ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ಪಟ್ಟಣದ ಚಿಟುಗು ಮಲ್ಲೇಶ್ವರ ಮಹಾಸಂಸ್ಥಾನ ಮಠದ ಜ್ಞಾನಭಾಸ್ಕರ ಸ್ವಾಮೀಜಿ ( jnana bhaskar swamiji) (75) ಅಸಹಜವಾಗಿ ಮೃತಪಟ್ಟಿದ್ದಾರೆ. ಬೆಳಿಗ್ಗೆ ಸ್ನಾನದ ಗೃಹದಲ್ಲಿ ಅವರ ಮೃತದೇಹ ಕಂಡುಬಂದಿದ್ದು, ಸ್ನಾನಕ್ಕೆ ನೀರು ಕಾಯಿಸುವ ವೇಳೆ ವಿದ್ಯುತ್ ಸ್ಪರ್ಶದಿಂದ ಸಾವು ಸಂಭವಿಸಿರವುದು ಎಂದು ಭಕ್ತರು ಶಂಕೆ ವ್ಯಕ್ತಪಡಿಸುತ್ತಿದ್ದಾರೆ. ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ವಿಶ್ವಕರ್ಮ ಸಮಾಜದ ಒಕ್ಕೂಟದಲ್ಲಿರುವ 63 ಸ್ವಾಮೀಜಿಗಳಲ್ಲಿ ಇವರು ಒಬ್ಬರಾಗಿದ್ದಾರೆ. 30 ವರ್ಷಗಳ ಹಿಂದೆಯೇ ಜ್ಞಾನಭಾಸ್ಕರ ಸ್ವಾಮೀಜಿ ಸಂಸಾರ ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಿದ್ದರು.
ರಾಜದ್ಯ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.