ಅನ್ಯಕೋಮಿನ ಯುವಕನಿಂದ ಚಾಕು ಇರಿತ: ಸಿಡಿದೆದ್ದ ಹಿಂದೂ ಸಂಘಟನೆಗಳು, ಚಿತ್ರದುರ್ಗ ರಣಾಂಗಣ

ಕೋಟೆನಾಡು ಚಿತ್ರದುರ್ಗ ರಣಾಂಗಣವಾಗಿದೆ. ಸ್ಕ್ರೀನ್ ಗಾರ್ಡ್​​ ಸಲುವಾಗಿ ಮೊಬೈಲ್ ಅಂಗಡಿ ಮಾಲೀಕ ಹಾಗೂ ಅನ್ಯಕೋಮಿನ ಯುವಕನ ನಡುವೆ ನಡೆದ ವಾಗ್ವಾದ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದು, ಈ ವೇಳೆ ಅನ್ಯಕೋಮಿನ ಯುವಕ ಚಾಕುವಿನಿಂದ ಇರಿದಿದ್ದಾನೆ. ಇದರಿಂದ ಹಿಂದೂ ಸಂಘಟನೆಗಳು ಸಿಡಿದೆದ್ದಿದ್ದು, ಜಸ್ಟ್ ಮೊಬೈಲ್​ ಸ್ಕ್ರೀನ್ ಗಾರ್ಡ್​ ವಿಚಾರಕ್ಕೆ ನಡೆದ ಗಲಾಟೆ ಇದೀಗ ಕೋಮು ಸಂಘರ್ಷಕ್ಕೆ ತಿರುಗಿದೆ.

ಅನ್ಯಕೋಮಿನ ಯುವಕನಿಂದ ಚಾಕು ಇರಿತ: ಸಿಡಿದೆದ್ದ ಹಿಂದೂ ಸಂಘಟನೆಗಳು, ಚಿತ್ರದುರ್ಗ ರಣಾಂಗಣ
ಹಿಂದೂ ಕಾರ್ತಕರ್ತರ ಪ್ರತಿಭಟನೆ
Edited By:

Updated on: Feb 25, 2026 | 5:06 PM

ಚಿತ್ರದುರ್ಗ, ಫೆಬ್ರವರಿ 25): ಮೊಬೈಲ್ ಸ್ಕ್ರೀನ್ ಗಾರ್ಡ್​​ ವಿಚಾರವಾಗಿ ಮೊಬೈಲ್ ಅಂಗಡಿ (Mobile Shop) ಮಾಲೀಕ ಹಾಗೂ ಅನ್ಯಕೋಮಿನ ಯುವಕನ ನಡೆದ ಗಲಾಟೆ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದು, ಕೊನೆಗೆ ಯುವಕ, ಮೊಬೈಲ್ ಅಂಗಡಿ ಮಾಲೀಕನಿಗೆ ಚಾಕುವಿನಿಂದ ಇರಿದಿದ್ದಾನೆ. ಈ ಘಟನೆ ಚಿತ್ರದುರ್ಗ (Chitradruga)  ನಗರದ ಸಂತೆ ಮೈದಾನ ಬಳಿ ನಡೆದಿದೆ. 100 ರೂ. ಹೆಚ್ಚುವರಿ ಹಣ ಕೇಳಿದ್ದಕ್ಕೆ ಸಿಟ್ಟಾದ ಯುವಕ, ಅಂಗಡಿ ಮಾಲೀಕ ವಿಕ್ರಮ್‌ ಚೌದ್ರಿಗೆ ಚಾಕು ಇರಿದಿದ್ದಾನೆ. ಯುವಕ ಚಾಕು ಇರಿಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ವಿಕ್ರಮ್‌ ಚೌದ್ರಿ ಅವರನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗದೆ. ಇನ್ನು ಈ ವಿಚಾರ ತಿಳಿಯುತ್ತಿದ್ದಂತೆಯೇ ಹಿಂದೂ ಸಂಘಟನೆಗಳು ಸಿಡಿದೆದ್ದಿದ್ದು, ಬೀದಿಗಿಳಿದು ಪ್ರತಿಭಟನೆ ನಡೆಸಿವೆ. ಮೊಬೈಲ್ ಸ್ಕ್ರೀನ್ ಗಾರ್ಡ್​​ ವಿಚಾರಕ್ಕೆ ನಡೆದ ಗಲಾಟೆ ಇದೀಗ ಕೋಮು ಸಂಘರ್ಷಕ್ಕೆ ತಿರುಗಿದ್ದು, ಯಾವುದೇ ಅಹಿತಕ ಘಟನೆಗಳು ಆಗದರಿಂದ ಪೊಲೀಸರು ಹೈಲರ್ಟ್ ಆಗಿದ್ದಾರೆ.

ವಿಕ್ರಮ್‌ ಚೌದ್ರಿ ಎಂಬವರ ಅಂಗಡಿಗೆ ಯುವಕನೊಬ್ಬ ಮೊಬೈಲ್‌ ಸ್ಕ್ರೀನ್‌ ಖರೀದಿಸಿದ್ದ. ಆದರೆ ಅದೇನಾಯ್ತೋ ಏನು ಯವಕ, ಈ  ಸ್ಕ್ರೀನ್ ಗಾರ್ಡ್ ಬೇಡ ಬೇರೆಯದ್ದು ಕೊಡಿ ಎಂದಿದ್ದಾನೆ. ಈ ವೇಳೆ ಮೊಬೈಲ್ ಅಂಗಡಿ ಮಾಲೀಕ ವಿಕ್ರಮ್ ಚೌದ್ರಿ, ಬೇರೆ ಬ್ರ್ಯಾಂಡ್​​​​​ ಸ್ಕ್ರೀನ್ ಗಾರ್ಡ್​ಗೆ ಹೆಚ್ಚುವರಿ ಹಣ ಕೇಳಿದ್ದಾರೆ. 100 ರೂ. ಹೆಚ್ಚುವರಿ ಹಣ ಕೇಳಿದ್ದಕ್ಕೆ ಸಿಟ್ಟಾದ ಯುವಕ, ವಿಕ್ರಮ್ ಜೊತೆ ಜಗಳ ತೆಗೆದಿದ್ದಾನೆ. ಬಳಿಕ ಗಲಾಟೆ ಕೈಕೈ ಮಿಲಸಾಯಿಸುವ ಹಂತಕ್ಕೆ ಹೋಗಿದ್ದು, ಕೊನೆಗೆ ಯುವಕ ಚಾಕುವಿನಿಂದ ವಿಕ್ರಮ್ ಇರಿದಿದ್ದಾನೆ. ಚಾಕುವಿನಿಂದ ಇರಿಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಗಾಯಗೊಂಡಿರುವ ಮೊಬೈಲ್ ಅಂಗಡಿ ಮಾಲೀಕ ವಿಕ್ರಮ್‌ ಚೌದ್ರಿ ಅವರನ್ನ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಬಾಗಲಕೋಟೆ: ಕಲ್ಲು ತೂರಾಟದ ಕಾವು ಆರುವ ಮುನ್ನವೇ ಜಾಲತಾಣದಲ್ಲಿ ಮುಸ್ಲಿಂ ಯುವಕರಿಂದ ವಿವಾದಾತ್ಮಕ ಪೋಸ್ಟ್

ಈ ವಿಚಾರ ತಿಳಿದ ಕೂಡಲೇ ಹಿಂದೂ ಸಂಘಟನೆಗಳ ಕಾರ್ಯಕರ್ತರು ಜಿಲ್ಲಾಸ್ಪತ್ರೆ ಬಳಿ ಜಮಾಯಿಸಿ ಪ್ರತಿಭಟನೆ ನಡೆಸಿದರು.  ವಿಕ್ರಮ್‌ ಚೌದ್ರಿ ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದಕ್ಕೆ ಚಾಕು ಇರಿಯಲಾಗಿದೆ. ಕೂಡಲೇ ಆರೋಪಿಯನ್ಗನು ಅರೆಸ್ಟ್‌ ಮಾಡಬೇಕು ಎಂದು  ರಸ್ತೆ ಬಂದ್ ಮಾಡಿ ಟೈರ್​​​ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು. ಒಂದು ವೇಳೆ ಆರೋಪಿಯನ್ನು ಬಂಧನ ಮಾಡದೇ ಇದ್ದರೆ ನಾಳೆ (ಫೆಬ್ರವರಿ 26) ಚಿತ್ರದುರ್ಗ ಬಂದ್‌ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನು ಈ ಪ್ರಕರಣ ಕೋಮು ಸಂಘರ್ಷಕ್ಕೆ ತಿರುಗುವ ಮುನ್ಸೂಚನೆ ಸಿಗುತ್ತಿದ್ದಂತೆಯೇ ಜಿಲ್ಲಾಸ್ಪತ್ರೆಗೆ ಚಿತ್ರದುರ್ಗ ಎಸ್ಪಿ ರಂಜಿತ್ ಬಂಡಾರು ದೌಡಾಯಿಸಿ ಗಾಯಾಳು ವಿಕ್ರಮ ಚೌದರಿ ಆರೋಗ್ಯ ವಿಚಾರಿಸಿದರು. ಅಲ್ಲದೇ ಘಟನೆ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಆದ್ರೆ, ಈ ವೇಳೆ ಚಿತ್ರೀಕರಣಕ್ಕೆ ಹೋದ ಮಾಧ್ಯಮಗಳಿಗೆ ನಿರ್ಬಂಧಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಒಟ್ಟಿನಲ್ಲಿ ಒಂದು ಮೊಬೈಲ್ ಸ್ಕ್ರೀನ್ ಗಾರ್ಡ್​​ ಗಾಗಿ ನಡೆದ ಸಣ್ಣ ಗಲಾಟೆ ಇದೀಗ ಕೋಮು ಸಂಘರ್ಷ ಹಂತಕ್ಕೆ ಹೋಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us