ನನ್ನ ಸಾವಿಗೆ ಇವರೇ ಕಾರಣ: ಪ್ರಾಧ್ಯಾಪಕರ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ, ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ!

ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಬಿಎಎಂಎಸ್ ವಿದ್ಯಾರ್ಥಿನಿ ಲಿಖಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಾಧ್ಯಾಪಕರೊಂದಿಗಿನ ಸಂಬಂಧದ ಕುರಿತ ಸುಳ್ಳು ಅಪಪ್ರಚಾರಕ್ಕೆ ಮನನೊಂದು ಈ ಕಠಿಣ ನಿರ್ಧಾರ ಕೈಗೊಂಡಿದ್ದಾರೆ. ಡೆತ್ ನೋಟ್‌ನಲ್ಲಿ ಪ್ರಾಧ್ಯಾಪಕ ರಾಜು, ಅವರ ಪತ್ನಿ ಹಾಗೂ ಇತರೆ ವಿದ್ಯಾರ್ಥಿನಿಯರ ಹೆಸರನ್ನು ಉಲ್ಲೇಖಿಸಿದ್ದಾರೆ. ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ನನ್ನ ಸಾವಿಗೆ ಇವರೇ ಕಾರಣ: ಪ್ರಾಧ್ಯಾಪಕರ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ, ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ!
ಬಿಎಎಂಎಸ್ ವಿದ್ಯಾರ್ಥಿನಿ ಲಿಖಿತಾ
Edited By:

Updated on: Apr 02, 2026 | 10:00 AM

ಚಿತ್ರದುರ್ಗ, ಏ.2: “ಸ್ಟೂಡೆಂಟ್​​​​ ಲೈಫ್ ಈಸ್​​​ ಗೋಲ್ಡನ್​ ಲೈಫ್” ಎಂಬ ಮಾತಿದೆ. ಕಾಲೇಜು ಜೀವನದಲ್ಲಿ ಎಲ್ಲವೂ ಚಂದ, ಆದರೆ ಅಲ್ಲಿ ಕೆಲವೊಂದು ಅತಿರೇಖದ ವಿಚಾರಗಳು ನಡೆಯುತ್ತದೆ, ವಿದ್ಯಾರ್ಥಿಗಳ ನಡುವೆ ಲವ್, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ನಡುವೆ ಮಿತಿಮೀರಿದ ಸಂಬಂಧಗಳು, ಹೀಗೆ ಹಲವೂ ಘಟನೆಗಳು ನಡೆದಿರುತ್ತದೆ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ನಡುವೆ ಇರಬೇಕಾದ ಗುರು ಹಾಗೂ ಶಿಷ್ಯರ ಸಂಬಂಧಕ್ಕೆ ಬೇರೆ ಅರ್ಥವನ್ನು ಕಲ್ಪಿಸುವ ಚಟ ಈಗ ಕಾಲೇಜಿಗಳಲ್ಲಿ ಶುರುವಾಗಿದೆ. ಇದೀಗ ಇಂತಹದೇ ಒಂದು ವಿಚಾರಕ್ಕೆ ವಿದ್ಯಾರ್ಥಿಯೊಬ್ಬಳ ಜೀವ ಕಳೆದುಕೊಂಡಿದ್ದಾಳೆ. ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಮಲ್ಲಾಡಿಹಳ್ಳಿಯ ಆಯುರ್ವೇದ ಕಾಲೇಜಿನ ಬಿಎಎಂಎಸ್ ವಿದ್ಯಾರ್ಥಿನಿ ಲಿಖಿತಾ (23), ತನ್ನ ಅಧ್ಯಾಪಕರ ಜೊತೆ ಸಂಬಂಧ ಕಲ್ಪಿಸಿ ನಡೆಸಲಾದ ಅಪಪ್ರಚಾರಕ್ಕೆ ಮನನೊಂದು ನೇಣಿಗೆ ಶರಣಾಗಿದ್ದಾರೆ.

ಹೊಳಲ್ಕೆರೆ ಪಟ್ಟಣದ ಬಸವ ಲೇಔಟ್‌ನ ಮನೆಯಲ್ಲಿ ಲಿಖಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಾಧ್ಯಾಪಕ ಡಾ. ರಾಜು ಅವರೊಂದಿಗೆ ಸಂಬಂಧವಿದೆ ಎಂಬ ಸುಳ್ಳು ಸುದ್ದಿ ಹಬ್ಬಿಸಿ, ತನ್ನ ವ್ಯಕ್ತಿತ್ವಕ್ಕೆ ಧಕ್ಕೆ ತಂದಿದ್ದರಿಂದ ನೊಂದಿದ್ದ ವಿದ್ಯಾರ್ಥಿನಿ ಈ ಕಠಿಣ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೂ ಮುನ್ನ ಲಿಖಿತಾ ಬರೆದಿಟ್ಟಿರುವ ಡೆತ್ ನೋಟ್‌ನಲ್ಲಿ ಪ್ರಾಧ್ಯಾಪಕ ಡಾ. ರಾಜು, ಅವರ ಪತ್ನಿ ನಿಶಾ ಹಾಗೂ ಕೆಲವು ವಿದ್ಯಾರ್ಥಿನಿಯರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಇವರ ಕಿರುಕುಳ ಮತ್ತು ಅಪಪ್ರಚಾರವೇ ನನ್ನ ಸಾವಿಗೆ ಕಾರಣ ಎಂದು ಅವರು ಡೆತ್ ನೋಟ್‌ನಲ್ಲಿ ಬರೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಕೋಲಾರ: ಗಂಡನೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಮಹಿಳೆ ಮೇಲೆ ಆ್ಯಸಿಡ್ ದಾಳಿ ಮಾಡಿದ ಪತ್ನಿ

ಘಟನೆಗೆ ಸಂಬಂಧಿಸಿದಂತೆ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಾಧ್ಯಾಪಕ ರಾಜು, ಪತ್ನಿ ನಿಶಾ ಮತ್ತು ಡೆತ್ ನೋಟ್‌ನಲ್ಲಿ ಹೆಸರಿಸಲಾದ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published On - 8:28 am, Thu, 2 April 26

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us