AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯೂರು: ಕಾರು ಪಲ್ಟಿ, ಮಗು ಸೇರಿ ಮೂವರು ಸಾವು

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಮಗು ಸೇರಿದಂತೆ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಮೃತರು ಯಾದಗಿರಿ ಮೂಲದವರು ಎಂದು ತಿಳಿದುಬಂದಿದೆ. ಕಾರು ಪಲ್ಟಿಯಾಗಿ ದುರಂತ ಸಂಭವಿಸಿದ್ದು, ಡಿವೈಎಸ್ಪಿ ಶಿವಕುಮಾರ್ ಮತ್ತು ಸಿಪಿಐ ಗುಡ್ಡಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಹಿರಿಯೂರು: ಕಾರು ಪಲ್ಟಿ, ಮಗು ಸೇರಿ ಮೂವರು ಸಾವು
ಕಾರು ಅಪಘಾತ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Oct 03, 2025 | 8:48 PM

Share

ಚಿತ್ರದುರ್ಗ, ಅಕ್ಟೋಬರ್​ 03: ಕಾರು ಪಲ್ಟಿ (car accident) ಹೊಡೆದ ಪರಿಣಾಮ ಮಗು ಸೇರಿ ಮೂವರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಬಳಿ ನಡೆದಿದೆ. ಯಾದಗಿರಿ ಮೂಲದ ಮಲ್ಲಮ್ಮ(26), ಸರೋಜಮ್ಮ(25) ಮತ್ತು ಪುಟ್ಟ ಮಗು ಮೃತರು. ಸ್ಥಳಕ್ಕೆ ಡಿವೈಎಸ್​​ಪಿ ಶಿವಕುಮಾರ್ ಮತ್ತು ಸಿಪಿಐ ಗುಡ್ಡಪ್ಪ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಗೂಡ್ಸ್ ವಾಹನ ಪಲ್ಟಿಯಾಗಿ ಮಹಿಳೆ ಸಾವು: 8 ಜನ ಗಂಭೀರ

ಗೂಡ್ಸ್ ವಾಹನ ಪಲ್ಟಿಯಾಗಿ ಮಹಿಳೆ ಸಾವನ್ನಪ್ಪಿದ್ದು, ಎಂಟು ಜನರು ಗಂಭೀರ ಗಾಯಗೊಂಡಿರುವಂತಹ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕಬ್ಬಳಿ ಗೇಟ್​ ಸಮೀಪದ ವೇದಾವತಿ ನದಿ ಬಳಿ ನಡೆದಿದೆ. ಬಿ.ಎಂ.ಕೊಪ್ಪಲು ನಿವಾಸಿ ಈಶ್ವರಮ್ಮ(55) ಮೃತ ಮಹಿಳೆ.

ಇದನ್ನೂ ಓದಿ: ಕೊಪ್ಪಳ ಯಲ್ಲಾಲಿಂಗ ಕೊಲೆ ಕೇಸ್​​: ಸಚಿವ ಶಿವರಾಜ ತಂಗಡಗಿ ಆಪ್ತ ಸೇರಿ 9 ಆರೋಪಿಗಳು ಖುಲಾಸೆ

ನಾಮಕರಣ ಮುಗಿಸಿ ಬರುವಾಗ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಉಡುಪಿಯ ಮಲ್ಪೆ ಬೀಚ್​​ನಲ್ಲಿ ಪ್ರವಾಸಿಗ ನೀರುಪಾಲು

ಉಡುಪಿಯ ಮಲ್ಪೆ ಬೀಚ್​​ನಲ್ಲಿ ಇಬ್ಬರು ಪ್ರವಾಸಿಗರ ಪೈಕಿ ಓರ್ವ ನೀರುಪಾಲಾಗಿದ್ದು, ಮರ್ತೋವನ ಸ್ಥಿತಿ ಗಂಭೀರವಾಗಿರುವಂತಹ ಘಟನೆ ನಡೆದಿದೆ. ಹಾಸನದ ಮಿಥುನ್ ಮೃತ ಯುವಕ. ನೀರುಪಾಲಾಗುತ್ತಿದ್ದ ಶಶಾಂಕ್​ನನ್ನ ಯುವಕರು ರಕ್ಷಿಸಿದ್ದು, ಸ್ಥಿತಿ ಗಂಭೀರವಾಗಿದೆ. ಸದ್ಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ನೀರುಪಾಲು

ಉಡುಪಿ ಜಿಲ್ಲಾಡಳಿತದ ವಿರುದ್ಧ ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್​ಗೆ ಸಾವಿರಾರು ಪ್ರವಾಸಿಗರು ಆಗಮಿಸಿದ್ದಾರೆ. ಆದರೆ ಕೇವಲ ಮೂವರು ಲೈಫ್​ಗಾರ್ಡ್ ಇದ್ದು, ಅವರಿಗೂ ಈಜು ಬರಲ್ಲವೆಂಬ ಆರೋಪ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:35 pm, Fri, 3 October 25

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ