ಚಿತ್ರದುರ್ಗದಲ್ಲಿ ನಾಳೆ ಹಿಂದೂ ಮಹಾಗಣಪತಿ ಶೋಭಾಯಾತ್ರೆ; ರೂಟ್​ ಮ್ಯಾಪ್ ಇಲ್ಲಿದೆ ನೋಡಿ

ರಾಜ್ಯದ ವಿವಿಧೆಡೆ ಗಣೇಶೋತ್ಸವ ಮತ್ತು ಈದ್ ಮಿಲಾದ್ ಆಚರಣೆ ವೇಳೆ ಗಲಾಟೆ ಗದ್ದಲಗಳು ನಡೆದಿವೆ. ಇದೆ ಸಂದರ್ಭದಲ್ಲಿ ನಾಳೆ(ಸೆ.28) ಕೋಟೆನಾಡು ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಮತ್ತು ವಿಸರ್ಜನೆ ನಡೆಯುತ್ತಿದೆ. ಗಣೇಶನ ಮೆರವಣಿಗೆಯಲ್ಲಿ ಲಕ್ಷಾಂತರ ಜನ ಭಾಗಿ ಆಗಲಿದ್ದು ದುರ್ಗ ಮದುವಣಗಿತ್ತಿಯಂತೆ ಅಲಂಕೃತಗೊಂಡಿದೆ. ಜೊತೆಗೆ ಪೊಲೀಸರು ಕೂಡ ಹೈ ಅಲರ್ಟ ಆಗಿದ್ದಾರೆ. ಈ ಕುರಿತು ವರದಿ ಇಲ್ಲಿದೆ.

ಚಿತ್ರದುರ್ಗದಲ್ಲಿ ನಾಳೆ ಹಿಂದೂ ಮಹಾಗಣಪತಿ ಶೋಭಾಯಾತ್ರೆ; ರೂಟ್​ ಮ್ಯಾಪ್ ಇಲ್ಲಿದೆ ನೋಡಿ
ಚಿತ್ರದುರ್ಗದಲ್ಲಿ ನಾಳೆ ಹಿಂದೂ ಮಹಾಗಣಪತಿ ಶೋಭಾಯಾತ್ರೆ
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 27, 2024 | 6:25 PM

ಚಿತ್ರದುರ್ಗ, ಸೆ.27: ಚಿತ್ರದುರ್ಗ(Chitradurga) ನಗರದ ಜೈನಧಾಮದಲ್ಲಿ ಭಜರಂಗದಳ ಮತ್ತು ವಿಶ್ವಹಿಂದೂ ಪರಿಷತ್ ನೇತೃತ್ವದಲ್ಲಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪಿಸಲಾಗಿದೆ. ನಾಳೆ(ಸೆ.28) ಹಿಂದೂ ಮಹಾಗಣಪತಿ ಶೊಭಾಯಾತ್ರೆ ಮತ್ತು ವಿಸರ್ಜನೆ ಆಯೋಜಿಸಲಾಗಿದೆ. ಪ್ರತಿ ವರ್ಷದಂತೆ ನಾಳೆಯೂ ಐದಾರು ಲಕ್ಷ ಜನ ಗಣಪತಿಯ ಮೆರವಣಿಗೆಯಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ. ಜೊತೆಗೆ ನಿರಾತಂಕದಿಂದ ಭಕ್ತರು ಗಣೇಶೊತ್ಸವದಲ್ಲಿ ಭಾಗಿ ಆಗಬೇಕೆಂದು ಆಯೋಜಕರು ಹೇಳಿದ್ದಾರೆ.

ರೂಟ್​ ಮ್ಯಾಪ್ ಇಲ್ಲಿದೆ

ಸೆ.28ರಂದು ಚಿತ್ರದುರ್ಗ ನಗರದ ಬಿ. ಡಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಭಂಧಿಸಲಾಗಿದೆ. ಚಿತ್ರದುರ್ಗ ನಗರದ ಹೊರವಲಯದ ಬೈಪಾಸ್ ರಸ್ತೆಗಳ ಮೂಲಕ ಸಂಚರಿಸಲು ಸೂಚಿಸಲಾಗಿದೆ. ಅಂತೆಯೇ ಬಿ ಡಿ ರಸ್ತೆ ಉದ್ದಕ್ಕೂ ವಾಹನಗಳಿಗೆ ಎಂಟ್ರಿ ನೀಡದಂತೆ ಬ್ಯಾರಿಕೇಡ್​ಗಳನ್ನು ನಿರ್ಮಾಣ ಮಾಡಲಾಗಿದೆ.

ಇದನ್ನೂ ಓದಿ:ತುಮಕೂರು ಹಿಂದೂ ಮಹಾಗಣಪತಿ ವಿಸರ್ಜನೆಯಲ್ಲಿ ಕಿಕ್ಕಿರಿದ ಜನ

ಪೊಲೀಸ್ ಇಲಾಖೆ ಹೈ ಅಲರ್ಟ್, ಮದ್ಯಮಾರಾಟ ನಿಷೇಧ

ಇನ್ನು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯೂ ಹೈ ಅಲರ್ಟ್ ಆಗಿದೆ. ಅದರಂತೆ ಚಿತ್ರದುರ್ಗದಲ್ಲಿ ಇಂದು ಪೊಲೀಸ್ ಇಲಾಖೆಯಿಂದ ಪಥ ಸಂಚಲನ ನಡೆಸಲಾಯಿತು. ಮುಂಜಾಗೃತೆ ಕ್ರಮವಾಗಿ ಸೆ.27ರ ಬೆಳಗ್ಗೆಯಿಂದ 28ರ ಮಧ್ಯರಾತ್ರಿವರೆಗೆ ಚಿತ್ರದುರ್ಗದಲ್ಲಿ ಮದ್ಯಮಾರಾಟ ನಿಷೇಧಿಸಿದೆ. ಈ ಕುರಿತು ಮಾತನಾಡಿದ ಚಿತ್ರದುರ್ಗ ಎಸ್ಪಿ ರಂಜಿತ್ ಬಂಡಾರು, ‘ಮುಂಜಾಗೃತ ಕ್ರಮವಾಗಿ 6 ಜನ ಎಎಸ್ಪಿ , 16 ಜನ ಡಿವೈಎಸ್ಪಿ 50 ಸಿಪಿಐ, 120ಪಿಎಸ್ ಐ, 167 ಎಎಸ್ಐ, 1886 ಪೊಲೀಸರು, 500 ಜನ ಹೋಂಗಾರ್ಡ್ಸ್, 10 ಕೆಎಸ್​​ಆರ್​​ಪಿ, 12 ಡಿಎಆರ್ , 4 ಕ್ಯೂಆರ್​ಟಿ ತುಕಡಿಗಳನ್ನು ಬಂದೋಬಸ್ತ್​ಗೆ ನಿಯೋಜಿಸಲಾಗಿದೆ. ಒಟ್ಟು 3,500ಕ್ಕೂ ಹೆಚ್ಚು ಜನ ಪೊಲೀಸರು ಕರ್ತವ್ಯ ನಿರ್ವಹಿಸಲಿದ್ದಾರೆ. ಅಲ್ಲದೆ 26 ವಾಚ್ ಟವರ್, 150 ಕಡೆ ಸಿಸಿಟಿವಿ, 5ಡ್ರೋನ್, 50 ಸ್ಕೈಸೆಂಟ್ರಿಗಳು ಅಳವಡಿಸಲಾಗಿದೆ. 9 ಕಡೆ ಚೆಕ್ ಪೋಸ್ಟ್ ನಿರ್ಮಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಒಟ್ಟಾರೆಯಾಗಿ ಕೋಟೆನಗರಿ ಚಿತ್ರದುರ್ಗ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಮತ್ತು ವಿಸರ್ಜನೆಗೆ ಸಿದ್ಧವಾಗಿದೆ. ಬೆಳಗ್ಗೆ 11ಗಂಟೆಗೆ ಚಳ್ಳಕೆರೆ ವೃತ್ತ ಬಳಿಯ ಜೈನಧಾಮದಿಂದ ಆರಂಭವಾಗಿ ಚಂದ್ರವಳ್ಳಿವರೆಗೆ ಬೃಹತ್ ಮೆರವಣಿಗೆ ನಡೆಯಲಿದೆ. ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸುವ ಲಕ್ಷಾಂತರ ಜನರು ಉತ್ಸವದಲ್ಲಿ ಭಾಗಿ ಆಗಲಿದ್ದಾರೆ. ಡಿಜೆ ಸದ್ದಿಗೆ ಮೈಮರೆತು ಕುಣಿಯಲಿದ್ದು, ಪೊಲೀಸರು ಮತ್ತು ಜಿಲ್ಲಾಡಳಿತ ಈ ಸಲ ಹಿಂದೆಂದಿಗಿಂತಲೂ ಹೆಚ್ಚು ಅಲರ್ಟಾಗಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗೃತ ಕ್ರಮ ಕೈಗೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ