AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು

ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ನಡೆದಿದೆ.

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು
ರಸ್ತೆ ಅಪಘಾತ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Aug 13, 2023 | 7:11 AM

Share

ಚಿತ್ರದುರ್ಗ: ಭೀಕರ ಅಪಘಾತ (Accident) ಸಂಭವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ (Chitradurga) ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ನಡೆದಿದೆ. ಖಾಸಗಿ ಬ್ಯಾಂಕ್​​ ನೌಕರ ಸಂಗನಬಸವ (36), ಪತ್ನಿ ರೇಖಾ(29), ಪುತ್ರ ಅಗಸ್ತ್ಯ(7), ಸಂಬಂಧಿ ಭೀಮಾಶಂಕರ್ (26) ಮೃತ ದುರ್ದೈವಿಗಳು. ಮೃತ ದಂಪತಿಯ ಮತ್ತೋರ್ವ ಪುತ್ರ ಆದರ್ಶ (3) ಹಾಗೂ ಪುತ್ರಿ ಅನ್ವಿಕಾ (5) ಮತ್ತು ಕಾರು ಚಾಲಕನಿಗೆ ಗಾಯಗಳಾಗಿದ್ದು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಡಗಿ ಗ್ರಾಮದವರಾದ ಈ ಏಳು ಜನರು ರಜೆ ಹಿನ್ನೆಲೆಯಲ್ಲಿ ಕಾರಿನಲ್ಲಿ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ತೆರಳುತ್ತಿದ್ದರು. ಕುಟುಂಬ ನಿನ್ನೆ (ಆ.12) ರಾತ್ರಿ 11 ಗಂಟೆಗೆ ಮನೆಯಿಂದ ಕಾರಿನಲ್ಲಿ ಹೊರಟಿತ್ತು. ಇಂದು (ಆ.13) ನಸುಕಿನ ಜಾವ 3:30ಕ್ಕೆ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು ಮೂವರಿಗೆ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ‌ ಎಸ್​​​ಪಿ ಕೆ.ಪರಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ 6 ಜನ ಸಾವು ಪ್ರಕರಣ: ಕಾಲರಾ ಮಾದರಿಯ ಬ್ಯಾಕ್ಟೀರಿಯ ಪತ್ತೆ, ಕೇಸ್​ ಬುಕ್

ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಬೆಂಗಳೂರು: ಅಮೃತಹಳ್ಳಿಯ ಟೆಲಿಕಾಂ ಲೇಔಟ್‌ನ ಮನೆಯೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಸುಭಾಷ್ ಕುಮಾರ್(30) ಮೃತ ಯುವಕ.

ಪೊಲೀಸರು ಬರುವ ಮುನ್ನವೇ ಶವವನ್ನು ಕೆಳಗಿಳಿಸಲಾಗಿತ್ತು. ಅಲ್ಲದೇ ನೇಣುಬಿಗಿದುಕೊಂಡಿದ್ದ ಹಗ್ಗವನ್ನು ಸಹೋದರ ಜಿತೇಂದ್ರ ಕತ್ತರಿಸಿ ಎಸೆದಿದ್ದರಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:43 am, Sun, 13 August 23