ಚಿತ್ರದುರ್ಗ: ಮಲ್ಲಾಡಿಹಳ್ಳಿ ಬಳಿ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 8 ಕೋಟಿ ಹಣ ಪತ್ತೆ
ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಬಳಿ ನಡೆದಿದೆ. ಚಿತ್ರದುರ್ಗದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಇನೋವಾ ಕಾರಿನಲ್ಲಿ ಈ ಹಣ ಪತ್ತೆಯಾಗಿದ್ದು, ಅಡಿಕೆ ವರ್ತಕರೊಬ್ಬರಿಗೆ ಸೇರಿದ ಹಣ ಇದು ಎಂದು ಹೇಳಲಾಗುತ್ತಿದೆ.
ಚಿತ್ರದುರ್ಗ, ನ.29: ದಾಖಲೆ ಇಲ್ಲದೆ ಕೋಟ್ಯಂತರ ರೂಪಾಯಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಜಿಲ್ಲೆಯ (Chitradurga) ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಬಳಿ ನಡೆದಿದೆ. ಚಿತ್ರದುರ್ಗದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕಾರಿನಲ್ಲಿ ಈ ಹಣ ಪತ್ತೆಯಾಗಿದ್ದು, ಇದು ಅಡಕೆ ವರ್ತಕರೊಬ್ಬರಿಗೆ ಸೇರಿದ್ದು ಎನ್ನಲಾಗಿದೆ.
ಈ ಬಗ್ಗೆ ಟಿವಿ9ಗೆ ಚಿತ್ರದುರ್ಗ ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ ಮಾಹಿತಿ ನೀಡಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ಹೊಳಲ್ಕೆರೆ ಪೊಲೀಸರು ಜಪ್ತಿ ಮಾಡಿದ್ದಾರೆ. ಕಾರು ಚಾಲಕ ಸಚಿನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದರು.
ಇದನ್ನೂ ಓದಿ: ಸಿಸಿಬಿ ಮಿಂಚಿನ ಕಾರ್ಯಚರಣೆ: ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದವನ ಬಂಧನ, 10 ಕೋಟಿ ರೂ. ಮೌಲ್ಯದ MDMA ವಶಕ್ಕೆ
ಪತ್ತೆಯಾದ ಹಣದ ಬಗ್ಗೆ ಆದಾಯ ತೆರಿಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ವಿಚಾರಣೆ ಬಳಿಕ ಖಚಿತ ಮಾಹಿತಿ ತಿಳಿಯಲಿದೆ. ಯಾರಿಗೆ ಸೇರಿದ ಹಣ, ಯಾವ ಕಾರಣಕ್ಕೆ ಸಾಗಿಸಲಾಗುತ್ತಿತ್ತು ಎಂದು ತಿಳಿಯಬೇಕಿದೆ. ಸುಮಾರು 8 ಕೋಟಿ ಹಣ ಜಪ್ತಿ ಮಾಡಲಾಗಿದೆ. ಅಧಿಕಾರಿಗಳು ಹಣ ಎಣಿಕೆ ನಡೆಸುತ್ತಿದ್ದಾರೆ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ