AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರಣಾಂತಿಕ ಖಾಯಿಲೆ, ಮರ್ಯಾದೆಗೆ ಅಂಜಿ ಯುವಕನನ್ನ ಅಂಬ್ಯುಲೆನ್ಸ್​ ನಲ್ಲೇ ಕತ್ತು ಹಿಸುಕಿ ಕೊಂದ್ರಾ?

ಚಿತ್ರದುರ್ಗದ ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಮಾನುಷ ಕೃತ್ಯವೊಂದು ನಡೆದಿರುವ ಬೆಳಕಿಗೆ ಬಂದಿದೆ. ಮಾರಣಾಂತಿಕ ಖಾಯಿಲೆ ಇದೆ ಎಂದು ಮರ್ಯಾದೆಗೆ ಅಂಜಿದ ಅಕ್ಕ, ಒಡ ಹುಟ್ಟಿದ ತಮ್ಮನನ್ನು ಅಂಬ್ಯುಲೆನ್ಸ್​ ನಲ್ಲೇ ಕತ್ತು ಹಿಸುಕಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಮಾರಣಾಂತಿಕ ಖಾಯಿಲೆ ಹಿನ್ನೆಲೆಯಲ್ಲಿ ತಮ್ಮನನ್ನು ಅಕ್ಕ-ಭಾವ ಸೇರಿಕೊಂಡು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ಮಾರಣಾಂತಿಕ ಖಾಯಿಲೆ, ಮರ್ಯಾದೆಗೆ ಅಂಜಿ ಯುವಕನನ್ನ ಅಂಬ್ಯುಲೆನ್ಸ್​ ನಲ್ಲೇ ಕತ್ತು ಹಿಸುಕಿ ಕೊಂದ್ರಾ?
Manjunath
TV9 Web
| Edited By: |

Updated on: Jul 27, 2025 | 3:28 PM

Share

ಚಿತ್ರದುರ್ಗ, (ಜುಲೈ 27): ಚಿತ್ರದುರ್ಗದ (Chitradurga) ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮರ್ಯಾದೆ ಹತ್ಯೆ ನಡೆದಿರುವ ಅಮಾನುಷ ಕೃತ್ಯವೊಂದು ನಡೆದು ಹೋಗಿದೆ. ಮಾರಣಾಂತಿಕ ಖಾಯಿಲೆ ಇದೆ ಎಂದು ಮರ್ಯಾದೆಗೆ ಅಂಜಿದ ಅಕ್ಕ, ಒಡ ಹುಟ್ಟಿದ ತಮ್ಮನ ಕುತ್ತಿಗೆ ಹಿಸುಕಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಆರೋಗ್ಯ ತಪಾಸಣೆ ವೇಳೆ ದುಮ್ಮಿ ಗ್ರಾಮದ ಮಲ್ಲಿಕಾರ್ಜುನನಿಗೆ (23) ಮಾರಣಾಂತಿಕ ಖಾಯಿಲೆ ಇರುವುದು ಪತ್ತೆಯಾಗಿದೆ. ಇದರಿಂದ ಮರ್ಯಾದೆಗೆ ಅಂಜಿದ ಅಕ್ಕ, ಹೆಚ್ಚಿನ ಚಿಕಿತ್ಸೆಗೆಂದು ಆಂಬ್ಯುಲೆನ್ಸ್​​ ನಲ್ಲಿ ಕರೆದುಕೊಂಡು ಹೋಗುತ್ತಿರುವಾಗಲೇ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ ಎನ್ನಲಾಗಿದೆ.

ಜುಲೈ 23ರಂದು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದ ಬಳಿ 23 ವರ್ಷದ ಮಲ್ಲಿಕಾರ್ಜುನ ಕಾರು ಅಪಘಾತವಾಗಿತ್ತು. ಅಪಘಾತದಲ್ಲಿ ಮಂಜುನಾಥನ ಕಾಲಿಗೆ ಗಂಭೀರ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಆಪರೇಷನ್ ಮಾಡುವ ಅಗತ್ಯ ಇತ್ತು. ಹೀಗಾಗಿ ವೈದ್ಯಾಧಿಕಾರಿಗಳು ನಡೆಸಿದ ತಪಾಸಣೆ ವೇಳೆ ಮಾರಣಾಂತಿಕ ಖಾಯಿಲೆ ಇರುವುದು ಬೆಳಕಿಗೆ ಬಂದಿದೆ. ಆಸ್ಪತ್ರೆ ಸಿಬ್ಬಂದಿ ಆತನ ಕುಟುಂಬಸ್ಥರಿಗೆ ಮಾರಣಾಂತಿಕ ಖಾಯಿಲೆ ಇರುವ ಮಾಹಿತಿ ನೀಡಿದ್ದರು. ಅಪಘಾತ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಿತ್ತು. ಆದರೆ ತಮ್ಮನಿಗೆ ಮಾರಣಾಂತಿಕ ಖಾಯಿಲೆ ಇರುವುದನ್ನು ಅಕ್ಕ ಸಹಿಸಲಿಲ್ಲ. ಎಲ್ಲಿ ಮನೆಯ ಮರ್ಯಾದೆ ಹೋಗುತ್ತೋ ಎನ್ನುವ ಕಾರಣಕ್ಕೆ ಮಣಿಪಾಲ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅಕ್ಕ-ಭಾವ ಸೇರಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ; ರಾಮನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ನಂತರ ಮೃತದೇಹವನ್ನು ದುಮ್ಮಿ ಗ್ರಾಮಕ್ಕೆ ತಂದಿದ್ದಾರೆ. ಕುತ್ತಿಗೆಯಲ್ಲಿ ಗಾಯ ಇರೋದನ್ನು ಗಮನಿಸಿದ ಸ್ಥಳೀಯರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಹೊಳಲ್ಕೆರೆ ಠಾಣೆಗೆ ಮೃತನ ತಂದೆ ದೂರು ನೀಡಿದ್ದಾರೆ. ಬೆನ್ನಲ್ಲೇ ಅಸಲಿ ಸತ್ಯ ಗೊತ್ತಾಗಿದೆ.

ಈ ಸಂಬಂಧ ಮೃತ ಮಲ್ಲಿಕಾರ್ಜುನನ ತಂದೆ ನಾಗರಾಜ್ ಅವರು ಹೊಳಲ್ಕೆರೆ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?