ್ಬ ಹುಚ್ಚ, ಹುಚ್ಚರ ಬಗ್ಗೆ ಯಾರಾದರೂ ಮಾತನಾಡುತ್ತಾರಾ? ಅನಂತ್ ಕುಮಾರ್ ಹೆಗಡೆ ಬೆಳೆದ ಹಿನ್ನೆಲೆ, ಸಂಸ್ಕೃತಿ ಅದೇ ಇರಬೇಕು. ಹೀಗಾಗಿ ಅವನು ಆ ರೀತಿ ವರ್ತನೆ ಮಾಡುತ್ತಾನೆ. ನಾವು ಆ ರೀತಿ ಅಲ್ಲ, ನಾನು ಸಹ ಏಕವಚನ ಬಳಸಬಾರದು. ಆದರೆ ಅವನಿಗೆ ಯಾವ ಭಾಷೆ ಬಳಸಿದರೂ ಸಹ ಸಾಲದು ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಸಿಎಂ, ಡಿಸಿಎಂ ಬೆಂಬಲಕ್ಕೆ ನಿಲ್ಲುವಂತೆ ಶಾಸಕರು, ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ

ನಮ್ಮ ನಾಡಿನ ದೊರೆ ಮುಖ್ಯಮಂತ್ರಿ ಸಿದ್ದರಾಮಯ್ಯ. ರಾಮರಾಜ್ಯದ ಕನಸು ಅನಾವರಣ ಮಾಡಿ ಕಾರ್ಯರೂಪಕ್ಕೆ ತಂದವರು. ಜನ ಮೆಚ್ಚಿದ ಸಿದ್ದರಾಮಯ್ಯ ಬಗ್ಗೆ ಹಗುರವಾಗಿ ಮಾತನಾಡುತ್ತಾನಲ್ಲಾ? ಅನಂತಕುಮಾರ್​ ಹೆಗಡೆ ಮನುಷ್ಯನಾ ಎಂದು ಹೆಚ್.ಆಂಜನೇಯ ಕಿಡಿಕಾರಿದ್ದಾರೆ.

ಬಹಳಷ್ಟು ಜನ ಹಿಂದುಗಳಿರುವುದೇ ಕಾಂಗ್ರೆಸ್ ಪಕ್ಷದಲ್ಲಿ. ಕಾಂಗ್ರೆಸ್​ನಲ್ಲೇ ಹಿಂದೂ, ರಾಮ ಪೂಜೆ ಮಾಡುವವರು ಹೆಚ್ಚಿರುವುದು. ಕೋಟ್ಯಾಂತರ ಕಾಂಗ್ರೆಸ್ಸಿಗರ ಹೃದಯದಲ್ಲಿ ರಾಮನಿದ್ದಾನೆ. ರಾಮನ ಹೆಸರಿನಲ್ಲಿ ಮತಕ್ಕಾಗಿ ಮಾರ್ಕೆಟಿಂಗ್ ಮಾಡುವವರು ಕಾಂಗ್ರೆಸ್ಸಿಗರಲ್ಲ. ಆಂಜನೇಯನ ಹೃದಯದಲ್ಲಿ ರಾಮನಿದ್ದಂತೆ ಕಾಂಗ್ರೆಸ್ಸಿಗರ ಹೃದಯದಲ್ಲಿ ರಾಮನಿದ್ದಾನೆ. ಕಾಂಗ್ರೆಸ್ಸಿಗರು ರಾಮನ ವಿರೋಧಿ ಅಲ್ಲ, ಹಿಂದೂಗಳ ವಿರೋಧಿಯೂ ಅಲ್ಲ. ನಾವು ಹಿಂದೂಗಳ ಪರ, ಮುಸ್ಲಿಂ ಪರ, ಎಲ್ಲಾ ಧರ್ಮಗಳ ಜನರ ಪರವಿದ್ದೇವೆ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us